ಜಾರ್ಖಂಡ್ | ವಿಶ್ವಾಸಮತ ಗೆದ್ದ ನೂತನ ಸಿಎಂ ಚಂಪೈ ಸೊರೇನ್

Date:

ಜಾರ್ಖಂಡ್‌ನಲ್ಲಿ ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ನೂತನ ಸಿಎಂ ಚಂಪೈ ಸೊರೇನ್ ಅವರು ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಸರ್ಕಾರ ಸುಭದ್ರವಾಗಿರುವುದನ್ನು ಸಾಬೀತುಪಡಿಸಿದ್ದಾರೆ.

ಸಿಎಂ ಚಂಪೈ ಸೊರೆನ್ ಅವರ ನೇತೃತ್ವದ ಜಾರ್ಖಂಡ್ ಸರ್ಕಾರಕ್ಕೆ 47 ಶಾಸಕರು ಬಹುಮತದ ಬೆಂಬಲ ಸೂಚಿಸಿದರೆ, 29 ಶಾಸಕರು ವಿಪಕ್ಷ ಸದಸ್ಯರ ಬೆಂಬಲದಲ್ಲಿದ್ದರು.

ಒಟ್ಟು 81 ಸದಸ್ಯರ ಜಾರ್ಖಂಡ್‌ ವಿಧಾನಸಭೆಯಲ್ಲಿ ಜೆಎಂಎಂ 29 ಶಾಸಕರನ್ನು ಹೊಂದಿದ್ದು ಮಿತ್ರ ಪಕ್ಷ ಕಾಂಗ್ರೆಸ್‌ 17 ಶಾಸಕರನ್ನು ಹೊಂದಿದೆ. ಆರ್‌ಜೆಡಿ ಮತ್ತು ಸಿಪಿಐ (ಎಂಎಲ್) ಪಕ್ಷದಿಂದ ತಲಾ ಒಬ್ಬ ಶಾಸಕರಿದ್ದಾರೆ. ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು 41 ಶಾಸಕರ ಬೆಂಬಲದ ಅಗತ್ಯವಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿಯವರು ಶಾಸಕರನ್ನು ಖರೀದಿಸಬಹುದು ಎಂಬ ಆತಂಕದಿಂದ ಫೆಬ್ರವರಿ 2ರಂದು ಹೈದರಾಬಾದ್‌ಗೆ ತೆರಳಿದ್ದ ಜೆಎಂಎಂ ನೇತೃತ್ವದ ಮೈತ್ರಿಕೂಟದ 40 ಶಾಸಕರು, ಸೋಮವಾರ ವಿಶ್ವಾಸಮತ ಯಾಚನೆ ಕಾರಣ ಭಾನುವಾರ ರಾಂಚಿಗೆ ಬಂದಿಳಿದಿದ್ದರು. ಎಲ್ಲ ಶಾಸಕರು ಮೂರು ದಿನಗಳಿಂದ ಹೈದರಾಬಾದ್‌ನ ಹೊರವಲಯದ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಿಸುವುದಕ್ಕೂ ಮುನ್ನ ಮುಖ್ಯಮಂತ್ರಿ ಹುದ್ದೆಗೆ ಜನವರಿ 31ರಂದು ರಾಜೀನಾಮೆ ನೀಡಿದ್ದರು.

ಫೆಬ್ರವರಿ 2ರಂದು ಚಂಪೈ ಸೊರೇನ್ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದು ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೇನ್ ಅವರಿಗೆ ಮುಂದಿನ 10 ದಿನಗಳಲ್ಲಿ ವಿಧಾನಸಭೆಯಲ್ಲಿ ತಮ್ಮ ಬಹುಮತವನ್ನು ಪ್ರದರ್ಶಿಸುವಂತೆ ಸೂಚಿಸಿದ್ದರು.

ಇದನ್ನು ಓದಿದ್ದೀರಾ? ಜಾರ್ಖಂಡ್ | ವಿಶ್ವಾಸ ಮತಯಾಚನೆಗೆ ವಿಧಾನಸಭೆಗೆ ಹೇಮಂತ್ ಸೊರೇನ್ ಆಗಮನ; ರಾಜ ಭವನದ ಮೇಲೆ ಆರೋಪ

ಚಂಪೈ ಸೊರೇನ್ ಅವರೊಂದಿಗೆ ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಮತ್ತು ಕಾಂಗ್ರೆಸ್‌ನ ಅಲಂಗೀರ್ ಆಲಂ ಸೇರಿದಂತೆ ಇಬ್ಬರು ನಾಯಕರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ನಡೆಸಲಾಗಿದ್ದ ಮೊದಲ ಸಂಪುಟ ಸಭೆಯಲ್ಲಿ ಫೆ. 5ರಂದು ವಿಶ್ವಾಸಮತ ಯಾಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಸದ್ಯ ನ್ಯಾಯಾಂಗ ವಶದಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ವಿ ಕೂಡ ವಿಶ್ವಾಸಮತ ಯಾಚನೆಯ ಹಿನ್ನೆಲೆಯಲ್ಲಿ ವಿಧಾನಸಭೆಗೆ ಆಗಮಿಸಿದ್ದರು. ಜಾರ್ಖಂಡ್ ವಿಧಾನಸಭೆಗೆ ಹಾಜರಾಗಲು ಪಿಎಂಎಲ್‌ಎ ನ್ಯಾಯಾಲಯ ಅನುಮತಿ ನೀಡಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ...

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ | ಅಗತ್ಯ ಬಿದ್ದರೆ ತನಿಖೆ ಎನ್‌ಐಎಗೆ ವಹಿಸುತ್ತೇವೆ: ಸಿಎಂ ಸಿದ್ದರಾಮಯ್ಯ

"ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸುವ ಬಗ್ಗೆ ಅಗತ್ಯ...

ಮೋದಿಯ ‘ದ್ರೋಹದ ಗ್ಯಾರಂಟಿ’; ರೈಲ್ವೆ ಪಾಲಿಸಿ ವಿರುದ್ಧ ರಾಹುಲ್ ಕಿಡಿ

ಕೇಂದ್ರ ರೈಲ್ವೆ ಸಚಿವಾಲಯವು ಹಿರಿಯ ನಾಗರಿಕರಿಗಿದ್ದ ವಿನಾಯತಿಯನ್ನೂ ಕಿತ್ತುಕೊಂಡು 3,700 ಕೋಟಿ...

ಪೋಲಿಯೊ ನಿರ್ಮೂಲನೆ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದನ್ನ ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ....