ಅತಿಥಿ ಉಪನ್ಯಾಸಕರ ಗೌರವಧನ 5ರಿಂದ 8 ಸಾವಿರ ಹೆಚ್ಚಳಕ್ಕೆ ಸಿಎಂ ಸಮ್ಮತಿ: ಮುಷ್ಕರ ಹಿಂಪಡೆಯಲು ಮನವಿ

Date:

Advertisements

ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮತ್ತು ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಮ್ಮತಿ ನೀಡಿದ್ದು, ಅತಿಥಿ ಉಪನ್ಯಾಸಕರು ಕೂಡಲೇ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.

ಅವರು ಇಂದು ಮುಷ್ಕರ ನಿರತ ಅತಿಥಿ ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಬೇಡಿಕೆಗಳ ಕುರಿತು ಚರ್ಚಿಸಿದರು.

“ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕುಗಳಿರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ಧ್ವನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ ಎಂದು ಇದೇ ವೇಳೆ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸ್ಮರಿಸಿಕೊಂಡರು.

Advertisements

“ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ” ಎಂದು ನಿಯೋಗಕ್ಕೆ ತಿಳಿಸಿದರು.

cm siddu 6

“ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ” ಎಂದು ಸಿಎಂ ಭರವಸೆ ನೀಡಿದರು.

ಇದಲ್ಲದೇ, ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.

ನೇಮಕಾತಿಯಲ್ಲಿ ಅವರ ಸೇವಾನುಭವ ಆಧರಿಸಿ ವೈಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸಹ ಸಿಎಂ ಸಮ್ಮತಿಸಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಎಂ.ಎಸ್. ಶ್ರೀಕರ್‌, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ. ಜಗದೀಶ್‌ ಮತ್ತು ಇತರ ಹಿರಿಯ ಅಧಿಕಾರಿಗಳು, ಅತಿಥಿ ಉಪನ್ಯಾಸಕರ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X