ಮಂಗಳೂರಿಗೆ ತೆರಳಲು ನನಗೆ ಸಿಎಂ ಸೂಚನೆ ನೀಡಿಲ್ಲ, ಚರ್ಚಿಸಿದ್ದಾರಷ್ಟೇ: ಬಿ ಕೆ ಹರಿಪ್ರಸಾದ್‌

Date:

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರೂ ಆದ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಡೀರ್ ಭೇಟಿ ನೀಡಿದ್ದು, ಕರಾವಳಿ ಜಿಲ್ಲೆಗಳ ಪರಿಸ್ಥಿತಿಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ.

- Advertisement -

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಈದಿನ ಡಾಟ್‌ ಕಾಮ್ ಬಿ.ಕೆ. ಹರಿಪ್ರಸಾದ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ, “ನಾನೇ ಸಿಎಂ ಸಿದ್ದರಾಮಯ್ಯ ಅವರನ್ನು ಬೆಳಗಿನ ಉಪಾಹಾರಕ್ಕೆ ಆಹ್ವಾನಿಸಿದ್ದೆ. ಭೇಟಿ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಸರಣಿ ಕೊಲೆಗಳು, ಹಿಂಸೆಯ ಘಟನೆಗಳು, ಪ್ರಚೋದನಕಾರಿ ಭಾಷಣಗಳು, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಇತ್ಯಾದಿಗಳ ಬಗ್ಗೆ ಸಿಎಂ ಅವರು ನನ್ನ ಜೊತೆ ಚರ್ಚಿಸಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಮಂಗಳೂರಿಗೆ ಹೋಗಲು ಸಿಎಂ ತಮಗೆ ಸೂಚನೆ ನೀಡಿದ್ದಾರೆಯೇ ಎಂದು ಪ್ರಶ್ನಿಸಿದಾಗ, “ಮಂಗಳೂರಿಗೆ ತೆರಳಲು ನನಗೆ ಸೂಚನೆ ನೀಡಿಲ್ಲ, ಚರ್ಚಿಸಿದ್ದಾರಷ್ಟೇ. ಹಾಗಾಗಿ, ನಾನು ಮಂಗಳೂರಿಗೆ ಹೋಗುವುದಿಲ್ಲ” ಎಂದು ಈ ದಿನ ಡಾಟ್‌ ಕಾಮ್‌ಗೆ ಪ್ರತಿಕ್ರಿಯಿಸುತ್ತಾ ಬಿ ಕೆ ಹರಿಪ್ರಸಾದ್‌ ತಿಳಿಸಿದರು.

ಕಳೆದ 2023ರ ವಿಧಾನಸಭಾ ಚುನಾವಣೆಯ ಹೊತ್ತಲ್ಲಿ ಬಿ ಕೆ ಹರಿಪ್ರಸಾದ್‌ ಸಿದ್ದರಾಮಯ್ಯ ಜೊತೆ ಮುನಿಸಿಕೊಂಡಿದ್ದರು. ನಂತರ ಸಿಎಂ ನಿವಾಸಕ್ಕೆ ಹರಿಪ್ರಸಾದ್‌ ತೆರಳಿ ಚರ್ಚೆ ನಡೆಸಿದ್ದರು. ಅಲ್ಲಿಂದ ಅವರಿಗೆ ಸಂಚಿವ ಸಂಪುಟದಲ್ಲಿ ಅವಕಾಶ ಸಿಗಲಿದೆ ಎಂಬುದು ಚರ್ಚೆಯಾಗುತ್ತಿದೆ. ಆದರೆ, ಈಗ ಅವರು ಹರಿಪ್ರಸಾದ್‌ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವುದರಿಂದ ಸಿಎಂ ಅವರೇ ಅವರ ಹತ್ತಿರ ಹೋಗಿದ್ದು ಗಮನಾರ್ಹ.

WhatsApp Image 2025 05 29 at 10.55.42 AM

ಸಿಎಂ ಅವರ ಇಂದಿನ ಭೇಟಿಯ ವೇಳೆ ರಾಜ್ಯದ ಗೃಹ ಸಚಿವ ಪರಮೇಶ್ವರ್‌ ಮತ್ತು ದಕ್ಷಿಣ ಕನ್ನಡ ಉಸ್ತುವಾರಿ ದಿನೇಶ್‌ ಗುಂಡೂರಾವ್‌ ಅವರ ಕಾರ್ಯವೈಖರಿ ಬಗ್ಗೆ ಹಾಗೂ ಅವರನ್ನು ಬದಲಾಯಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆಗೆ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಕೂಡ ಬಿ ಕೆ ಹರಿಪ್ರಸಾದ್ ಅವರು, ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಬಿ.ಕೆ. ಹರಿಪ್ರಸಾದ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಕರಾವಳಿಯ ಪರಿಸ್ಥಿತಿಗಳ ಬಗ್ಗೆ ಗಂಭೀರ ಚರ್ಚೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಂಬುದು ಪ್ರಮುಖ ಹುದ್ದೆ. ಹೈಕಮಾಂಡ್‌ ಮತ್ತು ರಾಜ್ಯ ಕಾಂಗ್ರೆಸ್‌ನ ಕೊಂಡಿಯಾಗಿ ಹರಿಪ್ರಸಾದ್‌ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ಗೆ ಹರಿಪ್ರಸಾದ್‌ ಮೂಲಕವೇ ಕೆಲವು ವಿಚಾರಗಳು ಪ್ರಸ್ತಾಪವಾಗುತ್ತವೆ. ಮಂಗಳೂರಿನ ಬೆಳವಣಿಗೆಯ ಬಗ್ಗೆ ಹರಿಪ್ರಸಾದ್ ಅವರ ಮೂಲಕ ಹೈಕಮಾಂಡ್‌ ಮಾಹಿತಿ ತರಿಸಿಕೊಳ್ಳುತ್ತಿರುವುದಾಗಿ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ; ಕಿಂಗ್‌ಪಿನ್‌ಗಳ ಪತ್ತೆ ಎಂದು?

ಭಟ್ಕಳ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಟ್ಕಾ ಜುಗಾರಾಟದ ವಿರುದ್ಧ ಪೊಲೀಸರು...

ಆಲಮಟ್ಟಿ 3ನೇ ಹಂತಕ್ಕೆ ವೇಗ ನೀಡಲು ಅವಳಿ ಜಿಲ್ಲೆಗಳ ಹೋರಾಟಗಾರರ ರಣತಂತ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...

ಯಲ್ಲಾಪುರ | ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ ತೆರವಿಗೆ ಬಿಜೆಪಿ ಆಗ್ರಹ; ಇಲ್ಲವಾದರೆ ಪ್ರತಿಭಟನೆ ಎಚ್ಚರಿಕೆ

ಯಲ್ಲಾಪುರ: ತಾಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ವಿಧಿಸಿರುವ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸುವಂತೆ...

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ ಕೃಷ್ಣಾ ತೀರದ ರೈತರು

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ...