ಚಿಕ್ಕಮಗಳೂರು | KPS ಮ್ಯಾಗ್ನೆಟ್ ಯೋಜನೆ ಕೈಬಿಡದಿದ್ದರೆ ರಾಜ್ಯವ್ಯಾಪಿ ಹೋರಾಟ; AIDSO ಎಚ್ಚರಿಕೆ

Date:

KPS ಮ್ಯಾಗ್ನೆಟ್‌ ಹೆಸರಿನಲ್ಲಿ ತಂದಿರುವ ಯೋಜನೆಯನ್ನು ಸರ್ಕಾರ ಕೂಡಲೇ ಹಿಂಪಡೆಯದಿದ್ದರೆ ರಾಜ್ಯವ್ಯಾಪಿ ಉಗ್ರ ಹೋರಾಟ ಮಾಡಲಾಗುವುದು ಎಂದು AIDSO (All India Democratic Students’ Organization) ಎಚ್ಚರಿಸಿದೆ.

- Advertisement -

ಕರ್ನಾಟಕ ರಾಜ್ಯ ಸರ್ಕಾರವು ಈ ಯೋಜನೆಯಡಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6,000 KPS ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ. ಗಣಿಬಾಧಿತ ಜಿಲ್ಲೆಗಳಲ್ಲಿ 100, ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 200 ಹಾಗೂ ಇತರೆ ಭಾಗದಲ್ಲಿ 500 ಶಾಲೆಗಳನ್ನು ಗುರುತಿಸಿ ಆದೇಶ ಹೊರಡಿಸಲಾಗಿದೆ. ತಾಲೂಕು ಒಂದರಲ್ಲೇ 237 ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಪಟ್ಟಿ ಮಾಡಲಾಗಿದೆ. 226 ಗ್ರಾ.ಪಂ ಶಾಲೆಗಳಿಗೆ 1002 ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ, ನೂರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲು ತಯಾರಾಗಿದ್ದಾರೆ. ಇದರಿಂದ ಸಾವಿರಾರು ಬಡ ಮಕ್ಕಳ ಶಿಕ್ಷಣವನ್ನು ಕಸಿಯಲು ಮುಂದಾಗಿದೆ ಎಂದು ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಈ ಯೋಜನೆಯನ್ನು Pilot project ಅಡಿ ಜಾರಿಗೊಳಿಸಲು ರಾಮನಗರದ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಹೊಂಗನೂರಿನಿಂದ 6 ಕಿಮೀ ವ್ಯಾಪ್ತಿಯೊಳಗಿರುವ, 77 ವಿದ್ಯಾರ್ಥಿಗಳಿರುವ ಹೊಡಿಕೆ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, 82 ದೊಡ್ಡಿ ಶಾಲೆ, 31 ಅಮ್ಮಳ್ಳಿ ದೊಡ್ಡಿ ಶಾಲೆ, 100 ಸಂತೆಮೊಗೇನಹಳ್ಳಿ ಶಾಲೆ, 20 ಮೊಗೇನಹಳ್ಳಿ ದೊಡ್ಡಿ, 80 ವಿದ್ಯಾರ್ಥಿಗಳಿರುವ ಸುಣ್ಣಘಟ್ಟ ಶಾಲೆಗಳನ್ನು ಹೊಂಗನೂರಿನ  KPSಗೆ ತುರ್ತಾಗಿ ವಿಲೀನಗೊಳಿಸಿ ಕ್ರಮಕೈಗೊಳ್ಳಲು ಆದೇಶ ನೀಡಲಾಗಿದೆ.

ಯಾವುದೇ ಕಾರಣಕ್ಕೂ ತಮ್ಮ ಊರಿನ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ ಮತ್ತು ಅದೇ ಶಾಲೆಗಳನ್ನು ಅಭಿವೃದ್ಧಿಪಡಿಸಿ ಊರಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಬೇಕೆಂದು ಸುತ್ತ ಹಳ್ಳಿಗಳ ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. ಇದೇ ರೀತಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಡಿ ರಾಜ್ಯದ 40,000ಕ್ಕೂ ಅಧಿಕ ಶಾಲೆಗಳು ವಿಲೀನಗೊಳ್ಳುತ್ತವೆ. ಸಮುದಾಯ, ಹಳ್ಳಿಗಳ ನಡುವಿನ ಶಾಲೆ ಊರು ದಾಟಿ ಪಕ್ಕದೂರಿಗೆ ಹೋಗುತ್ತದೆ. ಹಾಗೆಯೇ, ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದು ಸುಭಾಷ್ ಆರೋಪಿಸಿದರು.

