ಸಿಎಂ ಬದಲಾವಣೆ ವಿಚಾರ | ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ ಕೆ ಶಿವಕುಮಾರ್

Date:

“ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

- Advertisement -

ದೆಹಲಿಯಲ್ಲಿ ಮಾತನಾಡುತ್ತಿದ್ದ ವೇಳೆ, “ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ” ಬಗ್ಗೆ ಕೇಳಿದಾಗ, “ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮಧ್ಯೆ-ಮಧ್ಯೆ ನೀಡುವುದು ಸಹಜ. ಅವರ ಮಾತಿಗೆ ಹೆಚ್ಚು ಗಮನ ಕೊಡಬಾರದು. ಪಕ್ಷದ ತೀರ್ಮಾನವೇ ಅಂತಿಮ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಸಚಿವ ಸ್ಥಾನ ಬಿಡಲು ಸಿದ್ಧ ನನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ” ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಅದಕ್ಕೆ ಉತ್ತರ ಕೊಡುತ್ತೇವೆ” ಎಂದರು.

ನೆಲ, ಜಲ, ಭಾಷೆ ಉಳಿವಿಗಾಗಿ ಸಂಸದರ ಜತೆ ಚರ್ಚೆ:

“ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭಾ ಸದಸ್ಯರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಸಂಸತ್ ಕಲಾಪದಲ್ಲಿ ಹೋರಾಟ ಮಾಡುವಂತೆ ತಿಳಿಸಿದ್ದೇವೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ರಾಜ್ಯಕ್ಕಾಗಿ ದೆಹಲಿಯಲ್ಲಿ ಪಕ್ಷಭೇದ ಮರೆತು ಒಂದಾದ ರಾಜಕೀಯ ಮುಖಂಡರು

“ಇಷ್ಟು ದಿನ ರಾಜಕಾರಣವಾಯಿತು. ಈಗ ರಾಜ್ಯದ ಅಭಿವೃದ್ಧಿಗಾಗಿ, ನೆಲ, ಜಲ, ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಈ ವಿಚಾರವನ್ನು ಸಂಸದರ ಗಮನಕ್ಕೆ ತರಲಾಗುವುದು. ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕಾಗಿ ದುಡಿಯುತ್ತಾರೆ ಎನ್ನುವ ನಂಬಿಕೆಯಿದೆ” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...