ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕು; ಬಡಾಯಿ ಕೊಚ್ಚಿಕೊಳ್ಳುವುದರಿಂದಲ್ಲ: ಪ್ರಧಾನಿಗೆ ಖರ್ಗೆ ತರಾಟೆ

Date:

Advertisements

ಉತ್ತರಾಖಂಡದ ಗಡಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿಗಳ ಕುರಿತು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕೇ ವಿನಾ ಬಡಾಯಿ ಕೊಚ್ಚಿಕೊಳ್ಳುವುದರಿಂದ ಸಾಧ್ಯವಿಲ್ಲ. ಗಡಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾವನ್ನು ದೋಷಮುಕ್ತಗೊಳಿಸಿದ್ದಕ್ಕಾಗಿ ರಾಷ್ಟ್ರವು ಭಾರೀ ಬೆಲೆ ತೆರಬೇಕಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈಗ ಉತ್ತರಾಖಂಡದಲ್ಲಿರುವ ಗಡಿ ನಿಯಂತ್ರಣ ರೇಖೆಯಲ್ಲಿ ಸೇನೆಗೆ ಸಂಬಂಧಿಸಿದಂತೆ ಚೀನಾವು ಹೊಸ ನಿರ್ಮಾಣಗಳನ್ನು ಕೈಗೆತ್ತಿಕೊಂಡಿರುವುದರಿಂದ ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಗೆ ಅಡ್ಡಿಯಾಗುತ್ತಿದೆ” ಎಂದು ತಿಳಿಸಿದ್ದಾರೆ.

Advertisements

ಉತ್ತರಾಖಂಡದ ಗಡಿ ನಿಯಂತ್ರಣ ರೇಖೆಯ ಬಳಿ ನಿರ್ಮಾಣವಾಗುತ್ತಿರುವ ಚೀನಾದ ನಿರ್ಮಾಣಗಳನ್ನು ತೋರಿಸುವ ಉಪಗ್ರಹ ಚಿತ್ರಗಳನ್ನು ಖರ್ಗೆ ಹಂಚಿಕೊಂಡಿದ್ದಾರೆ. 

ಚೀನಾದ ಆಕ್ರಮಣಕಾರಿ ನೀತಿಯ ಬಗ್ಗೆ ಕೇಂದ್ರ ಸರ್ಕಾರ ಏಕೆ ಪ್ರಶ್ನೆ ಮಾಡುವುದಿಲ್ಲ. ಪೂರ್ವ ಲಡಾಖ್‌ನಲ್ಲಿ ಗಡಿ ಪರಿಸ್ಥಿತಿಯು ಗಂಭೀರವಾಗಿರುವಾಗ ಚೀನಾದೊಂದಿಗಿನ ಸಂಬಂಧಗಳ ಬಗ್ಗೆ ಮಾತನಾಡಿದರೆ ಯಾವುದೇ ಪ್ರಯೋಜನವಿಲ್ಲ”

ಈ ಸುದ್ದಿ ಓದಿದ್ದೀರಾ? ಥಾಣೆ ಹತ್ಯೆ ಪ್ರಕರಣ | ಎಚ್‌ಐವಿ ಸೋಂಕಿತನಾಗಿದ್ದ ಹಂತಕ; ಮಹಿಳೆಯದು ಆತ್ಮಹತ್ಯೆ ಎಂದು ಹೇಳಿಕೆ!

ಚರ್ಚೆಯಿಲ್ಲದ ವಿಷಯವನ್ನು ಬಿಟ್ಟು ದೇಶದ ಗಡಿಯನ್ನು ಆಕ್ರಮಿಸಿರುವ ಚೀನಾದ ಬಗ್ಗೆ ಏಕೆ ಮಾತನಾಡುವುದಿಲ್ಲ. ಅಲ್ಲದೆ ಪೂರ್ವ ಲಡಾಖ್‌ನ ಗಡಿಯಲ್ಲಿ ಪರಿಸ್ಥಿತಿಯು ಸಾಮಾನ್ಯವಲ್ಲದಿರುವಾಗ ನೆರೆಯ ದೇಶದೊಂದಿಗಿನ ತನ್ನ ಸಂಬಂಧಗಳ ಬಗ್ಗೆ ಮೃದುಧೋರಣೆ ತಾಳಿದರೆ ಸಮಸ್ಯೆ ಪರಿಹಾರವಾಗುವುದೇ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

Download Eedina App Android / iOS

X