ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ

Date:

Advertisements

ಜಾತ್ಯಾತೀತ ಜನತಾದಳ ಪಕ್ಷದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ. ಇದಲ್ಲದೇ, ಇವರೊಂದಿಗೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿದೆ.

ಇಂದು ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಉಚ್ಚಾಟನೆ ಪ್ರಸ್ತಾಪಕ್ಕೆ ಒಮ್ಮತದಿಂದ ಅನುಮೋದನೆ ನೀಡಲಾಗಿದೆ.

ಜೆಡಿಎಸ್ ಕಚೇರಿಯಲ್ಲಿ ನಡೆದ ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ನಡೆದಿದ್ದು, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿಯ ಎಲ್ಲಾ ಸದಸ್ಯರು, ಇತರ ರಾಜ್ಯ ಘಟಕಗಳ ಅಧ್ಯಕ್ಷರು ಭಾಗಿಯಾಗಿದ್ದರು.

Advertisements

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ, ತಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದರೂ ತನ್ನನ್ನು ಪರಿಗಣಿಸದೆ ದೆಹಲಿಗೆ ತೆರಳಿ ಮೈತ್ರಿ ಮಾತುಕತೆ ನಡೆಸಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದ್ದರು. ಅಲ್ಲದೆ, ಮೈತ್ರಿ ಮಾಡಿಕೊಳ್ಳದಂತೆ ಒತ್ತಡ ಹೇರುತ್ತಲೇ ಇದ್ದರು.

ಆದಾಗ್ಯೂ, ಜೆಡಿಎಸ್​​ ಪಕ್ಷದಿಂದ ಇಬ್ರಾಹಿಂ ಅವರನ್ನು ಅಮಾನತುಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡ ಅವರು ಇತ್ತೀಚೆಗೆ ಆದೇಶಿಸಿದ್ದರು.ಅಲ್ಲದೇ, ಅದರ ಉಸ್ತುವಾರಿಯನ್ನು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ವಹಿಸಿದ್ದರು.

ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಅಲ್ಲದೆ ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷವನ್ನು ಸಂಘಟನೆ ಮಾಡಲು, ಬಲವರ್ಧಿಸಲು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಜತೆ ಮೈತ್ರಿ/ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಈ ಹೊಂದಾಣಿಕ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ.

ಈ ವಿಚಾರವಾಗಿ ನಡೆದ ಸಭೆಗಳಲ್ಲಿ ಸಿಎಂ ಇಬ್ರಾಹಿಂ ಅವರು ಉಪಸ್ಥಿತರಿದ್ದು ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದರು. ತದನಂತರ ಈ ತೀರ್ಮಾನದ ವಿರುದ್ಧ ವಿರೋಧಾಭಾಸದ ಹೇಳಿಕೆ ನೀಡುತ್ತಿದ್ದರು ಎಂದು ಜೆಡಿಎಸ್ ತಿಳಿಸಿತ್ತು.

ಈ ಕಾರಣಗಳಿಗಾಗಿ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜೆಡಿಎಸ್ ಸಂವಿಧಾನದ ಸೆಕ್ಷನ್ 10ರ ಅನ್ವಯ ನವೆಂಬರ್ 19ರಿಂದ ಅನ್ವಯವಾಗುವಂತೆ ವಿಸರ್ಜನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ದೇವೇಗೌಡರು ತಿಳಿಸಿದ್ದರು. ಬಳಿಕ ಪಕ್ಷದ ಉಸ್ತುವಾರಿಯನ್ನು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X