ಅಂಗನವಾಡಿ ಕೇಂದ್ರಗಳ ಉನ್ನತೀಕರಣ; LKG, UKG ಆರಂಭಿಸಲು ಸಿಎಂ ಸಮ್ಮತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Date:

“ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಹಾಗೂ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ.

- Advertisement -

ರಾಜ್ಯದ ಅಂಗನವಾಡಿ ಕೇಂದ್ರಗಳ ಉನ್ನತೀಕರಣ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ಇಂದು(ಜೂನ್ 24) ಸಿಎಂ  ಸಿದ್ದರಾಮಯ್ಯನವರ ಜೊತೆಗೆ ಸಭೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, “ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ” ಎಂದು ಸಚಿವರು ಹೇಳಿದರು.

“ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಮ್ಮತಿ ಸೂಚಿಸಿದ್ದಾರೆ. ಮಕ್ಕಳಿಗೆ ಇಲಾಖೆ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

“ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ” ಎಂದರು.

“ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಲು ಯಾವುದೇ ಸಮಸ್ಯೆ ಆಗದು. ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕೃತಿ ಚೌಧರಿ ಪ್ರಕರಣ: IAS ಅಧಿಕಾರಿ ಮೇಧಾರೂಪಂ ವೇತನದಿಂದ 5 ಲಕ್ಷ ರೂ. ದಂಡ ವಸೂಲಿಗೆ ಸುಪ್ರೀಂ ತಡೆಯಾಜ್ಞೆ

ದೆಹಲಿ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ವಿದ್ಯಾರ್ಥಿನಿ ಮತ್ತು ಹೋರಾಟಗಾರ್ತಿ ಆಕೃತಿ ಚೌಧರಿ...

ಗರ್ಬಾ ವೇಳೆ 4.5 ಲಕ್ಷ ಹಿಂದೂ ಯುವತಿಯರು ಪರಾರಿ ಎಂದ ಬಿಜೆಪಿ ಶಾಸಕಿ; ಉಷಾ ಠಾಕೂರ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನವರಾತ್ರಿ ಆಚರಣೆಯ ಭಾಗವಾದ ಗರ್ಬಾ ನೃತ್ಯೋತ್ಸವದ ಸಂದರ್ಭದಲ್ಲಿ ಪ್ರತಿವರ್ಷ ದೇಶದಲ್ಲಿ ಸುಮಾರು...

4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶ ಚುನಾವಣೆ: ಬಿಜೆಪಿಯಿಂದ ₹529 ಕೋಟಿ ವೆಚ್ಚ, ಬಂಗಾಳದಲ್ಲೇ ಶೇ.54ರಷ್ಟು ಖರ್ಚು!

ಕಳೆದ ಚುನಾವಣಾ ಚಕ್ರದಲ್ಲಿ ನಡೆದ ನಾಲ್ಕು ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದ...

ಬಡವರು, ಉಳ್ಳವರು ಎಂದು ಹೇಗೆ ವಿಂಗಡಣೆ ಮಾಡುತ್ತೀರಿ: ಬಿಜೆಪಿ ನಾಯಕರಿಗೆ ಸಿಎಂ ಡಿ ಕೆ ಶಿವಕುಮಾರ್ ಪ್ರಶ್ನೆ

"ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ಕೊಡಬೇಡಿ ಎಂದು ಹೇಳುತ್ತಿದ್ದೀರ. ಹಾಗಾದರೆ ನಿಮ್ಮ ಪ್ರಕಾರ,...