ಸಿಎಂ ಜನತಾ ದರ್ಶನ | 12,372 ಸಾವಿರ ಅರ್ಜಿ ಸ್ವೀಕಾರ; ಕಂದಾಯ ಇಲಾಖೆಯದ್ದೇ ಹೆಚ್ಚು!

Date:

ಬೆಂಗಳೂರಿನ ವಿಧಾನಸೌಧದ ಮುಂಭಾಗ ಇಂದು (ಫೆ.8) ಬೆಳಗ್ಗೆಯಿಂದ ಆಯೋಜಿಸಲಾಗಿದ್ದ ಎರಡನೇ ರಾಜ್ಯಮಟ್ಟದ ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12,372 ಅರ್ಜಿಗಳನ್ನು ಸ್ವೀಕರಿಸಿ, ನೋಂದಾಯಿಸಿಕೊಳ್ಳಲಾಗಿದೆ ಎಂದು ಸಿಎಂ ಕಚೇರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ ಎಂದು ತಿಳಿಸಿದ್ದಾರೆ.

ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳು
ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ 3,150 ಅರ್ಜಿಗಳು ಸ್ವೀಕಾರವಾಗಿದೆ. ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1,500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ( ಇ- ಆಡಳಿತ), ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆ ಸೇರಿದಂತೆ ಈ ಐದು ಇಲಾಖೆಗಳಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಒಂದು ತಿಂಗಳೊಳಗೆ ಅರ್ಜಿ ವಿಲೇವಾರಿ ಮಾಡಿ: ಸಿಎಂ ಖಡಕ್ ಸೂಚನೆ

ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಹೆಚ್ಚಾಗಿ ಕಂದಾಯ ಇಲಾಖೆಗೆ ಸಂಬಂಧಪಟ್ಟ ಅರ್ಜಿಗಳೇ ಬಂದಿವೆ. ಒಂದು ತಿಂಗಳೊಳಗೆ ಜನಸ್ಪಂದನೆ ಅರ್ಜಿ ಅಹವಾಲುಗಳನ್ನು ಬಗೆಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

“ಇಂದಿನ ಜನ ಸ್ಪಂದನೆಯಲ್ಲಿ ಸ್ವೀಕರಿಸಿರುವ ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ” ಎಂದು ಸಿಎಂ ಹೇಳಿಕೆ ನೀಡಿದರು.

“ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ಮುಖ್ಯಮಂತ್ರಿಗಳು ಖಡಕ್ ಸೂಚನೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ" ಎಂದು...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ...