ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು, ಫೀಲ್ಡ್‌ಗೆ ಹೋಗಿ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

Date:

Advertisements
  • ಮುಂಗಾರು ಆರಂಭ ಹಿನ್ನೆಲೆ ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ
  • ಜನ ಬದಲಾವಣೆ ಬಯಸಿದ್ದು, ನಿರೀಕ್ಷೆಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

“ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ. ನಾನು ಕೇವಲ ಸೂಚನೆ ಕೊಡೋದಿಲ್ಲ, ಎಚ್ಚರಿಕೆ ಕೊಡುತ್ತಿದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ” ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

“ರಾಜ್ಯದ ಕೆಲವು ಭಾಗದಲ್ಲಿ ಮಳೆ ಆಗುತ್ತಿದ್ದು, ಬಿತ್ತನೆ ಶುರುವಾಗಿದೆ. ಜೂನ್‌ ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪೂರ್ವ ಮುಂಗಾರು ಪ್ರಾರಂಭವಾಗಿದೆ. ಭಾರೀ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಹಾನಿಗಳು ಸಂಭವಿಸಿವೆ. ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು” ಎಂದು ನಿರ್ದೇಶನ ನೀಡಿದರು.

Advertisements

“ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು” ಎಂದು ತಿಳಿಸಿದರು.

“ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವುಗೊಳಿಸಬೇಕು. ವಿದ್ಯುಚ್ಛಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ” ಎಂದು ನಿರ್ದೇಶಿಸಿದರು.

“ಯಾವುದೇ ಕಾರಣಕ್ಕೂ ಕರ್ತವ್ಯಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು” ಎಂದು ಎಚ್ಚರಿಕೆ ನೀಡಿದರು.

“ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು.

ಈ ಸುದ್ದಿ ಓದಿದ್ದೀರಾ? ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ?: ಡಿಕೆ ಶಿವಕುಮಾರ್ ತರಾಟೆ

“ಜಿಲ್ಲಾಧಿಕಾರಿಗಳು, ಸಿಇಒಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜಿಲ್ಲಾಧಿಕಾರಿಗಳು ತಾಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು” ಎಂದು ಸೂಚಿಸಿದರು.

“ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ-ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು” ಎಂದು ನಿರ್ದೇಶನ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X