ಚಿಲುಮೆ ವೋಟರ್‌ ಗೇಟ್‌ ಪ್ರಕರಣ ತನಿಖೆಯಾಗಲಿ: ಸಿಎಂ ಸಿದ್ದರಾಮಯ್ಯಗೆ ರಮೇಶ್‌ ಬಾಬು ಆಗ್ರಹ

Date:

  • ಬಿಬಿಎಂಪಿ ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಮೂಲಕ ಮತದಾರರ ಪಟ್ಟಿ ಲೋಪ
  • ರಾಜ್ಯ ಸರ್ಕಾರ ಯಾವುದೇ ಪ್ರಭಾವಕ್ಕೆ ಒಳಗಾಗದೆ ಉನ್ನತ ತನಿಖೆ ನಡೆಸಬೇಕು’

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಅವರು ಚಿಲುಮೆ ಸಂಸ್ಥೆಯ ಮೂಲಕ ಎಸಗಿದ ಮತದಾರರ ಪಟ್ಟಿಯ ಲೋಪವನ್ನು ತನಿಖೆಗೆ ಒಳಪಡಿಸಬೇಕು ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಅವರು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಪತ್ರ ಬರೆದಿರುವ ಅವರು, “ಬಿಬಿಎಂಪಿ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿ ಪಾಲಿಕೆಯ ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಅವರು ಚಿಲುಮೆ ಖಾಸಗಿ ಸಂಸ್ಥೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಣೆಗೆ ಅವಕಾಶ ನೀಡಿ ಲೋಪವೆಸಗಿ, ಈ ಮೂಲಕ ಬಿಬಿಎಂಪಿ ವ್ಯಾಪ್ತಿಯ ಸುಮಾರು ನಾಲ್ಕರಿಂದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣರಾಗಿದ್ದಾರೆ” ಎಂದು ದೂರಿದ್ದಾರೆ.

“ಚಿಲುಮೆ ಸಂಸ್ಥೆಯ ಲೋಪದ ಸಂಬಂಧ ಚುನಾವಣಾ ಆಯೋಗ ತನಿಖೆಗೆ ಆದೇಶ ನೀಡಿ ವರದಿಯನ್ನು ಪಡೆದುಕೊಂಡಿದ್ದರೂ ಈ ತನಿಖೆ ಪೂರ್ಣ ಪ್ರಮಾಣದಲ್ಲಿ ಆಗಿರುವುದಿಲ್ಲ. ತುಶಾರ್ ಗಿರಿನಾಥ್‌ ಅವರು ಕರ್ತವ್ಯಲೋಪ ಎಸಗಿದ್ದು, ಇವರು ಮಾಡಿರುವ ತಪ್ಪಿನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಚುನಾವಣಾ ಅಧಿಕಾರಿಯಾಗಿ ಇವರ ಕರ್ತವ್ಯಲೋಪವನ್ನು ಬೇರೆ ಅಧಿಕಾರಿಗಳ ಮೇಲೆ ವರ್ಗಾಯಿಸಲೂ ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

“ಉನ್ನತ ಮಟ್ಟದ ತನಿಖೆಯ ಮೂಲಕ ಇವರ ಅಕ್ರಮ ಬಯಲುಗೊಳಿಸುವುದರ ಜೊತೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೆ ಮತ್ತೆ ಇಂತಹ ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿರುತ್ತದೆ. ರಾಜ್ಯ ಸರ್ಕಾರವು ಯಾವುದೇ ಪ್ರಭಾವಕ್ಕೆ ಒಳಗಾಗದೆ ಇವರ ಮೇಲೆ ಪೂರ್ಣ ಮಟ್ಟದ ತನಿಖೆಯನ್ನು ನಡೆಸಬೇಕು. ತಾವು ದಯಮಾಡಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಮೂಲಕ ಆಗಿರುವ ಮತದಾರರ ಪಟ್ಟಿಯ ಲೋಪವನ್ನು ತನಿಖೆ ಮಾಡಲು ನಿರ್ದೇಶನ ನೀಡಬೇಕು” ಎಂದು ಕೋರಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾನು – ಸವದಿ ಸಚಿವರಾಗಬೇಕಿತ್ತು ಎನ್ನುವುದು ಜನರ ಅಭಿಲಾಷೆಯಾಗಿತ್ತು : ಜಗದೀಶ ಶೆಟ್ಟರ್

ಸಚಿವ ಸ್ಥಾನಕ್ಕೆ ನಾನೆಂದೂ ಬೇಡಿಕೆ ಇಟ್ಟಿಲ್ಲ, ಇಡುವುದೂ ಇಲ್ಲ ಯಾವುದೇ ಸ್ಥಾನ ಕೊಟ್ಟರೂ...

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ...

ಕರ್ನಾಟಕದ ಜಯವನ್ನು ಮಧ್ಯಪ್ರದೇಶದಲ್ಲಿ ಪುನರಾವರ್ತಿಸಲಿದ್ದೇವೆ: ರಾಹುಲ್ ಗಾಂಧಿ

ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಹಿರಿಯ ನಾಯಕರು...

ನೀತಿ ಆಯೋಗದ ಸಭೆಗೆ ಹಾಜರಾಗದೆ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ : ಬಿಜೆಪಿ

ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ...