ಚಿತ್ರದುರ್ಗ | ಶಾಲಾ ಮಕ್ಕಳಿಗೆ ಶೂ ವಿತರಣೆ ಮಾಡದಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

Date:

ಸರ್ಕಾರಿ ಶಾಲೆ ಮಕ್ಕಳಿಗೆ ಶೂ ವಿತರಣೆ ಮಾಡದಿರುವುದನ್ನು ವಿರೋಧಿಸಿ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿನೂತನವಾಗಿ ಕರುನಾಡ ವಿಜಯಸೇನೆ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದಿಂದ ಬರಿಗಾಲಿನಲ್ಲಿ ಶ್ವಾನಗಳೊಂದಿಗೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಪ್ರತಿಭಟಿಸಿದರು.

- Advertisement -

ಬೀದಿ ನಾಯಿಗಳಿಗೆ ಬಿರಿಯಾನಿ ತಿನಿಸಲು ಹೊರಟಿರುವ ರಾಜ್ಯ ಸರ್ಕಾರ, ಮಕ್ಕಳಿಗೆ ಶೂ ವಿತರಣೆ ಮಾಡದ ಶಿಕ್ಷಣ ಸಚಿವರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು.

ಸರ್ಕಾರಿ ಶಾಲೆಗಳು ಪ್ರಾರಂಭವಾಗಿ ಎರಡು ತಿಂಗಳಾಗಿದ್ದರೂ, ಮಕ್ಕಳಿಗೆ ಶೂ ವಿತರಿಸಿಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರಮ ಕೈಗೊಂಡಿಲ್ಲ.‌ ಮಕ್ಕಳಿಗೆ ಶೂ ಕೊಡುವವರೆಗೂ ಸಚಿವ ಮಧು ಬಂಗಾರಪ್ಪ ಪಾದರಕ್ಷೆ ಧರಿಸದೆ ಬರಿಗಾಲಿನಲ್ಲಿ ಓಡಾಡಬೇಕು. ಸರ್ಕಾರಿ ವಾಹನ ಬಳಸಬಾರದು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ “ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಬಿರಿಯಾನಿ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಒಂದು ನಾಯಿಗೆ 27 ರೂ.ಗಳನ್ನು ವೆಚ್ಚ ಮಾಡುತ್ತಿರುವುದು ಯಾವ ನ್ಯಾಯ?
ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಮಕ್ಕಳಿಗೆ ಶೂ, ಟೈ ಬೆಲ್ಟ್, ಸಮವಸ್ತ್ರಗಳನ್ನು ನೀಡುವ ಮೂಲಕ ಸರ್ಕಾರಿ ಶಾಲೆಗಳನ್ನು ಹೈಟೆಕ್ ಶಾಲೆಗಳನ್ನು ಪರಿವರ್ತಿಸಬೇಕು. ಇಲ್ಲವಾದಲ್ಲಿ ಸರ್ಕಾರಿ ಶಾಲೆಗಳ ಎದುರು ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಸಿದರು.

ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳಿಲ್ಲ. ಡಿ ಗ್ರೂಪ್ ನೌಕರರಿಲ್ಲ. ಶಿಕ್ಷಕರ ಕೊರತೆಯಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಸರ್ಕಾರದ ಯೋಜನೆಗಳೆಲ್ಲಾ ಹಳ್ಳ ಹಿಡಿಯುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶಕ್ತಿ ಯೋಜನೆ | ರಾಜ್ಯಾದ್ಯಂತ 500 ಕೋಟಿ ಮಹಿಳೆಯರ ಪ್ರಯಾಣ: ಕಾರ್ಮಿಕರಿಗೆ ಸುಲಭ ಸಂಚಾರ, ಆರ್ಥಿಕ ಬಲ

ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಾ,  ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ರಾಜ್ಯ ಸಮಿತಿ ಸದಸ್ಯನಿಸಾ‌ರ್ ಅಹಮದ್, ಉಪಾಧ್ಯಕ್ಷರುಗಳಾದ ರತ್ನಮ್ಮ, ಮುಜಾಹಿದ್, ಜಿಲ್ಲಾ ಸಂಚಾಲಕ ನಾಗೇಶ್, ಅಖಿಲೇಶ್, ಶಶಿ, ಜಗದೀಶ್ ಸಿ. ವಿಜಯ್‌ಬಾಬು, ಹರೀಶ್‌ಕುಮಾರ್ ಪಿ.ಆರ್. ಅವಿನಾಶ್ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....