ಸಿಎಂ ಜನತಾ ದರ್ಶನ: ಪಿಎಸ್‌ಐ ಪರೀಕ್ಷಾರ್ಥಿಗಳಿಂದ ಪ್ರತಿಭಟನೆ

Date:

  • ಮೂರು ತಿಂಗಳು ಕಾಲಾವಕಾಶ ಕೊಡುವಂತೆ ಆಗ್ರಹ
  • ಪಿಎಸ್​ಐ ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಸೋಮವಾರ ಬೆಳಿಗ್ಗೆ 9.30 ಗಂಟೆಯಿಂದ ಗೃಹ ಕಚೇರಿ ಕೃಷ್ಣದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

- Advertisement -

ಜನತಾ ದರ್ಶನದ ಹಿನ್ನೆಲೆಯಲ್ಲಿ 20 ಕೌಂಟರ್‌ಗಳನ್ನು ತೆರೆಯಲಾಗಿದ್ದು, ನೂರಕ್ಕೂ ಹೆಚ್ಚು ಅಧಿಕಾರಿಗಳು ಇರಲಿದ್ದಾರೆ. ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ. ಜನರ ಸಮಸ್ಯೆಗಳು ಹಾಗೂ ಅವಹಾಲುಗಳನ್ನು ದಾಖಲೀಕರಣಗೊಳಿಸಲು ಹಲವು ತಂಡಗಳಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪಿಎಸ್‌ಐ ಪರೀಕ್ಷಾರ್ಥಿಗಳು ಆಗಮಿಸಿ, ಪರೀಕ್ಷೆ ಮುಂದೂಡುವಂತೆ ಮನವಿ ನೀಡಲು ಮುಂದಾದರು. ಕೆಲವರು ಪ್ರತಿಭಟನೆಗೆ ಮುಂದಾದರು. ಕೂಡಲೇ ಸ್ಥಳದಲ್ಲಿ ನಿಯೋಜನೆಗೊಂಡಿದ್ದ ಪೊಲೀಸರು ಪ್ರತಿಭಟನೆ ಮಾಡುತ್ತಿದ್ದ ಪಿಎಸ್​ಐ ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಡಿವ ಜನರ ಮಹಾಧರಣಿ: ಶುರುವಾಗಲಿ ಜನಪರ್ಯಾಯ

ದಿನಾಂಕ ಮುಂದೂಡುವಂತೆ ಆಗ್ರಹ

ಡಿ. 23ಕ್ಕೆ ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ದಿನಾಂಕ ನಿಗದಿಯಾಗಿದೆ. ಈ ವಿಚಾರವಾಗಿ ಪರೀಕ್ಷಾರ್ಥಿಗಳಿಂದ ವಿರೋಧ ವ್ಯಕ್ತವಾಗಿದೆ. ಏಕಾಏಕಿ ದಿನಾಂಕ ನಿಗದಿ ಸರಿಯಲ್ಲ. 3 ತಿಂಗಳು ಕಾಲಾವಕಾಶ ಕೊಡುವಂತೆ ಆಗ್ರಹಿಸುತ್ತಿದ್ದಾರೆ.

“ಪಿಎಸ್‌ಐ ಪರೀಕ್ಷೆ ಅಕ್ರಮ ಬಯಲಿಗೆ ಎಳೆದಿದ್ದು ನಾವು. ಈ‌ ಸರ್ಕಾರ ಅಧಿಕಾರಕ್ಕೆ ಬರಲು ನಮ್ಮ ಪಾತ್ರ ದೊಡ್ಡದು. ಪರೀಕ್ಷೆಗೆ ಕೇವಲ 30 ದಿನಗಳ ಕಾಲಾವಕಾಶ ನೀಡಿದ್ದಾರೆ. ಕನಿಷ್ಠ 2 ತಿಂಗಳು ಕಾಲಾವಕಾಶ ನೀಡಬೇಕು” ಎಂದು ಪರೀಕ್ಷಾರ್ಥಿಗಳು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ ಸಾಂವಿಧಾನಿಕ ವಿರೋಧಾಭಾಸ!

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ...

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ಕೈಲೊಂದು ಕ್ಯಾಮೆರಾ, ಜೀವಂತ ಬದುಕಿಗೆ ಮುಖಾಮುಖಿ

ಸಿನೆಮಾದ ಶಕ್ತಿ ಅದರ ಹಿಂದೆ ನಿಂತಿರುವ ತಂತ್ರಜ್ಞರ ಸಂಖ್ಯೆಯಲ್ಲಾಗಲಿ, ದುಬಾರಿ ಉಪಕರಣಗಳಲ್ಲಾಗಲಿ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...