ಗಣಿ ಗುತ್ತಿಗೆ ಸಮಸ್ಯೆ ಬಗೆಹರಿಸಲು ಏಕಗವಾಕ್ಷಿ ಮಾದರಿ ವ್ಯವಸ್ಥೆ ರೂಪಿಸಲು ಸಿಎಂ ಸೂಚನೆ

Date:

ಗಣಿ ಗುತ್ತಿಗೆ ಸಂಸ್ಥೆಗಳಿಗೆ ಅರಣ್ಯ ತೀರುವಳಿ ಮತ್ತಿತರ ಸಮಸ್ಯೆಗಳನ್ನು ಏಕಗವಾಕ್ಷಿ ವ್ಯವಸ್ಥೆ ಮಾದರಿಯಲ್ಲಿ ಬಗೆಹರಿಸಲು ವ್ಯವಸ್ಥೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

- Advertisement -

ರಾಜ್ಯದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವ್ಯಾಪ್ತಿಯ ಸಂಸ್ಥೆಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜ್ಯದಲ್ಲಿ ಗಣಿ ಗುತ್ತಿಗೆ ಪಡೆದಿರುವ ಸಂಸ್ಥೆಗಳಿಗೆ ಅರಣ್ಯ ಇಲಾಖೆ ತೀರುವಳಿ ಮತ್ತಿತರ ಅನುಮತಿ ಪತ್ರಗಳನ್ನು ನೀಡಲು ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಗಣಿ ಮತ್ತು ಭೂವಿಜ್ಞಾನ, ಕಂದಾಯ ಹಾಗೂ ಅರಣ್ಯ ಇಲಾಖೆಯ ಸಚಿವರು, ಅಧಿಕಾರಿಗಳು ಪ್ರತಿ ತಿಂಗಳು ಇಲ್ಲವೆ ಎರಡು ತಿಂಗಳಿಗೆ ಒಮ್ಮೆ ಸಭೆ ನಡೆಸಿ ಏಕಗವಾಕ್ಷಿ ವ್ಯವಸ್ಥೆಯ ಮಾದರಿಯಲ್ಲಿ ಇತ್ಯರ್ಥಪಡಿಸುವಂತೆ ಮುಖ್ಯಮಂತ್ರಿ ತಿಳಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ತೀರುವಳಿ ಪಡೆಯಲು ಬಹಳಷ್ಟು ಪ್ರಕರಣಗಳು ಬಾಕಿ ಇರುವ ಕುರಿತು ಚರ್ಚಿಸಲಾಯಿತು. ಇದಕ್ಕೆ ಗಣಿ ಗುತ್ತಿಗೆ ಪಡೆದ ಸಂಸ್ಥೆಗಳು ಅರಣ್ಯೀಕರಣಕ್ಕೆ ಪರ್ಯಾಯ ಭೂಮಿ ನೀಡದೆ ಇರುವುದು ಕಾರಣವೆಂದು ಗುರುತಿಸಲಾಯಿತು.

ಆನೆಗಳು ಮತ್ತಿತರ ವನ್ಯಜೀವಿಗಳ ಉಪಟಳದಿಂದಾಗಿ ಕೃಷಿ ಭೂಮಿ ಮಾರಲು ಸಿದ್ಧರಿರುವ ರೈತರು ಅರಸೀಕರೆ ಮತ್ತು ರಾಜ್ಯದ ಇತರ ಕೆಲವು ಭಾಗಗಳಲ್ಲಿದ್ದಾರೆ. ಇಂತಹ ರೈತರಿಗೆ ಈ ಸಂಸ್ಥೆಗಳು ಜಮೀನು ಖರೀದಿಸಿ ಅರಣ್ಯೀಕರಣಕ್ಕೆ ಒದಗಿಸಲು ಅನುವು ಮಾಡಿಕೊಡುವಂತೆ ಮುಖ್ಯಮಂತ್ರಿ ಸೂಚಿಸಿದರು.

ರಾಜ್ಯದಲ್ಲಿ ಖನಿಜ ಅನ್ವೇಷಣೆಯನ್ನು ಭಾರತ ಸರ್ಕಾರಿ ಸ್ವಾಮ್ಯದ ಕೆಐಓಸಿಎಲ್‌ ಮತ್ತು ಎಂಇಸಿಎಲ್‌ ಮೂಲಕ ಕೈಗೊಳ್ಳಲು ಅನುಮತಿಗಾಗಿ ಭಾರತ ಸರ್ಕಾರಕ್ಕೆ ಪ್ರವೇಶ್‌ ಪೋರ್ಟಲ್‌ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಗಳಿಗೆ ಇರುವ ಆಕ್ಷೇಪಣೆಗಳನ್ನು ಸರಿಪಡಿಸಿ ತ್ವರಿತವಾಗಿ ತೀರುವಳಿ ಪಡೆಯುವಂತೆ ಈ ಸಂಸ್ಥೆಗಳೊಂದಿಗೆ ಚರ್ಚಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದೆ ಅಕ್ರಮ ಗಣಿಗಾರಿಕೆಯಿಂದ ಜಪ್ತಿ ಮಾಡಿರುವ 2.7 ದಶಲಕ್ಷ ಮೆಟ್ರಿಕ್‌ ಟನ್‌ ಅದಿರು ಅರಣ್ಯ ಪ್ರದೇಶದಲ್ಲಿದ್ದು, ಇವುಗಳ ವಿಲೇವಾರಿಗೆ ಕಾನೂನು ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲು ನಿರ್ದೇಶಿಸಿದರು.

ಈ ಸುದ್ದಿ ಓದಿದ್ದೀರಾ? ಮಣಿಪುರಕ್ಕೆ ಹೋಗದ ಮಹಿಳಾ ಆಯೋಗ ಉಡುಪಿಗೆ ಬಂದಿದೆ: ಡಾ. ಜಿ ಪರಮೇಶ್ವರ್‌

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಟಾಸ್ಕ್‌ ಫೋರ್ಸ್‌ ಅಡಿ ಬರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು. ಕಲ್ಲುಗಣಿ ಗುತ್ತಿಗೆದಾರರು ನಿಯಮಗಳ ಉಲ್ಲಂಘನೆ ಮಾಡಿರುವುದಕ್ಕೆ ವಿಧಿಸಿರುವ ದಂಡ ಸಂಗ್ರಹಿಸಲು ಒಟಿಎಸ್‌ ಯೋಜನೆ ಜಾರಿಗೆ ತರುವ ಕುರಿತ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಸೂಚಿಸಿದರು.

ಅರಣ್ಯ ಸಚಿವ ಈಶ್ವರ ಖಂಡ್ರೆ, ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕಟಾರಿಯಾ ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...