ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ, ನಿಯಂತ್ರಣಕ್ಕೆ‌ ಸಭೆ ಕರೆದ ಸಿಎಂ: ಗೃಹ ಸಚಿವ ಪರಮೇಶ್ವರ್

Date:

Advertisements

ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆ ಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಇವುಗಳನ್ನು ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೇನ್‌ ಕಿಲ್ಲರ್ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ವೈದ್ಯರು ಪ್ರಿಸ್‌ಕ್ರೈಬ್ ಮಾಡಿರುವುನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್ ಕಂಟ್ರೋಲರ್ಸ್‌ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು” ಎಂದರು.

“ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ‌ ಸಂಖ್ಯೆ ಕಡಿಮೆಯಾಗಿವೆ. ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ‌ ಮಾಡಿದ್ದೇವೆ. ಈಗ ಮೆಡಿಕಲ್‌ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ‌” ಎಂದರು.

Advertisements

“ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ. ಎಲ್ಲ ರೀತಿಯ ನಿಯಂತ್ರಣಕ್ಕೆ‌ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸುಮಾರು ಪ್ರಕರಣಗಳಲ್ಲಿ ಯಶಸ್ವಿಯಾಗಿದ್ದೇವೆ” ಎಂದು ತಿಳಿಸಿದರು.

“ಪಿಎಸ್ಐ ಪರೀಕ್ಷೆಯನ್ನು ಸೆ.22ರಿಂದ ಸೆ.28ಕ್ಕೆ ಮುಂದೂಡಲಾಗಿತ್ತು. ಸೆ.28ರಂದು ಸಹ ಯುಪಿಎಸ್‌ಸಿ ಇಂಗ್ಲೀಷ್ ಪರೀಕ್ಷೆ ಇದೆ ಎಂಬ ಮಾಹಿತಿ ಗೊತ್ತಾದ ಕೂಡಲೇ, ಆ ದಿನವನ್ನು ಅಕ್ಟೋಬರ್ 3ಕ್ಕೆ ಮುಂದೂಡಲಾಗಿತ್ತು. ಕರ್ನಾಟಕ ಪ್ರರೀಕ್ಷಾ ಪ್ರಾಧಿಕಾರವು ಅ.3ರಂದು ಪರೀಕ್ಷೆ ನಿಗದಿ ಪಡಿಸಿ ಅಧಿಕೃತವಾಗಿ ಪ್ರಕಟಣೆ ಮಾಡಿದೆ” ಎಂದರು.

“ಮೂರು ಜಿಲ್ಲೆಗಳಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿರುವುದು ಕಂಡು ಬಂದಿದೆ. ಈ‌ ಪ್ರಕರಣಗಳಲ್ಲಿ ಎಲ್ಲರನ್ನು ಬಂಧಿಸಲಾಗಿದೆ. ‘ಕೇಂದ್ರ ಸರ್ಕಾರ ಪ್ಯಾಲೆಸ್ತೀನ್‌ಗೆ ಬೆಂಬಲಿಸುತ್ತೇವೆ ಎಂದು ಹೇಳಿಕೆ ಕೊಟ್ಟಿದೆ. ಹೀಗಾಗಿ ಇದರಲ್ಲಿ ನಮ್ಮ ತಪ್ಪೇನಿದೆ ಎಂದು ವಾದಿಸಿದ್ದಾರೆ.’ ಆದಾಗ್ಯೂ ಸಹ ಅವರನ್ನು ಬಂಧಿಸಿದ್ದೇವೆ. ಯಾರು ಈ ಸಂದರ್ಭದಲ್ಲಿ ನಿಮಗೆ ಪ್ರಚೋದನೆ ಮಾಡಿ, ಬಾವುಟ ಹಾರಿಸಲು ಹೇಳಿದರು ಎಂಬ ಕುರಿತು ಬಂಧಿತರ ವಿಚಾರಣೆ ನಡೆಯುತ್ತಿದೆ. 17ರಿಂದ 21 ವರ್ಷ ವಯಸ್ಸಿನ ಹುಡುಗರು ಇದನ್ನು ಮಾಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಪ್ರಧಾನಿಯಾಗಿ ನೂರು ದಿನ: ಹಿನ್ನಡೆಯೋ, ಮುನ್ನಡೆಯೋ?

