ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸೋಲದೇವನಹಳ್ಳಿಯಲ್ಲಿರುವ ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

- Advertisement -

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆಲಮಂಗಲದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದಕ್ಕೆ ಬಂದಿದ್ದೆ. ಹಾಗೆಯೇ, ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಬಂದೆ. ಲೀಲಾವತಿ ಅವರ ಜಮೀನಿಗೆ ಸಂಬಂಧಪಟ್ಟ ಕೆಲವು ಸಮಸ್ಯೆಗಳಿದ್ದವು. ಅವರು ಅವರು ಆರೋಗ್ಯವಾಗಿದ್ದಾಗ ಅವರ ಮಗ ವಿನೋದ್ ರಾಜ್ ಅವರನ್ನು ಕರೆದುಕೊಂಡು ನನ್ನ ಬಳಿ ಬಂದು ಭೇಟಿ ಮಾಡುತ್ತಿದ್ದರು. ಈಗ ವಯಸ್ಸಾದ ಕಾರಣದಿಂದ ಹಾಸಿಗೆ ಹಿಡಿದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡುವುದಾದರೆ ಸರ್ಕಾರದಿಂದ ಸಕಲ ನೆರವು ನೀಡುವುದಾಗಿ ಸಿಎಂ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಲೀಲಾವತಿ ಅವರು ಒಳ್ಳೆಯ ನಟಿಯಾಗಿದ್ದರು. ಅವರು ನೈಜ ಕಲಾವಿದೆಯಾಗಿದ್ದರು. ಅವರ ಮಗ ವಿನೋದ್‌ರಾಜ್ ಅವರಿಗೆ ಚೆನ್ನಾಗಿ ನೋಡಿಕೊಳ್ಳಿ ಎಂದು ತಿಳಿಸಿದ್ದೇನೆ. ಏನಾದರೂ ನೆರವು ಬೇಕಿದ್ದರೆ ಸರ್ಕಾರದ ಪರವಾಗಿ ನೀಡುವುದಾಗಿ ಸಿಎಂ ಅವರು ಲೀಲಾವತಿ ಅವರ ಮಗ ವಿನೋದ್ ರಾಜ್ ಅವರಿಗೆ ತಿಳಿಸಿದರು.

ಈ ವೇಳೆ ಸಿಎಂ ಅವರಲ್ಲಿ ನಮ್ಮ ಭಾಗದ ರೈತರಿಗೆ ಅರಣ್ಯ ಇಲಾಖೆಯಿಂದ ಆಗುತ್ತಿರುವ ಸಮಸ್ಯೆಯ ಬಗ್ಗೆ ನಮ್ಮ ತಾಯಿ ತಮ್ಮ ಗಮನಕ್ಕೆ ತಂದಿದ್ದರು. ಅವರನ್ನು ಒಕ್ಕಲೆಬ್ಬಿಸಬಾರದು ಎಂದು ತಾಯಿಯವರು ಹೋರಾಟ ಮಾಡಿದ್ದರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಲೀಲಾವತಿ ಮಗ ವಿನೋದ್ ರಾಜ್ ನೆನಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ರೈತರಿಗೆ ಏನೂ ತೊಂದರೆಯಾಗದಂತೆ ಹಾಗೂ ಎಲ್ಲ ರೀತಿಯ ರಕ್ಷಣೆ ನೀಡುವುದಾಗಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...