ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಬಗ್ಗೆ ನೀಲ ನಕಾಶೆ ಒದಗಿಸಲು ಸಚಿವರಿಗೆ ಸಿಎಂ ಸೂಚನೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನಾಲ್ಕನೇ ಸಭೆ ನಡೆಯಿತು.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳ ಅನುಷ್ಠಾನಕ್ಕೆ ರೂ. 179.30 ಕೋಟಿ ಟೆಂಡರ್‌ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಸೈನಿಕ ಶಾಲೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇನ್ನುಳಿದ ಸಿವಿಲ್‌ ಕಾಮಗಾರಿಗಳನ್ನು ತಿಂಗಳ ಒಳಗಾಗಿ ಪೂರ್ಣಗೊಳಿಸಲು ಸಿಎಂ ಸೂಚಿಸಿದರು.

ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿರುವ ರೂ. 30 ಕೋಟಿ ಕಾಮಗಾರಿ ಅನುಷ್ಠಾನ ಕುರಿತು ಕುರಿತು ಜಿಲ್ಲಾಧಿಕಾರಿ ಹಾಗೂ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಪರಿಶೀಲಿಸಿ ವರದಿಯನ್ನು ಸಲ್ಲಿಸಲು ಸಿದ್ದರಾಮಯ್ಯ ಸೂಚಿಸಿದರು.

Advertisements

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.67 ಮತ್ತು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಶೇ.33 ರಷ್ಟು ಪ್ರವೇಶಾತಿ ನಿಗದಿಪಡಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ ಮಾಡಲಾಯಿತು.

ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ವರ್ಟಿಕಲ್‌ ಶಾಲೆ ಪ್ರಾರಂಭಿಸುವ ಕುರಿತು ಪರಿಶೀಲನೆ ಮಾಡುವಂತೆ, ಸೈನಿಕ ಶಾಲೆಯಲ್ಲಿ ಖಾಯಂ ಶಿಕ್ಷಕರ ನೇಮಕಾತಿಗೆ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

ಪ್ರಾಧಿಕಾರದಿಂದ ಸಂಗೊಳ್ಳಿ ರಾಯಣ್ಣ ಸ್ಮಾರಕಗಳ ಅಭಿವೃದ್ಧಿ ಕುರಿತಂತೆ, ಸೌಲಭ್ಯ ಕಲ್ಪಿಸುವ ಕುರಿತಂತೆ ನೀಲ ನಕಾಶೆ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಅವರಿಗೆ ಸಿಎಂ ಸೂಚನೆ ನೀಡಿದರು. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಈ ಕುರಿತು ಪರಿಶೀಲಿಸಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ರೂ.75.29 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಬಹುತೇಕ ಅಂತಿಮ ಹಂತದಲ್ಲಿದ್ದು, ನವೆಂಬರ್‌ ಎರಡನೇ ವಾರದ ಒಳಗಾಗಿ ಎಲ್ಲ ಕಾಮಗಾರಿ ಪೂರ್ಣಗೊಳಿಸಬೇಕು. ನಂದಗಢದಲ್ಲಿ ಕೆರೆ ಅಭಿವೃದ್ಧಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸ್ಥಾಪನೆಯ ಕಾಮಗಾರಿಗಳನ್ನೂ ಇದೇ ಗಡುವಿನೊಳಗೆ ಪೂರ್ಣಗೊಳಿಸಲು ಸಿಎಂ ಸೂಚಿಸಿದರು.

ಸಚಿವರಾದ ಸಚಿವರಾದ ಶಿವರಾಜ ತಂಗಡಗಿ, ಬೈರತಿ ಸುರೇಶ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ, ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X