ಡ್ರಗ್ಸ್ ನಿಯಂತ್ರಣಕ್ಕೆ ಸಮಾಜದ ಸಹಕಾರ ಮುಖ್ಯ: ಸಿಎಂ ಬಸವರಾಜ ಬೊಮ್ಮಾಯಿ

Date:

  • ಡ್ರಗ್ಸ್ ನಿಯಂತ್ರಣಕ್ಕೆ ನೆರೆಯ ರಾಜ್ಯಗಳ ಸಹಕಾರ ಅಗತ್ಯ
  • ವಿದೇಶಿ ಪ್ರಜೆಗಳ ವಿಚಾರದಲ್ಲಿ ಕೇಂದ್ರದ ಸಹಕಾರ ಅನಿವಾರ್ಯ

ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಗಂಭೀರ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ದಕ್ಷಿಣ ರಾಜ್ಯಗಳ ನಾರ್ಕೊಟಿಕ್ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾವು ಕರ್ನಾಟಕದಲ್ಲಿ ಡ್ರಗ್ಸ್ ನಿಯಂತ್ರಣದಲ್ಲಿ ಜಿರೊ ಟಾಲೆರನ್ಸ್ ಜಾರಿಗೊಳಿಸಿದ್ದೇವೆ ಎಂದರು.

ಡ್ರಗ್ಸ್ ನಿಯಂತ್ರಣಕ್ಕೆ ಸಮಾಜದ ಸಹಕಾರ ಮುಖ್ಯ. ಸಾಮಾನ್ಯವಾಗಿ ಕ್ರೈಮ್ ಲೀಡ್ಸ್ ದ ಲಾ ಎನ್ನಲಾಗುತ್ತಿತ್ತು. ಆದರೆ ಈಗ ಆ ಮಾತು ಬದಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಮಾರ್ಗದರ್ಶನದಲ್ಲಿ ಕಾನೂನು ಅಪರಾಧವನ್ನು ನಿಯಂತ್ರಿಸುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

ಈ ಮೊದಲು ಪ್ರತಿ ವರ್ಷ ವಾರ್ಷಿಕ 1000 ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ ಈಗ ವರ್ಷದಲ್ಲಿ ಐದು ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ನಾವು ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚಿನ ಜನರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಅಲ್ಲದೆ ಬಹಳ ಕೇಸ್ ಗಳಲ್ಲಿ ಶಿಕ್ಷೆಗೆ ಒಳಪಡಿಸಿದ್ದೇವೆ. ರಾಜ್ಯದಲ್ಲಿ ಡ್ರಗ್ ನಿಯಂತ್ರಣಕ್ಕೆ ಗಂಭೀರ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಡ್ರಗ್ಸ್ ತಡೆ ವಿಚಾರದಲ್ಲಿ ನೆರೆಯ ತಮಿಳುನಾಡಿನ ಸಹಕಾರ ಕೋರಿದ ಸಿಎಂ, ಬೆಂಗಳೂರು ಅಂತಾರಾಷ್ಟ್ರೀಯ ನಗರ ಇದರಿಂದ ಕೇವಲ 60ಕಿ.ಮೀ. ಅಂತರದಲ್ಲಿ ತಮಿಳುನಾಡು ಗಡಿ ಇದೆ. ಹಾಗಾಗಿ ನಾರ್ಕೊಟೆಕ್ ವಿಚಾರದಲ್ಲಿ ನಮ್ಮ ನಡುವೆ ಸಹಕಾರ ಅತ್ಯಂತ ಮುಖ್ಯ ಎಂದರು.

ಇನ್ನು ಡ್ರಗ್ಸ್ ಪ್ರಕರಣ ದಾಖಲಿಸುವಾಗ ಸಾಕಷ್ಟು ಒತ್ತಡ ಎದುರಿಸಿದ್ದೇವೆ. ನಾವು ಎನ್ಡಿಪಿಎಸ್ ಕಾಯ್ದೆಯನ್ನು ಸರಳಗೊಳಿಸಿ ಹೆಚ್ಚಿನ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ. ಡ್ರಗ್ಸ್ ನಿಯಂತ್ರಣ ಮಾಡಲು ಸಾಧ್ಯವಾಗುತ್ತಿದೆ. ಹೊರ ದೇಶಗಳ ಪ್ರಜೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರದ ಸಹಕಾರವೂ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಕೆಶಿ ವಿರುದ್ಧ ಸಿಬಿಐ ತನಿಖೆ ಅನುಮತಿ ಹಿಂಪಡೆದ ಸರ್ಕಾರ; ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ಯತ್ನಾಳ್

ಉಪಮುಖ್ಯಮಂತ್ರಿ‌ ಡಿಕೆ ಶಿವಕುಮಾರ್‌ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ‌...

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 15 ನಿಲ್ದಾಣಗಳ ಆಧುನೀಕರಣ: ಯೋಗೇಶ್ ಮೋಹನ್

“ಬಂಗಾರಪೇಟೆ, ಕೆಂಗೇರಿ, ಕೃಷ್ಣರಾಜಪುರ, ಮಂಡ್ಯ, ಚನ್ನಪಟ್ಟಣ, ಹೊಸೂರು, ಹಿಂದೂಪುರ, ಕುಪ್ಪಂ, ಮಾಲೂರು,...

ಶೂದ್ರರು, ದಲಿತರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಗೆ ಪ್ರವೇಶ ಇಲ್ಲ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು:‌ ಸಿದ್ದರಾಮಯ್ಯ ಗೂಳಿಹಟ್ಟಿ ಶೇಖರ್...

ಪ್ರಜಾಪ್ರಭುತ್ವ, ಜಾತ್ಯತೀತತೆ ಹಾಗೂ ಮಾನವ ಹಕ್ಕುಗಳ ಉಳಿವಿಗಾಗಿ ಆಂದೋಲನಕ್ಕೆ ಕರೆ

ಸೆಂಟರ್ ಫಾರ್ ಪ್ರೊಟೆಕ್ಟಿಂಗ್ ಡೆಮಾಕ್ರೆಟಿಕ್ ರೈಟ್ಸ್ ಅಂಡ್ ಸೆಕ್ಯುಲರಿಸಂ ಕರೆ ...