ಬಾಲ್ಯವಿವಾಹ | ಕರ್ನಾಟಕಕ್ಕೆ 2ನೇ ಸ್ಥಾನ: ನಾಚಿಕೆಗೇಡಿನ ಸಂಗತಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ಅತಿ ಹೆಚ್ಚು ಬಾಲ್ಯವಿವಾಹ ನಡೆದಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ‘ಇದು ತಲೆತಗ್ಗಿಸುವ ಮತ್ತು ನಾಚಿಕೆಗೇಡಿನ ಸಂಗತಿ’ ಎಂದಿದ್ದಾರೆ.

- Advertisement -

ಬಾಲ್ಯವಿವಾಹ ಸಂಬಂಧ ಬುಧವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, “ತಮಿಳುನಾಡು, ಕರ್ನಾಟಕ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ಅಸ್ಸಾಂ ಹಾಗೂ ಮಹಾರಾಷ್ಟ್ರದಲ್ಲಿ ಹೆಚ್ಚಿನ ಬಾಲ್ಯವಿವಾಹಗಳು ನಡೆದಿವೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕೇಂದ್ರ ಸರ್ಕಾರ ಸಲ್ಲಿಸಿದ ಅಂಕಿಅಂಶಗಳ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ ತಮಿಳುನಾಡಿನಲ್ಲಿ 8,966, ಕರ್ನಾಟಕದಲ್ಲಿ 8,348, ಪಶ್ಚಿಮ ಬಂಗಾಳದಲ್ಲಿ 8,324, ತೆಲಂಗಾಣದಲ್ಲಿ 4,440, ಆಂಧ್ರ ಪ್ರದೇಶದಲ್ಲಿ 3,416, ಅಸ್ಸಾಂನಲ್ಲಿ 3,316, ಮಹಾರಾಷ್ಟ್ರದಲ್ಲಿ 2,043, ಗುಜರಾತ್‌ನಲ್ಲಿ 1,206, ಉತ್ತರ ಪ್ರದೇಶದಲ್ಲಿ 1,197 ಹಾಗೂ ಹರಿಯಾಣದಲ್ಲಿ 1,104 ಬಾಲ್ಯವಿವಾಹಗಳು ನಡೆದಿವೆ.

ಈ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್, “ಬಾಲ್ಯವಿವಾಹ ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ದುರದೃಷ್ಟಕರ ಸಂಗತಿ. ಇದು ಜವಾಬ್ದಾರಿ ಸ್ಥಾನದಲ್ಲಿರುವ ಮಹಿಳಾ ಮಂತ್ರಿಯಾಗಿ ತಲೆ ತಗ್ಗಿಸುವ ವಿಚಾರ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಬಾಲ್ಯವಿವಾಹ ತಡೆಗಾಗಿ ನಮ್ಮ ಇಲಾಖೆಯಿಂದ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ, ಇದಕ್ಕೆ ಕೇವಲ ನಮ್ಮ ಇಲಾಖೆಯ ಲೋಪದೋಷವೆಂದು ಹೇಳಲು ಸಾಧ್ಯವಿಲ್ಲ. ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯತಿ, ಶಾಲೆಗಳು, ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ಸಹಕಾರ ಕೂಡ ಬೇಕು. ಎಲ್ಲರೂ ಒಗ್ಗಟಾಗಿ ಕೆಲಸ ಮಾಡಿದರೆ ಮಾತ್ರವೇ ಬಾಲ್ಯವಿವಾಹಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ” ಎಂದಿದ್ದಾರೆ.

“ಬಾಲ್ಯವಿವಾಹಗಳನ್ನು ಮೂಡನಂಬಿಕೆಯಿಂದ ಮಾಡುತ್ತಾರೋ ಅಥವಾ ಬೇರೆ ಕಾರಣಗಳಿವೆಯೇ ಎಂಬುದೇ ಸರಿಯಾಗಿ ತಿಳಿಯುತ್ತಿಲ್ಲ. ಬಾಲ್ಯವಿವಾಹ ತಡೆಗಾಗಿ ಕಟ್ಟುನಿಟ್ಟಿನ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...