ದೇಶವಿರೋಧಿ ಚಟುವಟಿಕೆ ನಡೆಸುವವರನ್ನು ಬೇರು ಸಮೇತ ಕಿತ್ತೊಗೆಯಲು ಸಿದ್ಧ: ಸಿಎಂ ಸಿದ್ದರಾಮಯ್ಯ

Date:

ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಬೆಂಗಳೂರಿನ 10 ಕಡೆಗಳಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪದ ಮೇಲೆ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದರು. ಈ ಸಂಬಂಧ ಸಿಸಿಬಿ ಪೊಲೀಸರನ್ನು ಅಭಿನಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು” ಎಂದು ಸಿಎಂ ತಿಳಿಸಿದ್ದಾರೆ.

“ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರಿಗೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ಫೋಟಕ್ಕೆ ಸಂಚು; ಐವರು ಶಂಕಿತ ಉಗ್ರರ ಬಂಧನ

ಕಾಂಗ್ರೆಸ್‌ ಇನ್ನಾದರೂ ತುಷ್ಟೀಕರಣ ರಾಜಕೀಯ ಬಿಡಲಿ: ಬಿಜೆಪಿ

ಇದಕ್ಕೂ ಮುನ್ನಾ ಘಟನೆಯ ಕುರಿತು ಟ್ವೀಟ್‌ ಮಾಡಿದ್ದ ಬಿಜೆಪಿಯು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು.

“ಬೆಂಗಳೂರಿಗೆ ಬಾಂಬಿಡಲು ಮುಂದಾದವರ ರಕ್ಷಣೆ ರಾಜ್ಯ ಸರ್ಕಾರ ಮಾಡದಿರಲಿ. ಕರ್ನಾಟಕದಲ್ಲಿ ಡಿ ಕೆ ಶಿವಕುಮಾರ್‌ ಅವರ ಅವರ ‘ಬ್ರದರ್ಸ್’ ವಿಧ್ವಂಸಕ ಕೃತ್ಯ ಎಸಗಲು ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ. ಸಿದ್ದರಾಮಯ್ಯ ಅವರ ತುಘಲಕ್ ಸರ್ಕಾರದ ಆಗಮನದಿಂದಾಗಿ ಮತಾಂಧ ಜಿಹಾದಿಗಳು ಉಗ್ರರ ಸಖ್ಯ ಬೆಳೆಸಿ ಬಾಲ ಬಿಚ್ಚಿದ್ದಾರೆ‌. ಕಾಂಗ್ರೆಸ್‌ ಇನ್ನಾದರೂ ತುಷ್ಟೀಕರಣ ರಾಜಕೀಯ ಬಿಟ್ಟು, ದೇಶದ ಭದ್ರತೆ, ಸುರಕ್ಷತೆಗೆ ಒತ್ತು ನೀಡಲಿ” ಎಂದು ಬಿಜೆಪಿ ಆಗ್ರಹಿಸಿತ್ತು.

ಬಿಜೆಪಿ ಟ್ವೀಟ್‌ 2

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...