ಸಿಎಂ ಜನಸ್ಪಂದನ | ಉದ್ಯಮಿಯ ನಿವೇಶನ ನೋಂದಣಿ ಮಾಡುವಂತೆ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ

Date:

Advertisements

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಫುಡ್ ಪಾರ್ಕಿನಲ್ಲಿ ಉದ್ಯಮಿ ಮಲ್ಲೇಶಪ್ಪ ಸಿದ್ದಪ್ಪ ಕಲ್ಲೂರ ಅವರು ನಿವೇಶನ ಖರೀದಿಗೆ ನಿಗದಿತ ಹಣ ಪಾವತಿ ಮಾಡಿ ಏಳು ವರ್ಷವಾದರು, ಇದುವರೆಗೆ ನೋಂದಣಿಯಾಗಿಲ್ಲ. ಕೂಡಲೇ ನಿವೇಶನ ಉದ್ಯಮಿದಾರರ ಹೆಸರಿಗೆ ನೋಂದಾಯಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ಸೂಚನೆ‌ ನೀಡಿದರು.

ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೂರ್ತಿ ದಿನ(ನ.27) ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂಬಂಧ ಅಹವಾಲಿನಲ್ಲಿ ಬರುವ ಸಮಸ್ಯೆಗಳಿಗೆ ತಕ್ಷಣವೇ ಪರಹಾರ ಕಂಡುಕೊಳ್ಳಲು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ‌ ಜಿಲ್ಲಾಮಟ್ಟದ ಅಧಿಕಾರಿಗಳು ಆನ್‌ಲೈನ್ ವಿಡಿಯೋ‌ ಸಂವಾದದಲ್ಲಿ ಭಾಗಿಯಾಗಿದ್ದಾರೆ.

ಕಲಬುರಗಿಯ ಅಗ್ರೋ ಫುಡ್ ಪಾರ್ಕ್ ಎಂ.ಡಿ. ಮಲ್ಲೇಶಪ್ಪ ಸಿದ್ದಪ್ಪ ಕಲ್ಲೂರ ಅವರು, “ಜೇವರ್ಗಿಯ ಫುಡ್ ಪಾರ್ಕಿನಲ್ಲಿ 2016ರಲ್ಲಿ ನಿವೇಶನ ಖರೀದಿಸಲಾಗಿದೆ. ಅದಕ್ಕೆ ಬೇಕಾದ ಪೂರ್ಣ ಹಣ ಪಾವತಿಸಿದೆ. ಇದುವರೆಗೆ ನಿವೇಶನ ತಮ್ಮ ಹೆಸರಿಗೆ ನೋಂದಣಿ ಆಗಿಲ್ಲ” ಎಂದು ಜನಸ್ಪಂದನದಲ್ಲಿ ಸಿ.ಎಂ ಬಳಿ ಅಳಲು ತೋಡಿಕೊಂಡರು. ವಿಡಿಯೋ ಸಂವಾದದಲ್ಲಿ ಕಲಬುರಗಿಯಿಂದ ಹಾಜರಿದ್ದ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರಿಗೆ ಕೂಡಲೆ ನಿವೇಶನ ನೊಂದಣಿ ಮಾಡಿಸುವಂತೆ ಸಿ.ಎಂ. ಅವರು ಸೂಚನೆ ನೀಡಿದರು.

Advertisements

cm janatadarshana

ಕಲಬುರಗಿ ತಾಲೂಕಿನ ಮೇಳಕುಂದಾ (ಬಿ) ಗ್ರಾಮದ ಮಮತಾ ಎನ್ನುವವರು, “ತಾವು‌ ಬಿ.ಎಫ್.ಟಿ, ಕಾಯಕ ಮಿತ್ರಾ ಹುದ್ದೆಗೆ 2022ರಲ್ಲಿ ಅರ್ಜಿ ಸಲ್ಲಿಸಿದ್ದು, ತಾಲೂಕ ಪಂಚಾಯತ್ ಇ.ಓ ಮತ್ತು ಜಿಲ್ಲಾ ಪಂಚಾಯತ್ ಸಿ.ಇ.ಓ ಅವರು ತಮ್ಮ ಅರ್ಜಿ ಪರಿಗಣಿಸುತ್ತಿಲ್ಲ. ದಯವಿಟ್ಟು ಉದ್ಯೋಗ ನೀಡಬೇಕೆಂದು ಸಿ.ಎಂ. ಅವರಿಗೆ ಮನವಿ ಮಾಡಿಕೊಂಡರು. ಈ ಬಗ್ಗೆ ಸೂಕ್ತವಾಗಿ ಪರಿಶೀಲಿಸುವಂತೆ ಸಿ.ಎಂ ಕಚೇರಿಯಿಂದ ಅರ್ಜಿ ಕಲಬುರಗಿಗೆ ರವಾನಿಸಲಾಗಿದೆ.

