ಚಿಕ್ಕಮಗಳೂರು | ಕಾಡಾನೆ ಸೆರೆ ಕಾರ್ಯಾಚರಣೆ ಆರಂಭ 

Date:

ಚಿಕ್ಕಮಗಳೂರು ಜಿಲ್ಲೆ ಎನ್. ಆರ್ ಪುರ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಕೂಲಿ ಕಾರ್ಮಿಕ ಯಲ್ಲಪ್ಪ ಕಾಡಾನೆ ದಾಳಿ ನಡೆಸಿ ಹತ್ಯೆ ಮಾಡಿತ್ತು ಈ ಕುರಿತು  ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.

- Advertisement -

ಮುಖ್ಯ ವನ್ಯಜೀವಿ ಪರಿಪಾಲಕರ ಆದೇಶದಂತೆ, ಈ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಮೂರು ಕಾಡಾನೆಗಳ ಪೈಕಿ ಒಂದು ಕಾಡಾನೆಯನ್ನು ಸೆರೆಹಿಡಿಯುವುದು ಮತ್ತು ಮತ್ತೊಂದಕ್ಕೆ ರೇಡಿಯೋ ಕಾಲ‌ರ್ ಅಳವಡಿಸುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ. ಈ ಮಹತ್ವದ ಕಾರ್ಯಾಚರಣೆಗಾಗಿ ನಾಗರಹೊಳೆ, ಮತ್ತಿಗೋಡು, ದುಬಾರೆ ಮತ್ತು ಸಕ್ರೆಬೈಲು ಆನೆ ಬಿಡಾರಗಳಿಂದ ಒಟ್ಟು ಏಳು ಸಾಕಾನೆಗಳನ್ನು ಕರೆತರಲಾಗಿದ್ದು, ಅವುಗಳ ನೆರವಿನೊಂದಿಗೆ ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ವಿಶ್ವ ಸಾಮಾಜಿಕ ನ್ಯಾಯ ದಿನ; ಕಾನೂನು ಅರಿವು ಕಾರ್ಯಕ್ರಮ

ಈ ಕುರಿತು ಕೊಪ್ಪ ತಾಲೂಕಿನ ಡಿಎಫ್‌ಒ ಶಿವಶಂಕರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ, ನಾಗರಹೊಳೆಯ ಪಶುವೈದ್ಯ ಡಾ. ರಮೇಶ್, ಮಂಗಳೂರು ವೃತ್ತದ ಡಾ. ಯಶಸ್ವಿ ಮತ್ತು ಶಾರ್ಪ್ ಶೂಟರ್ ರಂಜನ್ ಸೇರಿದಂತೆ ನುರಿತ ತಜ್ಞರ ತಂಡ ಪಾಲ್ಗೊಂಡಿದೆ. ಬಾಳೆಹೊನ್ನೂರು ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಶೃಂಗೇರಿ ಹಾಗೂ ಎನ್.ಆರ್. ಪುರ ವಲಯದ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ಸಹಕರಿಸುತ್ತಿದ್ದಾರೆ. ಆಲ್ಲೂರು ಮತ್ತು ಮೂಡಿಗೆರೆ ಭಾಗದ ಆನೆ ಕಾರ್ಯಪಡೆ (ETF) ಸಿಬ್ಬಂದಿ ಸೇರಿದಂತೆ ಸುಮಾರು 50 ರಿಂದ 75 ಮಂದಿ ಅರಣ್ಯ ಸಿಬ್ಬಂದಿ ಸೇರಿ ಕಾರ್ಯಾಚರಣೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...