ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಅವಕಾಶ ನೀಡುವಂತೆ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸದನದಲ್ಲಿ ಈಗಾಗಲೇ ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಸಮಸ್ಯೆಗಳ ಕುರಿತು ಚರ್ಚೆಗೆ ಅವಕಾಶ ನೀಡಲಾಗಿದೆ. ಅದೇ ರೀತಿಯಾಗಿ ಮಲೆನಾಡಿನ ಗಂಭೀರ ಸಮಸ್ಯೆಗಳ ಕುರಿತು ಚರ್ಚೆ ನಡೆಯುವುದು ಅಗತ್ಯವಿದೆ ಎಂದು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್ ಡಿ ತಮ್ಮಯ್ಯ ಒತ್ತಾಯಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಎಸ್ಐಟಿ ತನಿಖೆ: ಬಿಜೆಪಿ, ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕು; ದಸಂಸ ಆಗ್ರಹ
ಈ ಕುರಿತು 15 ಶಾಸಕರು ಸಹಿ ಮಾಡಿ ಮನವಿ ಪತ್ರ ಸಲ್ಲಿಸಿರುವುದಾಗಿ ತಮ್ಮಯ್ಯ ತಿಳಿಸಿದರು. ಮಲೆನಾಡಿನ ಅರಣ್ಯ ವಿಸ್ತಾರ, ವನ್ಯಜೀವಿ ದಾಳಿ, ರೈತರ ಆರ್ಥಿಕ ಹಾನಿ, ಜನರ ದೈನಂದಿನ ತೊಂದರೆಗಳ ಕುರಿತು ಗಂಭೀರವಾಗಿ ತೆಗೆದುಕೊಂಡು ಸದನದಲ್ಲಿ ಚರ್ಚಿಸಿ ಶಾಶ್ವತವಾಗಿ ಪರಿಹರಿಸಬೇಕು ಎಂದು ಶಾಸಕರಾದ ಹೆಚ್ ಡಿ ತಮ್ಮಯ್ಯ ಒತ್ತಾಯಿಸಿದ್ದಾರೆ.