ನಾಗಮಂಗಲ‌ ಪ್ರಕರಣದಲ್ಲಿ ತನಿಖೆಗೂ ಮುನ್ನ ಕ್ಲಿನ್‌ಚಿಟ್ ಆರೋಪದ ಕುರಿತು ಪ್ರತಿಕ್ರಿಯಿಸಿ, “ದನ್ನು ದೊಡ್ಡ ಸಮಸ್ಯೆ ಮಾಡುವ ನಿಟ್ಟಿನಲ್ಲಿ ಬಿಜೆಪಿಯವರು ಹೇಳಿಕೆ ನೀಡುತ್ತಿದ್ದಾರೆ‌. ನಾವು ಕಾನೂನು ಪ್ರಕಾರ ಏನೆಲ್ಲ‌ ಕ್ರಮ ತೆಗೆದುಕೊಳ್ಳಬೇಕು, ಅದೆಲ್ಲವನ್ನು ಕೂಡ ಮುಲಾಜಿಲ್ಲದೆ ಮಾಡಿದ್ದೇವೆ. ಮುಂದಿನ ತನಿಖೆಯಲ್ಲಿ ಏನೆಲ್ಲ ವಿಚಾರಗಳು ಹೊರ ಬರುತ್ತವೆ, ಅದರ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ರೀತಿಯ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನೂರು ಸಲ ಹೇಳುತ್ತೇನೆ. ದಿನಕ್ಕೆ ಒಬ್ಬೊಬ್ಬರಂತೆ ಬಿಜೆಪಿ ಮುಖಂಡರು ನಾಗಮಂಗಲ ವಿಚಾರದಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಇದರಲ್ಲಿ ಬಿಜೆಪಿಯವರು ತಮ್ಮದೇ ಆದ ಒಂದು ಡಿಸೈನ್ ಮಾಡಿಕೊಂಡಿದ್ದಾರೆ” ಎಂದರು.

“ನಾಗಮಂಗಲ‌ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಬಗ್ಗೆ ಕೆಲವರು ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಮ್ಮ ಅಧಿಕಾರಿಗಳು ಹೇಳುತ್ತಿದ್ದಾರೆ.‌ ಇದನ್ನು ಪುನರ್ ಪರಿಶೀಲಿಸಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದರು.

“ಶಾಸಕ ಮುನಿರತ್ನನನ್ನು ಏಕಾಏಕಿ ಬಂಧಿಸಿಲ್ಲ. ಆತನ ವಿರುದ್ಧ ದೂರು ಕೊಟ್ಟಿದ್ದರು. ಇದಕ್ಕೆ ಪೂರಕವಾದ ವಿಡಿಯೋ ನೀಡಿದ್ದರು. ಅದನ್ನು ಆಧರಿಸಿ ಬಂಧಿಸಲಾಗಿದೆ. ಈಗಾಗಲೇ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್ಎಲ್‌ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.

“ಕಳೆದ ವರ್ಷ ಗಣೇಶ ಆಚರಣೆ ವೇಳೆ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಕೋಮು ಸಂಘರ್ಷಗಳಂತಹ ಘಟನೆಗಳು ಸಂಭವಿಸಿಲ್ಲ. ಈ ವರ್ಷವೂ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಅಹಿತಕರ ಘಟನೆ ಆಗಲು ಬಿಡುವುದಿಲ್ಲ ಎಂದು ಈ ಮೊದಲೇ ಹೇಳಿದ್ದೇವೆ. ಬಿಜೆಪಿಯವರು ಎಲ್ಲವನ್ನು ತಿರುಚುತ್ತಿದ್ದಾರೆ. ಇದೆಲ್ಲವನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X