ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಇಂದು (ಮಾರ್ಚ್ 29) ಘೋಷಣೆಯಾಗಲಿದ್ದು ಕೇಂದ್ರ ಚುನಾವಣಾ ಆಯೋಗ ಇಂದು ಸುದ‍್ಧಿಗೋಷ್ಠಿ ನಡೆಸಿ ದಿನಾಂಕ ಪ್ರಕಟಿಸಲಿದೆ.
ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕೈಗೊಂಡಿದ್ದ ಕೊಪ್ಪಳ, ಹಾವೇರಿ ಜಿಲ್ಲಾ ಪ್ರವಾಸ ರದ್ಧಾಗಿದೆ. ಬಸವರಾಜ ಬೊಮ್ಮಾಯಿ ಅವರ ಸರ್ಕಾರಿ ಕಾರ್ಯಕ್ರಮಗಳು ರದ್ಧಾಗಿವೆ.
ಬಸವರಾಜ ಬೊಮ್ಮಾಯಿ ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ನೀಡಬೇಕಿತ್ತು. ಶಿಗ್ಗಾವಿ ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ಧಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಬೆಳಿಗ್ಗೆ 11:30ಕ್ಕೆ ಪ್ರಕಟವಾಗಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಂಭವವಿದೆ. ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಏಪ್ರಿಲ್ ಮೊದಲ ವಾರದಲ್ಲಿ ದಿನಾಂಕ ಪ್ರಕಟವಾಗಬಹುದು ಎಂದು ಹೇಳಲಾಗಿತ್ತು. ಆದರೆ, ಚುನಾವಣಾ ಆಯೋಗ ಇಂದೇ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಗೆ ಸಿದ್ಧವಾಗಿದೆ.