ಚಿಕ್ಕಮಗಳೂರು | ಅನಧಿಕೃತವಾಗಿ ಮಳಿಗೆ ನಿರ್ಮಾಣ: ತೆರವುಗೊಳಿಸದಂತೆ ಮಾಲೀಕರ ಪ್ರತಿಭಟನೆ

Date:

ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಅಂಗಡಿ ಮುಂಗಟ್ಟು, ಮಳಿಗೆಗಳನ್ನು ಕಾನೂನಿನ ಆದೇಶದಂತೆ ಅಧಿಕಾರಿಗಳ ಸಮ್ಮುಖದಲ್ಲಿ ತೆರವುಗೊಳಿಸುತ್ತಿದ್ದರೂ, ಇದನ್ನು ವಿರೋಧಿಸಿ ಮಾಲೀಕರು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಗಾಂಧಿ ಮೈದಾನದಲ್ಲಿ ನಡೆದಿದೆ.

- Advertisement -

ಮಲೆನಾಡಿನಲ್ಲಿ ವಿಪರೀತ ಮಳೆಯಾಗುವ ಕಾರಣ, ತುಂಗಾ ಹೊಳೆ ತುಂಬಿ ಗಾಂಧಿ ಮೈದಾನದ ಸುತ್ತ ಆವರಿಸಿ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ತುಂಗಾ ನದಿ ಆವರಿಸಿಕೊಳ್ಳುವುದರಿಂದ ಸಮಸ್ಯೆಯಾಗುತ್ತದೆ. ಹಾಗೆಯೇ, ಸರ್ಕಾರದ ಜಾಗದಲ್ಲಿ ಅನಧಿಕೃತವಾಗಿ 26 ಮಳಿಗೆಗಳನ್ನು ನಿರ್ಮಾಣ ಮಾಡಿಕೊಂಡಿದ್ದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...
Screenshot 2025 10 16 20 38 39 50 f9ee0578fe1cc94de7482bd41accb329

ಸುಮಾರು 2007ರಲ್ಲಿ ನಿರ್ಮಿಸಿಕೊಂಡಿದ್ದ ಮಳಿಗೆಗಳು ಹಾಗೂ ಅಂಗಡಿ ಮುಂಗಟ್ಟುಗಳ ಕುರಿತು ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಬೇಕಾಯಿತು. ನಂತರ 2022ರಲ್ಲಿ ತಾರ್ಕಿಕ ಅಂತ್ಯಕ್ಕೆ ಹೋಗಿ ಮಳಿಗೆಗಳನ್ನು ತೆರವುಗೊಳಿಸಬೇಕೆಂದು ಅಧಿಕಾರಿಗಳಿಗೆ ಕೋರ್ಟ್ ಆದೇಶ ಹೊರಡಿಸಿತ್ತು. ಹಾಗಾಗಿ ತೆರವು ಕಾರ್ಯಾಚರಣೆ ಮಾಡಲಾಗಿದೆ ಎಂದು ಶೃಂಗೇರಿ ತಾಲೂಕಿನ ತಹಶೀಲ್ದಾರ್ ಅನೂಪ್ ಸಂಜು ತಿಳಿಸಿದ್ದಾರೆ.

Screenshot 2025 10 16 20 37 36 64 f9ee0578fe1cc94de7482bd41accb329

ಈ ವಿಚಾರವಾಗಿ ಅಧಿಕಾರಿಗಳು ತಹಶೀಲ್ದಾರ್ ಸಮ್ಮುಖದಲ್ಲಿ ಪ್ರತಿ ಮಳಿಗೆಯ ಮಾಲೀಕರನ್ನು ಭೇಟಿ ಮಾಡಿ ಮಾತನಾಡಿಸಿ, ಅಧಿಕಾರಿಗಳ ಕಚೇರಿಗೆ ಕರೆಸಿಕೊಂಡು ಕೋರ್ಟ್ ಆದೇಶವನ್ನು ಹೇಳಿದರೂ 10 ವಾರಗಳ ಗಡವು ಕೊಟ್ಟರೂ ಕೂಡ ಗಾಂಧಿ ಮೈದಾನದಲ್ಲಿ ಮಳಿಗೆಗಳನ್ನು ನಿರ್ಮಿಸಿಕೊಂಡಿದ್ದ ಮಾಲೀಕರು ತೆರವುಗೊಳಿಸದೇ ಇದ್ದ ಕಾರಣ ಅಧಿಕಾರಿಗಳು ಹಾಗೂ ಮಾಲೀಕರ ಸಮ್ಮುಖದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಚಿಕ್ಕಮಗಳೂರಿನ ಎ ಸಿ ಸುದರ್ಶನ್ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಂವಿಧಾನ, ನ್ಯಾಯ ಮೂರ್ತಿ ಬಿ.ಆರ್ ಗವಾಯಿ ಮೇಲಿನ ಅವಮಾನ ಖಂಡಿಸಿ; ಎದ್ದೇಳು ಕರ್ನಾಟಕ ಪ್ರತಿಭಟನೆ

26 ಮಳಿಗೆಗಳ ಮಾಲೀಕರು ಹಾಗೂ ಕುಟುಂಬಸ್ಥರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲವೆಂದು ಪಟ್ಟುಹಿಡಿದಿದ್ದರು. ಬಳಿಕ ಅಧಿಕಾರಿಗಳು ಗಲಬೆಯನ್ನು ಸಡಿಲಗೊಳಿಸಿದ್ದಾರೆ ಎನ್ನಲಾಗಿದೆ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...