ಚಿಕ್ಕಮಗಳೂರು | ಮೂಡಿಗೆರೆ ಕ್ಷೇತ್ರ; ಅವೈಜ್ಞಾನಿಕ ರಸ್ತೆ, ಅಭಿವೃದ್ಧಿ ಶೂನ್ಯ; ಪರಾಜಿತ ಅಭ್ಯರ್ಥಿ ದೀಪಕ್ ದೊಡ್ಡಯ್ಯ

Date:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಾ ಬಂದರೂ ಸ್ಥಳೀಯ ಮೂಡಿಗೆರೆ ವಿದಾನಸಭಾ ಕ್ಷೇತ್ರದ ಅಭಿವೃದ್ಧಿ ಮಾತ್ರ ನಿಂತ ನೀರಿನಂತಾಗಿದೆ. ಶಾಸಕರು ಕೇವಲ ಮಾತಿನಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೂ ತಮಗೂ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿದ್ದಾರೆ. ಜ್ವಲಂತ ಸಮಸ್ಯೆಗಳಾವುದಕ್ಕೂ ಪರಿಹಾರ ಸಿಕ್ಕಿಲ್ಲ. ಹೊಸ ಯೋಜನೆಗಳಾಗಲಿ, ಅಭಿವೃದ್ಧಿ ಕಾರ್ಯಗಳ ಪ್ರಸ್ತಾವನೆ ಸಹ ಇಲ್ಲದಂತಾಗಿದೆ. ನಾಮಕಾವಸ್ತೆಗೆ ರಸ್ತೆ ಗುಂಡಿ ಮುಚ್ಚುವ ಸಣ್ಣ, ಪುಟ್ಟ ಕೆಲಸಗಳು ನಡೆಯುತ್ತಿದ್ದರೂ ಅವೈಜ್ಞಾನಿಕ ಹಾಗೂ ಸಂಪೂರ್ಣ ಕಳಪೆಯಿಂದ ಕೂಡಿವೆ ಎಂದು ಪರಾಜಿತ ಅಭ್ಯರ್ಥಿ ದೀಪಕ್ ದೊಡ್ಡಯ್ಯ ತಿಳಿಸಿದರು. 

- Advertisement -

ಭೀಕರ ಅತೀವೃಷ್ಠಿಯಿಂದ ಸಂತ್ರಸ್ತರಾಗಿರುವ ಮಲೆಮನೆ, ಮಧುಗುಂಡಿ ಇನ್ನಿತರೆ ಗ್ರಾಮಗಳ ಜನರಿಗೆ ಯಾವುದೇ ಪರಿಹಾರ ಕೊಡಿಸುವಲ್ಲಿ ಶಾಸಕರು ವಿಫಲರಾಗಿದ್ದಾರೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಗೆದ್ದು ಬಂದು ಈಗ ನಿರ್ಲಕ್ಷ್ಯ ವಹಿಸಿದ್ದಾರೆ. ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಂತ್ರಸ್ತರಿಗೆ ಬದಲಿ ಭೂಮಿ ಗುರುತಿಸುವ ಪ್ರಕ್ರಿಯೆ ನಡೆದಿತ್ತು. ಅದನ್ನು ಮುಂದಕ್ಕೆ ಕೊಂಡೊಯ್ಯುವ ಕೆಲಸವನ್ನು ಶಾಸಕರು ಮಾಡಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಆನೆ ದಾಳಿ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿಯಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.ಮುಖ್ಯಮಂತ್ರಿಗಳು ಕ್ಷೇತ್ರದಲ್ಲಿದ್ದ ದಿನವೇ ಓರ್ವ ವ್ಯಕ್ತಿ ಆನೆ ದಾಳಿಯಿಂದ ಸಾವಪ್ಪಿದ ಘಟನೆಯೂ ನಡೆದಿತ್ತು. ಆದರೂ ಸರ್ಕಾರ ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಶಾಸಕರು ಈ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡ ತಂದು ಪರಿಹಾರ ಯೋಜನೆ ತರುವಲ್ಲಿ ವಿಫಲರಾಗಿದ್ದಾರೆಂದು ಮೂಡಿಗೆರೆ ಕ್ಷೇತ್ರದ ಶಾಸಕರ ವಿರುದ್ಧ ದೀಪಕ್ ದೊಡ್ಡಯ್ಯ ಕಿಡಿಕಾರಿದರು.

