ಚಿತ್ರದುರ್ಗ | ನಿಗಮ ಮಂಡಳಿಗೆ ಪರಿಗಣಿಸದೇ ಅನ್ಯಾಯ: ಕಾಂಗ್ರೆಸ್ಸಿನ ಆರ್ ಕೆ ಸರ್ದಾರ್ ಬೆಂಬಲಿಗರ ಆಕ್ರೋಶ

Date:

ʼʼಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಹಾಗೂ ಚಿತ್ರದುರ್ಗದ ಹಿರಿಯ ಮುಖಂಡರು ಮುಸ್ಲಿಂ ನಾಯಕರಾದ ಆರ್ ಕೆ ಸರ್ದಾರ್ ರವರಿಗೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತು ಉಳಿಸಿಕೊಳ್ಳದೆ, ಇವರಿಗೆ ಮೋಸ  ಮಾಡುತ್ತಿದೆ. ನಿಗಮ ಮಂಡಳಿ ನೇಮಕಕ್ಕೆ ಪರಿಗಣಿಸದೇ ಅನ್ಯಾಯ ಮಾಡಿದೆʼʼ ಎಂದು ಆರ್ ಕೆ ಸರ್ದಾರ್ ಬೆಂಬಲಿಗರು ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಕಛೇರಿ ಮುಂಬಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -
WhatsApp Image 2025 10 03 at 3.23.27 PM 1

ಬೆಂಬಲಿಗರೊಬ್ಬರು ಮಾತನಾಡಿ ʼʼಚಿತ್ರದುರ್ಗದ ಮುಖಂಡರಾದ ಆರ್ ಕೆ ಸರ್ದಾರ್ ಕಾಂಗ್ರೆಸ್ ಪಕ್ಷದ ಏಳಿಗೆಗಾಗಿ ಶ್ರಮಿಸುವ ಮೂಲಕ ಸಾಕಷ್ಟು ದುಡಿದಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಬದಲು ಕಡೆಗಣಿಸಲಾಗಿದೆ. ಮುಂದೆ ಬರುವ ಪಂಚಾಯಿತಿ ಮತ್ತು ಕೌನ್ಸಿಲರ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆರ್ ಕೆ ಸರ್ದಾರ್ ರವರಿಗೆ ಯಾವುದಾದರೂ ಉನ್ನತಮಟ್ಟದ ನಿಗಮ ಅಧ್ಯಕ್ಷ  ಸ್ಥಾನವನ್ನು ನೀಡಬೇಕುʼʼ ಎಂದು  ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...
WhatsApp Image 2025 10 03 at 3.23.26 PM 2

ʼʼಸೂಕ್ತ ಸ್ಥಾನಮಾನ ನೀಡದಿದ್ದಲ್ಲಿ ಬೆಂಬಲಿಗರು ಕಾಂಗ್ರೆಸ್ ಪಕ್ಷಕೆ ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದೇವೆ ಹಾಗೂ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನೈತಿಕ ರಾಜಕಾರಣಕ್ಕೆ ಗಾಂಧೀಜಿ ಹಾಗೂ ಶಾಸ್ತ್ರೀಜಿ ಮಾದರಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

WhatsApp Image 2025 10 03 at 3.23.26 PM 1

ಚಿತ್ರದುರ್ಗದ ಪ್ರವಾಸಿ ಬಂಗಲೆಯಿಂದ ಕಾಂಗ್ರೆಸ್ ಪಕ್ಷದ ಕಛೇರಿಯವರೆಗೆ ನಡೆದ ಮೌನ ಪ್ರತಿಭಟನೆಯಲ್ಲಿ ಆರ್ ಕೆ ಸರ್ದಾರ್ ಬೆಂಬಲಿಗರಾದ ರೆಹಮಾನ್ ಖಾನ್, ನಿವೃತ್ತ ಡಿವೈಎಸ್ಪಿ ಮೆಹಬೂಬ್ ಖಾನ್, ದಾದಾ ಪೀರ್ ಭರಮಸಾಗರ, ರೈತ ವಿಭಾಗದ ಅಧ್ಯಕ್ಷ ರಾಘವೇಂದ್ರ , ಓಬಳೇಶ್, ಜಾಕೀರ್ ಹುಸೇನ್, ನಯಾಜ್ ಬಾಬು, ಯುವ ಕಾಂಗ್ರೆಸ್ ಅಸೆಂಬ್ಲಿ ಸೆಕ್ರೆಟರಿ ಎಂ ಡಿ ಯಾಸೀನ್, ಪ್ರಸನ್ನ ಕುಮಾರ್, ಚೇತನ್, ವಸೀಂ, ರಿಯಾಜ್, ಆರ್ ಕೆ ಅಲಿ, ಸಿರಾಜ್, ಯೂಸುಫ್, ನಿಜಾಮ್  ಮುಬಾರಕ್ ಸೇರಿದಂತೆ ಇತರ  ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...

ಪಿಎಂ ಮೋದಿ, ಯುವತಿಯ ಡೀಪ್‌ಫೇಕ್ ಫೋಟೋ: ಸಿಜೆಪಿ ನಾಯಕರು, ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಯುವತಿಯೊಬ್ಬಳ ಮುಖವನ್ನು ಕೃತಕ ಬುದ್ಧಿಮತ್ತೆ (AI)...