ಚಿಕ್ಕಮಗಳೂರು | ವಕೀಲನ ಮೇಲೆ ಪೊಲೀಸ್ ದೌರ್ಜನ್ಯದ ತನಿಖೆ ಸಿಐಡಿ ಹೆಗಲಿಗೆ

Date:

ಚಿಕ್ಕಮಗಳೂರು ನಗರ ಪೊಲೀಸ್​ ಠಾಣೆಯಲ್ಲಿ ಯುವ ವಕೀಲನೋರ್ವನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಪ್ರಕರಣ ಸಂಬಂಧ ಡಿವೈಎಸ್​ಪಿ ಶೈಲೇಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು. ಇಂದು(ಡಿ.3) ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿಲಾಗಿದೆ ಎಂದು ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಪೊಲೀಸರು ಬೈಕ್‌ನಲ್ಲಿ ಬುರತ್ತಿದ್ದಾಗ ಹೆಲ್ಮೆಟ್ ಹಾಕದ ವಿಚಾರಕ್ಕೆ ಸಂಬಂಧಿಸಿದಂತೆ ಯುವ ವಕೀಲ ಪ್ರೀತಮ್ ಎಂಬುವವರ ಮೇಲೆ ಪಿಎಸ್​ಐ, ಎಎಸ್ಐ, ಹೆಡ್ ಕಾನ್​ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿತ್ತು. ಇದನ್ನು ಖಂಡಿಸಿ ವಕೀಲರು ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದಾದ ಬೆನ್ನಲ್ಲೇ ಆರು ಮಂದಿ ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದ್ದಲ್ಲದೇ, ಸೇವೆಯಿಂದ ಕೂಡ ಅಮಾನತು ಮಾಡಲಾಗಿತ್ತು. ಈ ಬಗ್ಗೆ ಹೈಕೋರ್ಟ್‌ ಕೂಡ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು.

ಈ ನಡುವೆ, ವಕೀಲರು ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಎದುರಲ್ಲೇ ಆಕ್ರೋಶ ಹೊರಹಾಕಿದ್ದರು.

ಪೊಲೀಸರ ಪ್ರತಿಭಟನೆ ಕೂಡ ತೀವ್ರವಾಗುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ವಕೀಲರ ವಿರುದ್ಧ ಸೆಕ್ಷನ್​ 503, 406, 353, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?
ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ನ.30ರಂದು ಹೆಲ್ಮೆಟ್ ಹಾಕದ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಪ್ರೀತಮ್ ಎಂಬುವವರ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್, ಒಬ್ಬ ಎಎಸ್​ಐ, ಒಬ್ಬ ಹೆಡ್ ಕಾಸ್​ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳು ಸೇರಿ ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ತಲೆಮರೆಸಿಕೊಂಡಿದ್ದು, ಇವರ ಬಂಧನಕ್ಕೆ ಚಿಕ್ಕಮಗಳೂರು ಡಿವೈಎಸ್‌ಪಿ ಶೈಲೇಂದ್ರ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಈ ಪ್ರಕರಣವೀಗ ವಕೀಲರು V/s ಪೊಲೀಸ್ ಆಗಿ ಪರಿವರ್ತನೆಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ವಹಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...