ಚಿಕ್ಕಮಗಳೂರು l 12.5 ಕೋಟಿ ರೂ. ವೆಚ್ಚದಲ್ಲಿ 20 ಹೊಸ ಆರೋಗ್ಯ ಕ್ಷೇಮ ಕೇಂದ್ರಗಳು ಸ್ಥಾಪನೆ; ಸಚಿವ ದಿನೇಶ್ ಗುಂಡೂರಾವ್

Date:

ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಜಯಪುರದಲ್ಲಿ ನೂರು ಬೆಡ್ ಆಸ್ಪತ್ರೆಯನ್ನು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಉದ್ಘಾಟನೆ ನಡೆಸಿದರು.

- Advertisement -

ಚಿಕ್ಕಮಗಳೂರು ಜಿಲ್ಲೆಗೆ ಸುಮಾರು 12.5 ಕೋಟಿ ರೂ. ವೆಚ್ಚದಲ್ಲಿ 20 ಹೊಸ ಆರೋಗ್ಯ ಕ್ಷೇಮ ಕೇಂದ್ರಗಳು ಮಂಜೂರಾಗಿದ್ದು, ಒಟ್ಟು 37.65 ಕೋಟಿ ರೂ. ವೆಚ್ಚದ ಇಲ್ಲಿನ ಉದ್ದೇಶಿತ ಆಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣ ಗೊಳಿಸುವಂತೆ ಹಾಗೂ ಬಾಳೆಹೊನ್ನೂರಿಗೆ 50 ಹಾಸಿಗೆಯ ಆಸ್ಪತ್ರೆ ಕಟ್ಟಡಕ್ಕೆ ಬೇಡಿಕೆ ಬಂದಿದ್ದು, ಈ ತಕ್ಷಣಕ್ಕೆ ಈ ಯೋಜನೆಗೆ ಅವಕಾಶವಾಗದಿದ್ದರೂ ಮುಂದಿನ ಆಯವ್ಯಯದಲ್ಲಿ ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಎರಡು ಬಾರಿ ಕಾರ್ಯಕ್ರಮ ನಿಗದಿಯಾಗಿತ್ತು. ಮಳೆಯ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಇದೀಗ ಶಂಕುಸ್ಥಾಪನೆ ನೆರವೇರಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ. ಆಸ್ಪತ್ರೆ ಕಟ್ಟಡಕ್ಕೆ ಸಂಬಂಧಿಸಿದಂತೆ ಈ ಭಾಗದ ಬಹುದಿನಗಳ ಬೇಡಿಕೆಯಾದ ಒತ್ತುವರಿ ಸಮಸ್ಯೆ ಬಗೆಹರಿಯುವ ನಿರೀಕ್ಷೆ ಇದೆ. ರಸ್ತೆ ಮಲೆನಾಡಿನಲ್ಲಿ ಬಹಳಷ್ಟು ರಸ್ತೆಗಳು ಗುಂಡಿ ಬಿದ್ದಿವೆ ಎಂದು ಶಾಸಕ ಟಿ.ಡಿ.ರಾಜೇಗೌಡ ಅವರು ಕಾರ್ಯಕ್ರಮದಲ್ಲಿ ಮಾತಾಡಿದರು.

ವಸ್ತಾರೆಯಿಂದ ಶೃಂಗೇರಿಗೆ 95 ಕೋಟಿ ರೂ.ಗಳು, ಜಯಪುರದಿಂದ ಕೊಪ್ಪಕ್ಕೆ ರಸ್ತೆ ಅಗಲೀಕರಣವೂ ಸೇರಿದಂತೆ ಗುಂಡಿ ಮುಚ್ಚಲು 11 ಕೋಟಿ ರೂ.ಗಳು, ಕೋರ್ಲುಕೊಪ್ಪದಿಂದ ಕೊಪ್ಪಕ್ಕೆ ಸುಮಾರು 19.5 ಕೋಟಿ ರೂ.ಗಳನ್ನು ಉಸ್ತುವಾರಿ ಸಚಿವರು ಒದಗಿಸಿದ್ದಾರೆ. ಮಳೆ ಮುಗಿದ ಬಳಿಕ ಈ ಕಾಮಗಾರಿ ನಿರ್ವಹಿಸಲಾಗುವುದು. ನೀರು ನುಗ್ಗುತ್ತಿರುವ ಗಾಂಧಿ ಮೈದಾನದಲ್ಲಿ ತಡೆಗೋಡೆ ನಿರ್ಮಿಸಲು ಸಹ ಹಣವನ್ನು ಒದಗಿಸಿದ್ದಾರೆ.

ಗ್ರಾಮೀಣ ಪ್ರದೇಶದ ಜನಸಾಮಾನ್ಯರು ಮತ್ತು ಬಡಜನತೆಯ ಆರೋಗ್ಯ ರಕ್ಷಣೆಗೆ ಮೂಲ ಸೌಕರ್ಯದ ಅವಶ್ಯಕತೆ ಇದ್ದು, ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾ ಬಂದಿದೆ. ಪ್ರಸ್ತುತ ಸನ್ನಿವೇಶದಲ್ಲಿ ಆರೋಗ್ಯಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕಾಗಿದ್ದರೂ ಖಾಸಗಿ ಆಸ್ಪತ್ರೆಗಳು ದುಬಾರಿಯಾಗಿ ಗ್ರಾಮೀಣ ಪ್ರದೇಶದ ಜನರಿಗೆ ತೀರಾ ಸಮಸ್ಯೆಯಾಗುತ್ತಿರುವುದರಿಂದ ಈ ಆಸ್ಪತ್ರೆಯ ಅವಶ್ಯಕತೆ ಇಲ್ಲಿಗೆ ಇತ್ತು. ಈ ನಿಟ್ಟಿನಲ್ಲಿ ಯೋಜನೆ ಕಾರ್ಯಗತವಾಗುವ ಕಾಲ ಸನ್ನಿಹಿತವಾಗಿದೆ ಎಂದರು.

ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ವಿದ್ಯುತ್ ಸಮಸ್ಯೆ ಬಗ್ಗೆ ಹರಿಸಲು ಹೊಸ ಯೋಜನೆ ಕೈಗೊಂಡಿದ್ದೇವೆ; ಸಚಿವ ಕೆ.ಜೆ ಜಾರ್ಜ್

ಈ ಸಂದರ್ಭದಲ್ಲಿ ಡಾ.ಕೆ.ಪಿ.ಅಂಶುಮಂ ಆರೋಗ್ಯ ಇಲಾಖೆ ಮೈಸೂರು ವಿಭಾಗ ಜಂಟಿ ನಿರ್ದೇಶಕಿ ಮಲ್ಲಿಕಾ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್,ಎಸ್,ಕೀರ್ತನಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ಉಪವಿಭಾಗಾಧಿಕಾರಿ ಸುದರ್ಶನ್ ಮತ್ತು ಜನಪ್ರತಿನಿಧಿಗಳು ಹಾಗೂ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...