ಸಿಎಂ ಜನಸ್ಪಂದನ 2.0 | 11 ದಿನದಲ್ಲಿ 14,685 ಅರ್ಜಿಗಳ ಪೈಕಿ 4,321 ಅರ್ಜಿ ವಿಲೇವಾರಿ ಯಶಸ್ವಿ: ಎಲ್ ಕೆ ಅತೀಕ್‌

Date:

ಇತ್ತೀಚೆಗೆ ವಿಧಾನಸೌಧ ಮುಂಭಾಗ ನಡೆದ ಮುಖ್ಯಮಂತ್ರಿಯವರ ಜನಸ್ಪಂದನ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಸ್ವೀಕರಿಸಿದ ಅರ್ಜಿಗಳ ಸಕಾರಾತ್ಮಕ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್‌ ಅವರು ಸೂಚಿಸಿದರು.

- Advertisement -

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜನಸ್ಫಂದನ ಕಾರ್ಯಕ್ರಮದ ಪರಾಮರ್ಶೆಗಾಗಿ, ಆಯೋಜನೆಯಲ್ಲಿ ಭಾಗಿಯಾದ ಅಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಜನಸ್ಪಂದನ ಕಾರ್ಯಕ್ರಮದ ಯಶಸ್ಸಿನ ಕುರಿತು ಮಾನ್ಯ ಮುಖ್ಯಮಂತ್ರಿಯವರೂ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರು ಇದಕ್ಕೆ ಸಾಂಸ್ಥಿಕ ರೂಪ ನೀಡಿ ಇನ್ನಷ್ಟು ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಬೇಕು ಎಂದು ಅಪೇಕ್ಷಿಸಿದ್ದಾರೆ” ಎಂದರು.

ವಿಭಾಗ ಮಟ್ಟದಲ್ಲಿ ಜನಸ್ಪಂದನ

“ಜನಸ್ಪಂದನ ಕಾರ್ಯಕ್ರಮವನ್ನು ವಿಭಾಗ ಮಟ್ಟದಲ್ಲಿ ನಡೆಸುವ ಕುರಿತೂ ಸಹ ಚಿಂತನೆ ನಡೆದಿದೆ. ಮೊದಲಿಗೆ ಕಲಬುರ್ಗಿಯಲ್ಲಿ ವಿಭಾಗಮಟ್ಟದ ಜನಸ್ಪಂದನ ನಡೆಸಲು ಉದ್ದೇಶಿಸಿದೆ. ವಿಭಾಗ ಮಟ್ಟದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಖುದ್ದು ಭಾಗವಹಿಸಲು ಸೂಚಿಸಲಾಗುವುದು” ಎಂದು ತಿಳಿಸಿದರು.

11 ದಿನದಲ್ಲಿ 4321 ಅರ್ಜಿ ವಿಲೇವಾರಿ

“ಮೊನ್ನೆ ಸ್ವೀಕರಿಸಲಾದ 14,685 ಅರ್ಜಿಗಳ ಪೈಕಿ 4321 ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನೂ ಶೀಘ್ರವೇ ವಿಲೇವಾರಿ ಮಾಡುವಂತೆ” ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

“ಮುಂದಿನ ಜನಸ್ಪಂದನ ಕಾರ್ಯಕ್ರಮಗಳನ್ನು ಇನ್ನಷ್ಟು ವ್ಯವಸ್ಥಿತವಾಗಿ ಆಯೋಜಿಸುವಂತೆ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣೆಯ ಈ ಕಾರ್ಯಕ್ರಮಗಳು ದೇಶಕ್ಕೇ ಮಾದರಿಯಾಗುವಂತೆ ನಡೆಯಬೇಕು” ಎಂದು ಅವರು ತಿಳಿಸಿದರು.

“ಜನಸ್ಪಂದನದಲ್ಲಿ ತಮ್ಮ ಅಹವಾಲುಗಳೊಂದಿಗೆ ಆಗಮಿಸುವ ಜನರ ಕುರಿತು ಕಾಳಜಿ ವಹಿಸಬೇಕು; ಅವರ ನೋವಿಗೆ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆಂಬ ಸಂತೃಪ್ತಿ ಅವರಲ್ಲಿ ಮೂಡಬೇಕು. ನಿಯಮಾನುಸಾರ ಅನುಷ್ಠಾನಗೊಳಿಸಲು ಸಾಧ್ಯವಿಲ್ಲದ ಅಹವಾಲುಗಳಿಗೆ ಸ್ಪಷ್ಟ ಹಿಂಬರಹ ನೀಡಬೇಕು. ಮನವಿದಾರರು ಪದೇ ಪದೇ ಜನಸ್ಪಂದನ ಕಾರ್ಯಕ್ರಮಕ್ಕೆ ಅದೇ ಅಹವಾಲಿನೊಂದಿಗೆ ಆಗಮಿಸುವಂತಾಗಬಾರದು” ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಅವರು ಜನಸ್ಪಂದನ ಕಾರ್ಯಕ್ರಮವನ್ನು ಮುಂದಿನ ಬಾರಿ ಇನ್ನಷ್ಟು ವ್ಯವಸ್ಥಿತವಾಗಿ ಆಯೋಜಿಸುವ ನಿಟ್ಟಿನಲ್ಲಿ ಇಂದಿನ ಸಭೆಯ ಚರ್ಚೆಯ ಅಂಶಗಳನ್ನು ಅಳವಡಿಸಿಕೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಇ-ಆಡಳಿತ ಇಲಾಖೆಯ ಕಾರ್ಯದರ್ಶಿ ಉಜ್ವಲ್‌ ಕುಮಾರ್‌ ಘೋಷ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...