ಜಿಎ‌ಸ್‌ಟಿ ಸಂಗ್ರಹಣೆಯಲ್ಲಿ ಪ್ರಥಮ ಸ್ಥಾನಕ್ಕೆ ಏರಲು ಪ್ರಯತ್ನಿಸಿ: ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ

Date:

Advertisements

ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು (ಮೇ 17) ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ

Advertisements

“ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು. ನಾನು ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರವನ್ನು ನಿರ್ವಹಿಸಿದ್ದೇನೆ. ಈಗ ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಪೂರೈಸಿದ್ದು, ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ” ಎಂದರು.

ತೆರಿಗೆ ಸಂಗ್ರಹಣೆಯಲ್ಲಿ ಗುರಿ ಸಾಧನೆ ಆಗಬೇಕು

“ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಪ್ರಮುಖ ಪಾತ್ರ ವಹಿಸುತ್ತಿದ್ದು, ಇದಕ್ಕಾಗಿ ಎಲ್ಲ ಅಧಿಕಾರಿಗಳಿಗೆ ಅಭಿನಂದನೆಗಳು. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆಯಾಗುತ್ತದೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹಣೆ ಸಾಧ್ಯವಾಗುತ್ತದೆ. ಕಳೆದ ವರ್ಷ ತೆರಿಗೆ ಸಂಗ್ರಹಣೆಗೆ 1,03,000 ಕೋಟಿಗಳ ಗುರಿನಿಗದಿಪಡಿಸಲಾಗಿದ್ದು, ಹೆಚ್ಚುವರಿ 17000 ಕೋಟಿಗಳ ತೆರಿಗೆ ಸಂಗ್ರಹಣೆಯನ್ನು ಸಾಧಿಸಲಾಗಿತ್ತು. ಈ ವರ್ಷ ತೆರಿಗೆ ಸಂಗ್ರಹಣೆಗೆ 1,20,000 ಕೋಟಿಗಳ ಗುರಿಯನ್ನು ನೀಡಲಾಗಿದ್ದು, ಅಧಿಕಾರಿಗಳು ಗುರಿಮೀರಿ ಸಾಧನೆ ಮಾಡಬೇಕಿದೆ. ಈ ವರ್ಷ 409000 ಕೋಟಿ ರೂ. ಗಳ ಬಜೆಟ್ ಮಂಡಿಸಲಾಗಿದ್ದು, ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರೂ.ಗಳನ್ನು ಗ್ಯಾರಂಟಿಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೇ ರಾಜ್ಯ ಆರ್ಥಿಕ ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷದವರು ಟೀಕಿಸಿದ್ದರು. ಸರ್ಕಾರದ ಈ ಯಶಸ್ಸಿಗೆ ಇಲಾಖೆಯ ಅಧಿಕಾರಿಗಳ ಶ್ರಮ ಅಡಗಿದೆ” ಎಂದು ಹೇಳಿದರು.

ತೆರಿಗೆ ಪ್ರಕ್ರಿಯೆಯಲ್ಲಿ ಸುಧಾರಣೆ ತರಲು ಸರ್ಕಾರ ಬದ್ಧ

“ನಾನು ಹಣಕಾಸಿನ ಮಂತ್ರಿಯಾಗಿದ್ದರೂ ಸಹ ತೆರಿಗೆ ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಅನಗತ್ಯ ಮದ್ಯಪ್ರವೇಶ ಮಾಡಲು ಬಯಸುವುದಿಲ್ಲ. ಆದರೆ ಅಧಿಕಾರಿಗಳು ಇಲಾಖೆಗೆ ನೀಡಿರುವ ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಲು ಪ್ರಯತ್ನಿಸಬೇಕು. ಬೆಂಗಳೂರಿನಲ್ಲಿ ತೆರಿಗೆ ಸೋರಿಕೆ ಹೆಚ್ಚಿನ ಮಟ್ಟದಲ್ಲಿದೆ. ಕರ್ನಾಟಕ ತೆರಿಗೆ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿದೆ. ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುಧಾರಣೆಗಳನ್ನು ತರಲು ಸರ್ಕಾರ ಬದ್ಧವಾಗಿದೆ. ತೆರಿಗೆ ಅಧಿಕಾರಿಗಳ ಸಂಘದ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಲಾಗುವುದು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಎಂದಿಗೂ ಸ್ಪಂದಿಸುತ್ತದೆ. ಅಂತೆಯೇ ಕರ್ತವ್ಯಲೋಪ ಎಸಗುವ ಅಧಿಕಾರಿ ನೌಕರರ ಮೇಲೆ ಶಿಸ್ತಿನ ಕ್ರಮವನ್ನೂ ಸರ್ಕಾರ ತೆಗೆದುಕೊಳ್ಳುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X