ಸಿಎಂ ಅಧಿಕಾರಾವಧಿ ವಿಚಾರ | ಎಂಬಿ ಪಾಟೀಲ್‌ಗೆ ಎಚ್ಚರಿಕೆ ನೀಡಿದ ಸಂಸದ ಡಿಕೆ ಸುರೇಶ್

Date:

  • ರಾಜ್ಯ ಕಾಂಗ್ರೆಸ್ ಶಾಂತಿ ಕದಡಿದ ಸಿಎಂ ಅಧಿಕಾರಾವಧಿ ವಿಚಾರ
  • ಶಾಸಕರ ನಡುವೆ ಪರ ವಿರೋಧ ಚರ್ಚೆ, ಬೇಡಿಕೆ ಅಸಮಾಧಾನ

ಐದು ವರ್ಷವೂ ಸಿದ್ಧಾರಾಮಯ್ಯ ಸಿಎಂ ಎಂಬ ಹೇಳಿಕೆ ನೀಡಿದ್ದ ಸಚಿವ ಎಂಬಿ ಪಾಟೀಲ್‌ಗೆ ಸಂಸದ ಡಿಕೆ ಸುರೇಶ್ ನೇರ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್, ಹೈ ಕಮಾಂಡ್ ವಲಯದಲ್ಲಾಗಿರುವ ನಿರ್ಧಾರದ ಬಗ್ಗೆ ಈಗ ಚರ್ಚೆ ಬೇಡ. ಈ ವಿಷಯದಲ್ಲಿ ಎಂಬಿ ಪಾಟೀಲ್ ಅವರಿಗೆ ತೀಕ್ಷ್ಣವಾಗಿ ಉತ್ತರ ಕೊಡಬಲ್ಲೆ, ಎಚ್ಚರಿಕೆಯನ್ನೂ ಕೊಡಬಲ್ಲೆ. ಆದರೆ ಈಗಲೇ ಅದೆಲ್ಲ ಬೇಡ ಎಂದರು.

ಹಾಗೆಯೇ ಮಾಧ್ಯಮದವರ ಮೂಲಕ ಎಂಬಿ ಪಾಟೀಲ್ ಗೆ ಸಂದೇಶ ನೀಡಿದ ಸಂಸದ ಸುರೇಶ್, ಎಂಬಿ ಪಾಟೀಲ್‌ಗೆ ಹೇಳಿ, ಇವೆಲ್ಲವು ಬೇಡ ಎಂದು. ಈ ವಿಚಾರದಲ್ಲಿಅವರಿಗೆ ಹೆಚ್ಚಿನ ಮಾಹಿತಿ ಬೇಕು ಅಂದರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಬಳಿ ಮಾತನಾಡಲಿ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬೆಳವಣಿಗೆ ನಡುವೆಯೇ ಡಿಸಿಎಂ ಶಿವಕುಮಾರ್ ಅವರಿಗೂ ಸಿಎಂ ಸ್ಥಾನ ಕೊಡುವಂತೆ ಕುಣಿಗಲ್ ಶಾಸಕ ರಂಗನಾಥ್ ಪಕ್ಷ ಪ್ರಮುಖರನ್ನು ಆಗ್ರಹಿಸಿದರು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೋಡೆತ್ತುಗಳಂತೆ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ.

ಅದೇ ರೀತಿ ಕಾಂಗ್ರೆಸ್ ಇಷ್ಟು ಬಹುಮತ ಬರಲು ಡಿಕೆ ಶಿವಕುಮಾರ್ ಅವರ ಪಾತ್ರ ಕೂಡ ದೊಡ್ಡದಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಅವಕಾಶವನ್ನ ಕೊಡಿ ಎಂದರು.

ಈ ಸುದ್ದಿ ಓದಿದ್ದೀರಾ?:ಐದು ವರ್ಷ ಸಿಎಂ ಸಿದ್ದರಾಮಯ್ಯ | ವರಿಷ್ಠರು ಹೇಳಿದ್ದನ್ನೇ…

ನಾನು ಈ ಹಿಂದೆಯೂ ಈ ಮಾತನ್ನು ಹೇಳಿ, ಪ್ರಮುಖರನ್ನು ಆಗ್ರಹಿಸಿದ್ದೆ, ಈಗಲೂ ಅದನ್ನೇ ಹೇಳುತ್ತಿದ್ದೇನೆ. ಕಾಂಗ್ರೆಸ್ ಒಂದು ಸಮುದ್ರ ಇದ್ದಂತೆ. ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸಿಎಂ ಆಗಲು ಅವಕಾಶ ಮಾಡಿಕೊಡುತ್ತದೆ ಅನ್ನೋ ವಿಶ್ವಾಸ ಇದೆ ಎಂದು ರಂಗನಾಥ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಗಾರು ಅಧಿವೇಶನ | ಸಾವಿರಕ್ಕೂ ಅಧಿಕ ಪರವಾನಗಿ ಹೊಂದಿರುವ ಸರ್ವೇಯರ್‌ ಹುದ್ದೆ ಭರ್ತಿ: ಸಚಿವ ಕೃಷ್ಣ ಬೈರೇಗೌಡ

ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ....

ವಾಲ್ಮೀಕಿ ನಿಗಮ ಅಕ್ರಮ | ಹಣ ಲೂಟಿ ಮಾಡಲು ನಕಲಿ ಹುದ್ದೆ ಸೃಷ್ಟಿ!

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ.ಗಳನ್ನು ಲೂಟಿ...

ಮುಂಗಾರು ಅಧಿವೇಶನ ಆರಂಭ, ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ; ಸಿಎಂ ತಿರುಗೇಟು

ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್​ಸಿ...