ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ಪೌರತ್ವ ನೀಡಲು ಆರಂಭಿಸಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಪಶ್ಚಿಮ ಬಂಗಾಳ, ಹರಿಯಾಣ ಮತ್ತು ಉತ್ತರಾಖಂಡದಲ್ಲಿ ಸಿಎಎ ಅಡಿಯಲ್ಲಿ ಪೌರತ್ವ ನೀಡಲು ಕೇಂದ್ರ ಸರ್ಕಾರ ಬುಧವಾರ ಆರಂಭಿಸಿದೆ ಎಂದು ಗೃಹ ಸಚಿವಾಲಯ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.
The process of granting citizenship certificates under the Citizenship (Amendment) Rules, 2024 has now commenced in the state of West Bengal, where the first set of applications from the state was today granted citizenship by the Empowered Committee, West Bengal: MHA pic.twitter.com/3wF5blQYps
— ANI (@ANI) May 29, 2024
“ಪೌರತ್ವ (ತಿದ್ದುಪಡಿ) ನಿಯಮಗಳು, 2024ರ ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಪ್ರಾರಂಭವಾಗಿದೆ. ಅದೇ ರೀತಿ ಹರಿಯಾಣ ಮತ್ತು ಉತ್ತರಾಖಂಡದಲ್ಲಿ ಅರ್ಜಿದಾರರಿಗೆ ಆಯಾ ರಾಜ್ಯದಲ್ಲಿ ರಚಿಸಲಾದ ಸಮಿತಿಯು ಬುಧವಾರ ಪೌರತ್ವವನ್ನು ನೀಡಿದೆ” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾಗಿ ಭಾರತಕ್ಕೆ ಬಂದಿರುವ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡಲು ಸಿಎಎ ಕಾಯ್ದೆಯನ್ನು ಅನ್ನು ಡಿಸೆಂಬರ್ 2019ರಲ್ಲಿ ಜಾರಿಗೊಳಿಸಲಾಗಿದೆ.
2019ರಲ್ಲಿ ‘ಸಿಎಎ’ ವಿಧೇಯಕವನ್ನು ಸಂಸತ್ತು ಅನುಮೋದಿಸಿತ್ತು. ರಾಷ್ಟ್ರಪತಿಗಳ ಅಂಕಿತ ಬಿದ್ದ ನಂತರ ಪ್ರತಿಪಕ್ಷಗಳ ನೇತೃತ್ವದಲ್ಲಿ ದೇಶಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿದ್ದವು. ಈ ಕಾಯಿದೆಯು ತಾರತಮ್ಯ ನೀತಿಯಿಂದ ಕೂಡಿದ್ದು, ಇದನ್ನು ವಾಪಸ್ ಪಡೆಯಬೇಕು ಎಂದು ಹಲವು ಜನಪರ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ಆಯೋಜಿಸಿತ್ತು. ಈ ವೇಳೆ ನಡೆದ ಗಲಭೆಗಳಲ್ಲಿ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.
