ಚಿಕ್ಕಮಗಳೂರು | ಲಿಂಗಾಯತ ಸಮುದಾಯದ ವಿರುದ್ಧ ಸಿ.ಟಿ ರವಿ ಟೀಕಿಸಿದ್ದಾರೆಂದು ಪೋಸ್ಟ್; ಮೂವರ ಬಂಧನ

Date:

  • ಬಸವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು
  • ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು

ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅವರು ‘ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡಬೇಕಿಲ್ಲ’”’ ಎಂದು ಹೇಳಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದ ಮೂವರು ವ್ಯಕ್ತಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಬಸವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ ಕಲ್ಮುರಡಪ್ಪ ಪೊಲೀಸರಿಗೆ ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ಕೆಂಗಳಹಳ್ಳಿಯ ಹರೀಶ್, ಗುರುಪಾಟೀಲ್, ಸುವರ್ಣಗಿರಿ ಕುಮಾರ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಮೂವರು ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅವರು ಲಿಂಗಾಯತ ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂಬ ಪತ್ರಿಕೆಯ ತುಣುಕು ಇಟ್ಟುಕೊಂಡು ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ ಮಾಡಿದ್ದರು ಎಂದು ಆರೋಪಿಸಲಾಗಿದೆ.

ದೂರಿನ ಅನ್ವಯ ತನಿಖೆ ನಡೆಸಿದ ಪೊಲೀಸರು ಸುಳ್ಳು ಹರಡಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾನು – ಸವದಿ ಸಚಿವರಾಗಬೇಕಿತ್ತು ಎನ್ನುವುದು ಜನರ ಅಭಿಲಾಷೆಯಾಗಿತ್ತು : ಜಗದೀಶ ಶೆಟ್ಟರ್

ಸಚಿವ ಸ್ಥಾನಕ್ಕೆ ನಾನೆಂದೂ ಬೇಡಿಕೆ ಇಟ್ಟಿಲ್ಲ, ಇಡುವುದೂ ಇಲ್ಲ ಯಾವುದೇ ಸ್ಥಾನ ಕೊಟ್ಟರೂ...

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ...

ಕರ್ನಾಟಕದ ಜಯವನ್ನು ಮಧ್ಯಪ್ರದೇಶದಲ್ಲಿ ಪುನರಾವರ್ತಿಸಲಿದ್ದೇವೆ: ರಾಹುಲ್ ಗಾಂಧಿ

ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಹಿರಿಯ ನಾಯಕರು...

ನೀತಿ ಆಯೋಗದ ಸಭೆಗೆ ಹಾಜರಾಗದೆ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ : ಬಿಜೆಪಿ

ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ...