ಚಿತ್ರದುರ್ಗ |ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಪರ ಪ್ರಚಾರ ಆರೋಪ; ನಾಲ್ವರು ಪೊಲೀಸರ ವರ್ಗಾವಣೆ

Date:

  • ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಜಿಲ್ಲಾ ವರಿಷ್ಠಾಧಿಕಾರಿ
  • ಹಿರಿಯೂರು ಕಾಂಗ್ರೆಸ್‌ನಿಂದ ಚುನಾವಣಾಧಿಕಾರಿಗಳಿಗೆ ದೂರು

ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿ ಚಿತ್ರದುರ್ಗ ಪೊಲೀಸ್‌ ವರಿಷ್ಠಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಿರಿಯೂರು ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಈರಲಿಂಗೇಗೌಡ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಬಿಜೆಪಿಗೆ ಬಂಡಾಯದ ಬಿಸಿ: ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ

ಇದನ್ನು ಪರಿಗಣಿಸಿದ ಚಿತ್ರದುರ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ್ ಪೊಲೀಸ್ ಕಾನ್‌ಸ್ಟೇಬಲ್ ಗಳಾದ ಶಿವಮೂರ್ತಿ, ಫಿರ್ದೋಸ್, ತಿಮ್ಮೇಶ್ ತಿಮ್ಮರಾಯಪ್ಪ ಹಾಗೂ ಮೌನೇಶ್ವರ್ ಎಂಬುವವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಪೊಲೀಸ್‌ ಇಲಾಖೆ ಸಿಬ್ಬಂದಿಗಳು ಮಾತ್ರವಲ್ಲದೇ, ಶಿಕ್ಷಣ ಇಲಾಖೆಯ ವೀರೇಶ್, ಶಿವಾನಂದ್ ಹಾಗೂ ತಾ.ಪಂ. ಕಚೇರಿ ಸಿಬ್ಬಂದಿ ಹರ್ಷವರ್ಧನ ಎಂಬುವವರ ವಿರುದ್ಧವೂ ದೂರು ನೀಡಲಾಗಿದ್ದು, ಇವರೆಲ್ಲರ ಮೇಲೆ ಮೇಲಾಧಿಕಾರಿಗಳು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಆಪರೇಷನ್ ಹಸ್ತದ ಬಗ್ಗೆ ಲಕ್ಷ್ಮಣ್ ಸವದಿ ಮಾರ್ಮಿಕ ಹೇಳಿಕೆ

ಬಹಳಷ್ಟು ಮಂದಿ ಜೆಡಿಎಸ್‌-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ...

ಕಟುಕ, ಕಟಿಕ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲು ಸಿಎಂಗೆ ಮನವಿ

ರಾಜ್ಯ ಕಟಿಕ ಸಮಾಜದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ...

ಅರಣ್ಯ ಇಲಾಖೆಯ 50 ಅಧಿಕಾರಿ ಮತ್ತಿ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ವಿತರಣೆ

ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ನಡೆಯುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನೀಡುವ...

ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶಿಸಿದ ಕಾವೇರಿ ಪ್ರಾಧಿಕಾರ

ತಮಿಳುನಾಡಿಗೆ ಅಕ್ಟೋಬರ್ 15ರವರೆಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು...