ಬೆಳಗಾವಿ | ರಮೇಶ್ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ದಾಳಿ

Date:

ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಅಫೆಕ್ಸ್‌ ಬ್ಯಾಂಕ್‌ನಲ್ಲಿ ಸಾಲ ಪಡೆದು, ಮರುಪಾವತಿಸದೆ ವಂಚಿಸಿರುವ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ರಮೇಶ್‌ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಡನೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕಾಗಿ ರಮೇಶ್‌ ಜಾರಕಿಹೊಳಿ ಅವರು ಅಫೆಕ್ಸ್‌ ಬ್ಯಾಂಕ್‌ನಲ್ಲಿ 439 ಕೋಟಿ ರೂ. ಸಾಲ ಪಡೆದಿದ್ದರು. ಆದರೆ, ಈಗ ಅವರು ಸಾಲದ ಹಣವನ್ನು ಮರುಪಾವತಿ ಮಾಡುತ್ತಿಲ್ಲವೆಂದು ಬೆಂಗಳೂರಿನ ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ನ ಮ್ಯಾನೇಜರ್‌ ರಾಜಣ್ಣ ಎಂಬವರು ಬೆಂಗಳೂರಿನಲ್ಲಿ ಜನವರಿ 5ರಂದು ದೂರು ದಾಖಲಿಸಿದ್ದರು.

ರಾಜಣ್ಣ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ವಿವಿ ಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್​​ 420 (ವಂಚನೆ), 406 ಮತ್ತು 34ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದಗೊಳಿಸಲು ಕೋರಿ ರಮೇಶ್‌ ಜಾರಕಿಹೊಳಿ ಹೈಕೋರ್ಟ್‌ನಲ್ಲಿ ಅರ್ಜಿಸಲ್ಲಿಸಿದ್ದಾರೆ. ಆದರೆ, ಅರ್ಜಿ ಇನ್ನೂ ವಿಚಾರಣೆಗೆ ಬಂದಿಲ್ಲ. ಈ ನಡುವೆ, ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಕಾರ್ಖಾನೆ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ; ದ್ವೇಷ ಭಾಷಣದಲ್ಲೇ ಫೇಮಸ್ ಆಗಿದ್ದವರು ಔಟ್!

ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ...

ತುಮಕೂರು | ಕೊಬ್ಬರಿ ಖರೀದಿ, ನೋಂದಣಿ ಪ್ರಕ್ರಿಯೆ ಮಾರ್ಚ್ 4ರಿಂದ ಆರಂಭ

ತುಮಕೂರು ಜಿಲ್ಲೆಯಲ್ಲಿ ನಾಫೆಡ್ ಮೂಲಕ ಬೆಂಬಲ ಬೆಲೆಯಲ್ಲಿ ಉಂಡೆ ಕೊಬ್ಬರಿ ಖರೀದಿ...

ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದು ಭರವಸೆ ನೆನೆಪಿಸಿದ ಬಿಜೆಪಿ ಶಾಸಕ!

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನ ಬಿಜೆಪಿ ಶಾಸಕ ನೀರಜ್ ಜಿಂಬಾ ಶನಿವಾರ ಪ್ರಧಾನಿ...