ವಿಲೀನದ ನೆಪದಲ್ಲಿ ಮುಚ್ಚುವ ಶಾಲಾ ಕಟ್ಟಡಗಳನ್ನು ಇತರ ಕೆಲಸಗಳಿಗೆ ವಿನಿಯೋಗಿಸಲು ಸರ್ಕಾರವು ಮುಂದಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಸೂದೆ ಮಂಡಿಸುವುದಾಗಿ ಹೇಳಿತ್ತು. ಪ್ರತಿಷ್ಠಿತ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಸರ್ಕಾರಿ ಶಾಲಾ ಕಟ್ಟಡಗಳನ್ನು ಸ್ವಸಹಾಯ ಗುಂಪುಗಳಿಗೆ ನೀಡಲಾಗುವುದೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಒಂದೇ ಒಂದು ಶಾಲೆಯನ್ನು ಮುಚ್ಚದಿದ್ದ ಮೇಲೆ ಸರ್ಕಾರಿ ಶಾಲೆಗಳನ್ನು ಬೇರೆ ಉದ್ದೇಶಕ್ಕೆ ವಿನಿಯೋಗಿಸುವ ಪ್ರಶ್ನೆ ಎಲ್ಲಿಂದ ಉದ್ಭವಿಸುತ್ತದೆ? ಹಾಗೆಯೇ, ಈ ದೇಶದಲ್ಲಿ ಶಿಕ್ಷಣಕ್ಕಾಗಿ ಧ್ವನಿಯೆತ್ತಿದ ಮಹಾನ್ ನವೋದಯ ಚಿಂತಕ ಈಶ್ವರ್ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ, ಸಾವಿತ್ರಿಬಾಯಿ ಫುಲೆ  ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ನಮ್ಮ ನಾಡಿನ ಕುವೆಂಪು, ಕುದ್ಮುಲ್ ರಂಗರಾವ್, ಪಂಡಿತ್ ತಾರಾನಾಥ್ ಮುಂತಾದ ಮಹನೀಯರ ಹೆಸರುಗಳನ್ನು ಶಾಲೆಗೆ ಇಡಲಾಗುತ್ತಿತ್ತು. ಈಗ ಹಣ ಕೊಟ್ಟು ಯಾರು ಕಟ್ಟಡ ನಿರ್ಮಿಸುತ್ತಾರೋ ಅಂತಹ ವ್ಯಕ್ತಿಗಳ ಹೆಸರಿಡುತ್ತಿದ್ದಾರೆಂದು ಎಐಡಿಎಸ್ಒ ಸಂಚಾಲಕಿ ಚೈತ್ರ ಆರೋಪಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಎಸ್ಪಿ ವಿಕ್ರಂ ಅಮಟೆ ವರ್ಗಾವಣೆ; ನೂತನ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ

ನಾಡಿನ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಹಾಗೂ ಶಿಕ್ಷಣ ಪ್ರೇಮಿ ಜನತೆಗೆ ಸರ್ಕಾರವು ಸವಾಲು ಎಸಗಿದೆ. ಇತಿಹಾಸದ ಎಲ್ಲ ಮಹಾನ್ ವ್ಯಕ್ತಿಗಳ ಕರೆಗೆ ಓಗೊಟ್ಟು ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟಕ್ಕೆ ಮುಂದಾಗುವಂತೆ ಹೋರಾಟಕ್ಕೆ ಕರೆ ನೀಡಲಾಗಿದೆ. ಈ ವೇಳೆ AIDSO ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ಸಂಚಾಲಕಿ ಚೈತ್ರ ಹಾಗೂ ಸಹಸಂಚಾಲಕಿ ಸುಷ್ಮಾ ಉಪಸ್ಥಿತರಿದ್ದರು.

ಚಿಕ್ಕಮಗಳೂರಿನ ಹಳ್ಳಿ ಹಳ್ಳಿಗಳಲ್ಲೂ ಈ ಹೋರಾಟ ಮುಂದುವರೆಯುತ್ತದೆ. ನಿಮ್ಮ ಹಳ್ಳಿಯಲ್ಲೂ ಸರ್ಕಾರಿ ಶಾಲೆ ಮುಚ್ಚುತ್ತಿದ್ದರೆ ತಪ್ಪದೆ ಈ ಕೆಳಗಿನ ನಂಬರನ್ನು ಸಂಪರ್ಕಿಸಿ ಮಾಡಿ. ( ಚೈತ್ರ-8088548485)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

ಹಾವೇರಿ | ಪುಸ್ತಕವನ್ನು ಪರಿಚಯಿಸುವ ಸಾಮರ್ಥ್ಯ ಗ್ರಂಥಪಾಲಕರಿಗೆ ಇದೆ: ಡಾ. ರಾಘವೇಂದ್ರ ಪತ್ತೇಪುರ

"ನಾನು ಓದುವ ಕಾಲದಲ್ಲಿ ಗ್ರಂಥಾಲಯದಲ್ಲಿ ಓದುವಾಗ,  ಸಂಶೋದನೆಗೆ ಸಂಬಂಧಿಸಿ ಪುಸ್ತಕಗಳು ಕಡಿಮೆ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ...