ಪುರುಷ ನೌಕರರಿಗೂ ಶಿಶುಪಾಲನಾ ರಜೆ; ಸರ್ಕಾರ ಆದೇಶ

Date:

ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರಿಗೆ ನೀಡಲಾಗುತ್ತಿದ್ದ ಶಿಶುಪಾಲನಾ ರಜೆಯನ್ನು ಒಂಟಿ ಪೋಷಕರಾಗಿರುವ ಪುರುಷ ಉದ್ಯೋಗಿಗಳಿಗೂ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಒಂಟಿ ಪೋಷಕರಾದ ವಿವಾಹ ವಿಚ್ಛೇದಿತ ಅಥವಾ ವಿಧುರರು ಗರಿಷ್ಠ 6 ತಿಂಗಳವರೆಗೆ ಶಿಶುಪಾಲನಾ ರಜೆಯನ್ನು ತೆಗೆದುಕೊಳ್ಳಬಹುದು ಎಂದು ಸರ್ಕಾರ ಆದೇಶಿಸಿದೆ.

ರಾಜ್ಯ ಸರ್ಕಾರದ ಅಡಿಯಲ್ಲಿ ನೌಕರರಾಗಿರುವ ಮಹಿಳೆಯರು ತಮ್ಮ ಸೇವಾವಧಿಯಲ್ಲಿ ಗರಿಷ್ಠ ಆರು ತಿಂಗಳು (180 ದಿನಗಳು) ಶಿಶುಪಾಲನಾ ರಜೆ ಪಡೆಯಲು ಅವಕಾಶವಿದೆ. ಅಂತೆಯೇ, ಇನ್ನು ಮುಂದೆ ಒಬ್ಬಂಟಿ ಪೋಷಕರ ಪುರುಷ ನೌಕರರೂ ಕೂಡ ಶಿಶುಪಾಲನಾ ರಜೆ ಪಡೆದುಕೊಳ್ಳಬಹುದು ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್ ಕೊರಡೆ ಹೋರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಒಂಟಿ ಪುರುಷ ಪೋಷಕರಿಗೂ ಶಿಶುಪಾಲನಾ ರಜೆ ನೀಡಬೇಕೆಂಬ ಪ್ರಸ್ತಾವನೆಗಳು ಬಂದಿದ್ದವು. ಅವುಗಳನ್ನು ಪರಿಶೀಲಿಸಿದ ಸರ್ಕಾರ, ಈ ಸೌಲಭ್ಯವನ್ನು ಪುರುಷ ನೌಕರರಿಗೂ ವಿಸ್ತರಿಸುವುದು ನ್ಯಾಯಸಮ್ಮತವಾಗಿದೆ ಎಂದು ಪರಿಗಣಿಸಿತ್ತು. ಇದೀಗ, ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ.

ಯಾವುದೇ ಸಂದರ್ಭದಲ್ಲಿ ಪುರುಷ ನೌಕರ ಶಿಶುಪಾಲನಾ ರಜೆ ಪಡೆಯಬಹುದು. ಒಂದು ವೇಳೆ, ಆ ನೌಕರರು ವಿವಾಹ ಮಾಡಿಕೊಂಡಲ್ಲಿ ಆ ದಿನಾಂಕದಿಂದ ಶಿಶುಪಾಲನಾ ರಜೆಯನ್ನು ರದ್ದುಗೊಳಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವೇರಿ ವಿವಾದ: ಮತ್ತೆ ವೈರಲ್ ಆಗುತ್ತಿದೆ 2016ರ ದೇವೇಗೌಡರ ಹಳೆಯ ಸಂದರ್ಶನ

ನಾನು ನರ್ಮದಾ, ತೆಹ್ರಿ, ಗಂಗಾ ವಿವಾದಗಳನ್ನು ಬಗೆಹರಿಸಿದ್ದೆ. ಹಾಗಿರುವಾಗ, ಮೋದಿಗೇಕೆ ಕಾವೇರಿ...

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...