ಕುರುಬರಿಗೆ ಪೂಜೆ ಮಾಡಲು ಅವಕಾಶ ಕೊಡಿ

ಇನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ಕಲಬುರಗಿ ತಾಲೂಕಿನ ಮೇಳಕುಂದಾ(ಬಿ) ಗ್ರಾಮದಲ್ಲಿ ಕುರುಬ ಸಮುದಾಯಕ್ಕೆ ಸೇರಿದ ಸರ್ವೆ ನಂ.114ರಲ್ಲಿ 30 ಎಕರೆ ಪ್ರದೇಶದಲ್ಲಿ ಶ್ರೀ ಮಾಳಿಂಗರಾಯ ದೇವಸ್ಥಾನ ಇದ್ದು, ತಲೆ ತಲಾಂತರದಿಂದ ಕುರು ಸಮುದಾಯದವರು ದೇವಸ್ಥಾನದ ಪೂಜೆ ಕಾರ್ಯ ಮಾಡಿಕೊಂಡು ಬಂದಿದ್ದಾರೆ. ಆದರೆ ಇತ್ತೀಚೆಗೆ ಅನ್ಯ ಸಮುದಾಯದವರು ಇದನ್ನು ಆಕ್ರಮಿಸಿಕೊಂಡು, ಕುರುಬ ಸಮುದಾಯದ ಪೂಜಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು‌ ನಿಯಂತ್ರಿಸಿ ಕುರುಬ ಸಮುದಾಯದವರಿಗೆ ಮೊದಲಿನಂತೆ ದೇವಸ್ಥಾನದಲ್ಲಿ ಪೂಜೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಶ್ರೀ ಮಾಳಿಂಗರಾಯ ದೇವಸ್ಥಾನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾದೇವಪ್ಪ ಮುತ್ಯಾ ಅವರು ಸಿ.ಎಂ. ಬಳಿ ಮನವಿ ಮಾಡಿದ್ದರು. ಈ ಸಂಬಂಧ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸಿ.ಎಂ. ಕಚೇರಿಯಿಂದ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಲಾಯಿತು.

dc tarannum
ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್

ಒತ್ತುವರಿ, ರಸ್ತೆ ನಿರ್ಮಾಣ, ಗೃಹ ಲಕ್ಣ್ಮೀ ಯೋಜನೆಯಡಿ ಹಣ ಬಂದಿಲ್ಲ, ಪಡಿತರ ಸಮಸ್ಯೆ, ವರ್ಗವಾದರು ಇನ್ನು ಬಿಡುಗಡೆ ಮಾಡಿಲ್ಲ ಹೀಗೆ ಅನೇಕ ಸಮಸ್ಯೆಗಳು ಅಹವಾಲಿನಲ್ಲಿ ಕೇಳಿಬಂದವು. ರಾಜ್ಯದಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾಮಟ್ಟದ ಇತರೆ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗಿಯಾಗಿದ್ದಾರೆ.

ಪ್ರತಿಯೊಬ್ಬ ಅರ್ಜಿದಾರರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸಿದ ಮುಖ್ಯಮಂತ್ರಿಗಳು ನೇರವಾಗಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಸಮಸ್ಯೆ ಪರಿಹಾರಕ್ಕೆ ಸೂಚಿಸಿದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿವಿಧ ಇಲಾಖೆವಾರು ಸುಮಾರು 1,147 ಅರ್ಜಿ ಸಲ್ಲಿಕೆಯಾಗಿದ್ದು, ಇದರಲ್ಲಿ ತಕ್ಷಣವೇ 20 ಅರ್ಜಿಗಳನ್ನು ಸ್ಥಳದಲ್ಲಿ ಪರಿಹರಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X