ಚಿಕ್ಕಮಗಳೂರು l ಕಾಡಿನ ಜನವಸತಿ ಸ್ಥಳಾಂತರಿಸುವ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ; ಅರಣ್ಯ ಸಚಿವ ಈಶ್ವರ ಖಂಡ್ರೆ

Date:

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹಾಗೂ ಪರಿಹಾರ ಬಗ್ಗೆ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ನೇತೃತ್ವದ ನಿಯೋಗವು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

- Advertisement -

‘ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಳವಾಗಿದ್ದು, ಕಾಡಿನೊಳಗಿರುವ ಜನವಸತಿಗಳನ್ನು ಸ್ಥಳಾಂತರಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ’ ಕುದುರೆಮುಖ ರಾಷ್ಟ್ರೀಯ ಉದ್ಯಾನದ ಕಾರ್ಕಳ ವ್ಯಾಪ್ತಿಯ ನಿವಾಸಿಗಳ ಪುನರ್ವಸತಿ ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ 2005ರ ಸುತ್ತೋಲೆಯನ್ನು ಪುನ‌ರ್ ಪರಿಶೀಲಿಸುವಂತೆ ಕೋರುವಂತೆ ಕೇಂದ್ರಕ್ಕೆ 3ಬಾರೀ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಮಸ್ಯೆಯನ್ನೂ ಆದಷ್ಟು ಬೇಗ  ಪರಿಹರಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

‘ಅರಣ್ಯದೊಳಗಿರುವ ಜನವಸತಿಗಳ ಸ್ಥಳಾಂತರದಿಂದ ಅರಣ್ಯವಾಸಿಗಳು ಮತ್ತು ಅವರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರುತ್ತಾರೆ. ಅಲ್ಲದೇ, ಮಾನವ-ವನ್ಯಜೀವಿ ಸಂಘರ್ಷವೂ ಕಡಿಮೆ ಆಗುತ್ತದೆ. ಸ್ಥಳಾಂತರಕ್ಕೆ ಪರಿಹಾರ ನೀಡಬೇಕಾಗುತ್ತದೆ. ಇದನ್ನು ಒಂದೇ ಬಾರಿಗೆ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಮಾಡಬೇಕಾಗುತ್ತದೆ. ಬಜೆಟ್‌ನಲ್ಲಿ ಇದಕ್ಕೆ ಹಣ ಮೀಸಲಿಟ್ಟರೆ ಸಾಧ್ಯವಾಗುತ್ತದೆ. ಈ ಕುರಿತು ಮುಖ್ಯಮಂತ್ರಿಯವರ ಜತೆ ಚರ್ಚಿಸುತ್ತೇನೆ’ ಹಾಗೆಯೇ,

ಹಿಂದೆ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿತ್ತು. ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಇದನ್ನು ನಿಯಂತ್ರಿಸಿದೆ. ಉತ್ತಮ ಪರಿಸರವಿರುವುದರಿಂದ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆದರೆ, ಹೆಚ್ಚುತ್ತಿರುವ ವನ್ಯಜೀವಿಗಳ ಸಂಖ್ಯೆಗೆ ಅನುಗುಣವಾಗಿ ಕಾಡಿನ ಪ್ರದೇಶ ಹೆಚ್ಚುತ್ತಿಲ್ಲ. ಇದರಿಂದ ಸಮಸ್ಯೆ ಉಲ್ಬಣಿಸುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತಾಡಿದರು. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ರಸ್ತೆ ಅಪಘಾತ; ಇಬ್ಬರು ಸಾವು; ಮೂವರು ಗಂಭೀರ

1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಇದ್ದ ಹುಲಿಗಳ ಸಂಖ್ಯೆ ಇಂದು 170 ಕ್ಕೂ ಹೆಚ್ಚಾಗಿದೆ. ಹೀಗಾಗಿ, ದುರ್ಬಲ ಹುಲಿಗಳು ಕಾಡಿನಿಂದ ಹೊರಬರುತ್ತಿವೆ. ಇಲಾಖೆ ಸಿಬ್ಬಂದಿ ಹಗಲು-ರಾತ್ರಿ ಶ್ರಮಿಸುತ್ತಿದ್ದರೂ ಮಾನವ-ವನ್ಯಜೀವಿ ಸಂಘರ್ಷದ ಘಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಹೆಚ್ಚಿಸಲು ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಯಲಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...