ನಾಡಿನ ಶಕ್ತಿ ಕೇಂದ್ರ ವಿಧಾನಸೌಧ ಮುಂಭಾಗದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಸಾಗರವೇ ಹರಿದುಬಂದಿದೆ.
- Advertisement -
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದ್ದು, ಬೆಳಗ್ಗೆಯಿಂದಲೇ ಸಾವಿರಾರು ಜನ ತಮ್ಮ ಸಮಸ್ಯೆಯನ್ನು ಸಿಎಂ ಸಿದ್ದರಾಮಯ್ಯನವರ ಬಳಿ ಹೇಳಲು ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ
ಈ...
ಪೊಲೀಸ್ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್ ತಂತ್ರಜ್ಞಾನ, ಡಿಜಿಟಲ್ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್ ಆಗುತ್ತಿರುವ ಪೊಲೀಸ್ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...
ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
ಖುದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ಜನರ ಬಳಿ ಧಾವಿಸಿ ಅವವಾಲು ಸ್ವೀಕರಿಸುತ್ತಿದ್ದು, ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಿತ್ತಿದ್ದಾರೆ. ಸಂಜೆ 6ರವರೆಗೆ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.
ಪ್ರಜೆಗಳ ಪಡಿಪಾಟಲು ಸಾರುತ್ತಿರುವ ಚಿತ್ರಗಳು..
ಡಬ್ಬಲ್ ಡಿಗ್ರಿ ಮುಗಿಸಿರುವ ಬೆಂಗಳೂರಿನ ನಿವಾಸಿ ವಿಶಿಷ್ಠ ಚೇತನ ನವ್ಯಶ್ರೀ ಅವರು ತಾಯಿ ರಮಾಮಣಿ ಅವರ ಜತೆ ಬಂದು ಉದ್ಯೋಗಕ್ಕಾಗಿ CM ಗೆ ಮನವಿ ಮಾಡಿದರು. ಉದ್ಯೋಗ ಮೇಳದ ವೇಳೆ ಈ ಅರ್ಜಿಯನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.ರಾಯಚೂರಿನ ಮೂರು ವರ್ಷದ ಶುಶಾಂತ್ ಥಲೆಸ್ಸೆಮಿಯಾ ಕಾಯಿಲೆ ಗೆ ತುತ್ತಾಗಿದ್ದಾನೆ. ಈತನನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಕರೆತಂದ ತಾಯಿ ಲಲಿತಾ ಅವರು ಆರ್ಥಿಕ ಸಹಾಯವನ್ನು ಕೋರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಪರಿಹಾರ ನಿಧಿಯಿಂದ ನೆರವು ಒದಗಿಸಲಾಗುವುದು ಎಂದು ಅರ್ಜಿಯನ್ನು ಸ್ವೀಕರಿಸಿ ಭರವಸೆ ನೀಡಿದರು.ಬೆಂಗಳೂರಿನ ಜೆ.ಜೆ ನಗರ ನಿವಾಸಿ ಎಂ.ಶ್ರೀಧರ್ ಅವರ ಎರಡೂ ಮೂತ್ರಪಿಂಡಗಳು ವಿಫಲವಾಗಿದ್ದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಕೋರಿ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಇವರ ಸಮಸ್ಯೆಗೆ ಕೂಡಲೇ ಸ್ಪಂದಿಸಿ ಪರಿಹಾರ ನೀಡುವ ಭರವಸೆ ನೀಡಿದರು.ಬೆಂಗಳೂರಿನ ಮಹಾಭೋದಿ ಸಂಶೋಧನಾ ಕೇಂದ್ರ ಇವರು ಬೌದ್ಧ ಜನಾಂಗದ ಅಧ್ಯಾತ್ಮಿಕ ಗ್ರಂಥಾಲಯದ ನವೀಕರಣಕ್ಕಾಗಿ ೨೦ ಲಕ್ಷ ರೂ.ಗಳ ಅನುದಾನ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬೆಂಗಳೂರಿನ ಮಹಾಬೋಧಿ ಲುಂಬಿನಿ ಬುದ್ಧ ವಿಹಾರ ಸಂಸ್ಥೆಯವರು ೨೦೨೪-೨೫ ನೇ ಆಯವ್ಯಯದಲ್ಲಿ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ೧೦೦ ಕೋಟಿ ರೂ.ಗಳ ಅನುದಾನವನ್ನು ನೀಡಿ, ಬೌದ್ಧ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸುವುದಾಗಿ ಭರವಸೆ ನೀಡಿದರು.