ಕನ್ನಡಿಗರನ್ನು ತಿರಸ್ಕಾರದಿಂದ ನೋಡುತ್ತಿದ್ದವರಿಗೆ ಕರವೇಯಿಂದ ಸ್ಪಷ್ಟ ಸಂದೇಶ: ನಾರಾಯಣಗೌಡ

Date:

Advertisements

“ಬೆಂಗಳೂರಿನಲ್ಲಿ ಕನ್ನಡವನ್ನು, ಕನ್ನಡಿಗರನ್ನು ತಿರಸ್ಕಾರದಿಂದ ನೋಡುತ್ತಿದ್ದವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ಪಷ್ಟ ಸಂದೇಶ ನೀಡಿದೆ. ಕನ್ನಡಿಗರ ತಾಳ್ಮೆಯನ್ನು ಕೆಣಕಿದರೆ ಏನಾಗುತ್ತದೆ ಎಂಬುದಕ್ಕೆ ಇವತ್ತಿನ ಪ್ರತಿಭಟನೆ ಉದಾಹರಣೆ” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ 60% ಕನ್ನಡಕ್ಕೆ ಸರ್ಕಾರದ ಸೂಚನೆ ಇದ್ದರೂ ನಿರ್ಲಕ್ಷ್ಯ ಮಾಡುತ್ತಿರುವವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಡಿ.27ರಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬೃಹತ್ ಜಾಹೀರಾತು ಫಲಕ ಏರಿ, ಇಂಗ್ಲಿಷ್‍ನಲ್ಲಿದ್ದ ಬೋರ್ಡ್ ಅನ್ನು ಹರಿದು ಹಾಕಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕರವೇ ರಾಜ್ಯಾಧ್ಯಕ್ಷ, “ಇಂದು ಬೆಂಗಳೂರು ಮಹಾನಗರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ನಾಮಫಲಕ ಜಾಗೃತಿ ಆಂದೋಲನ ಅಭೂತಪೂರ್ವ ಯಶಸ್ಸು ಕಂಡಿದೆ. ಇದಕ್ಕಾಗಿ ನನ್ನೆಲ್ಲ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ” ಎಂದು ತಿಳಿಸಿದ್ದಾರೆ.

Advertisements

“ಕರ್ನಾಟಕ ರಕ್ಷಣಾ ವೇದಿಕೆಯ ಸಹಸ್ರಾರು ಕಾರ್ಯಕರ್ತರು ರಾಜ್ಯದ ಮೂಲೆಮೂಲೆಯಿಂದ ಹರಿದು ಬಂದು ಕನ್ನಡಿಗರ ಶಕ್ತಿಯನ್ನು ತೋರಿಸಿದ್ದಾರೆ. ಸಾವಿರಾರು ಕನ್ನಡೇತರ ನಾಮಫಲಕಗಳನ್ನು ಕಿತ್ತುಹಾಕಿದ್ದಾರೆ. ನಮ್ಮ ಪ್ರತಿಭಟನೆ ಶಾಂತಿಯುತವಾಗಿಯೇ ನಡೆದಿದೆ. ಕಾರ್ಯಕರ್ತರ ಗುರಿ ಕೇವಲ ಕನ್ನಡೇತರ ನಾಮಫಲಕಗಳೇ ಆಗಿದ್ದವೇ ವಿನಃ ವ್ಯಕ್ತಿಗಳು, ಸಂಸ್ಥೆಗಳು ಆಗಿರಲಿಲ್ಲ. ಹೀಗಾಗಿ ಯಾವುದೇ ರೀತಿಯ ಹಿಂಸಾತ್ಮಕ ಚಳವಳಿ ನಾವು ನಡೆಸಿರುವುದಿಲ್ಲ” ಎಂದು ನಾರಾಯಣಗೌಡ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಫೆ.28ರೊಳಗೆ ನಾಮಫಲಕಗಳನ್ನು ಕನ್ನಡೀಕರಿಸಲು ಆದೇಶಿಸಿದೆ. ಹೀಗಾಗಿ ನಾವು ಫೆ.28ರವರೆಗೆ ಕಾಯುತ್ತೇವೆ. ಆಗಲೂ ಈ ನೆಲದ ಕಾನೂನಿಗೆ, ಈ ನೆಲದ ಭಾಷೆಗೆ ಗೌರವ ನೀಡದವರ ವಿರುದ್ಧ ನಾವು ಇನ್ನೂ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ. ಇವತ್ತಿನ‌ ಚಳವಳಿಯ ಸಂದರ್ಭದಲ್ಲಿ ಬೆಂಗಳೂರಿನ ನಾಗರಿಕರಿಗೆ ಆಗಿರಬಹುದಾದ ಸಣ್ಣಪುಟ್ಟ ತೊಂದರೆಗಳಿಗೆ ನಮಗೆ ಬೇಸರವಿದೆ. ಆದರೆ ಬೆಂಗಳೂರಿನಲ್ಲಿ ಕನ್ನಡವನ್ನು, ಕನ್ನಡಿಗರನ್ನು ಉಳಿಸಿಕೊಳ್ಳಲು ಇಂಥ ದೊಡ್ಡ ಪ್ರಮಾಣದ ಚಳವಳಿ ಅಗತ್ಯವಿತ್ತು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ” ಎಂದು ತಿಳಿಸಿದ್ದಾರೆ.

“ಪೊಲೀಸ್ ಇಲಾಖೆ ಇವತ್ತಿನ ಹೋರಾಟದ ಹಿನ್ನೆಲೆಯಲ್ಲಿ ನಮ್ಮ‌ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆ ಹೂಡುವುದು, ಕಿರುಕುಳ ನೀಡುವುದನ್ನು ಮಾಡಕೂಡದು. ಅಂಥದ್ದೇನಾದರೂ ನಡೆದರೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಬೇಕಾಗುತ್ತದೆ. ಕನ್ನಡ ನಾಮಫಲಕ‌ ಜಾಗೃತಿ ಆಂದೋಲನವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿಸ್ತರಿಸಲು‌ ನಿರ್ಧರಿಸಿದ್ದು, ಎಲ್ಲ ಜಿಲ್ಲಾ, ತಾಲೂಕು ಕೇಂದ್ರಗಳಿಗೆ ದೊಡ್ಡ ಮಟ್ಟದ ‘ಕನ್ನಡ ಯಾತ್ರೆ’ಯನ್ನು ನಡೆಸಲಿದ್ದೇನೆ. ರಾಜ್ಯದ ಪ್ರತಿಯೊಂದು ನಾಮಫಲಕವೂ ಕನ್ನಡೀಕರಣಗೊಳ್ಳುವವರೆಗೆ ನಮ್ಮ ಆಂದೋಲನ ಮುಂದುವರೆಯಲಿದೆ” ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X