ಸಾವು-ನೋವು ಸಂಭವಿಸಿದಾಗ ಮಾತ್ರ ಅರಣ್ಯ ಸಚಿವರು ತಕ್ಷಣ ಆದೇಶ ಮಾಡುತ್ತಾರೆ. ಆದರೆ ಅದಾವುದೂ ಕಾರ್ಯರೂಪಕ್ಕೆ ಬರುವುದೇ ಇಲ್ಲ. ಆನೆ ಹಾವಳಿ ತಡೆಗೆ ಬೇಲಿ ನಿರ್ಮಿಸುವುದು, ಆನೆ ಶಿಬಿರ ಸ್ಥಾಪಿಸುವುದು ಸೇರಿದಂತೆ ಹಲವು ಆದೇಶಗಳು ಈ ರೀತಿ ನೆನೆಗುದಿಗೆ ಬಿದ್ದಿವೆ. ಹಿಂದಿನ ಸರ್ಕಾರದಲ್ಲೇ ಕಳಸ ಪಟ್ಟಣವನ್ನು ತಾಲ್ಲೂಕು ಕೇಂದ್ರವಾಗಿ ಘೋಷಿಸಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದು ಮೂರು ವರ್ಷ ಕಳೆದರೂ ಯಾವುದೇ ಮೂಲ ಸೌಕರ್ಯಗಳನ್ನು ಕಲ್ಪಿಸಿಲ್ಲ. ತಾಲ್ಲೂಕು ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿರುವುದಾಗಿ ಹೇಳಲಾಗುತ್ತಿದ್ದರೂ ಕಾಮಗಾರಿಗೆ ಚಾಲನೆ ಸಿಕ್ಕಿಲ್ಲ. ತಾಲ್ಲೂಕಿನ ಜನರು ಯಥಾ ಪ್ರಕಾರ ಮೂಡಿಗೆರೆಗೆ ಅಲೆಯುವುದು ತಪ್ಪಿಲ್ಲ. ತೀವು ಹಾಳಾಗಿದ್ದ ಕ್ಷೇತ್ರದ ಕ್ಷೇತ್ರದ ರಸ್ತೆಗಳನ್ನು ದುರಸ್ಥಿಪಡಿಸಬೇಕೆಂಬ ಸಾರ್ವಜನಿಕರ ಒತ್ತಡದಿಂದಾಗಿ ಗುಂಡಿ ಮುಚ್ಚುವ ಕೆಲಸ ಆರಂಭಿಸಲಾಗಿದ್ದರೂ ತೇಪೆ ಹಚ್ಚುವ ಕೆಲಸ ಮಾತ್ರ ನಡೆದಿದೆ. ಅವೈಜ್ಞಾನಿಕ ಹಾಗೂ ಕಳಪೆ ಕೆಲಸ ನಡೆದಿದ್ದು, ಅಪಾರ ಪ್ರಮಾಣದ ಅಕ್ರಮಗಳು ನಡೆದಿದ್ದರೂ ಶಾಸಕರು ಚಕಾರವೆತ್ತದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಕಳಸದ ಸಂಸೆ ಗ್ರಾಮದಲ್ಲಿ ನಿರ್ಮಿಸಲಾಗಿರುವ ಕಾಂಕ್ರಿಟ್ ರಸ್ತೆ ಕಾಮಗಾರಿ ವಿಫಲವಾಗಿದೆ ಎಂದು ದೀಪಕ್ ದೊಡ್ಡಯ್ಯ ಅಣುಕಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಚಾಲನಾ ತರಬೇತಿ ಸಂಘ; ಶಾಲಾ, ಕಾಲೇಜು, ಸಾರ್ವಜನಿಕರ ಸುರಕ್ಷತೆಗಾಗಿ ಜನಜಾಗೃತಿ 

ಈ ವರೆಗೆ ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ ಎರಡು ವರ್ಷಗಳಲ್ಲಾದರೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ಅಭಿವೃದ್ಧಿಗೆ ಒತ್ತುಕೊಟ್ಟಿಲ್ಲ ಎಂದು ಆರೋಪಿಸಿದರು. ಈ ವೇಳೆ ಮಂಜುನಾಥ್, ಲಿಖಿತ್, ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...