ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಸಾಲದ ಕೊರತೆ, ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಗುರುವಾರ ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು.

ಸಿಎಂ ಮನವಿಯಲ್ಲಿ ಏನಿದೆ?

2024-25ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ 35ಲಕ್ಷ ರೈತರಿಗೆ 25 ಸಾವಿರ ಕೋಟಿ ರೂ. ಅಲ್ಪಾವಧಿ ಕೃಷಿ ಸಾಲ ವಿತರಿಸುವ ಗುರಿಯನ್ನು ಹೊಂದಿದೆ. 2023-24ನೇ ಹಣಕಾಸು ವರ್ಷದಲ್ಲಿ ಅಲ್ಪಾವಧಿ ಸಹಕಾರಿ ಸಾಲ ವ್ಯವಸ್ಥೆಯಡಿ ಕರ್ನಾಟಕದಲ್ಲಿ 22,902 ಕೋಟಿ ರೂ. ಅಲ್ಪಾವಧಿ ಕೃಷಿ ಸಾಲವನ್ನು ವಿತರಿಸಲಾಗಿದೆ.

Advertisements

2024-25ನೇ ಸಾಲಿನಲ್ಲಿ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅಲ್ಪಾವಧಿ ಸಹಕಾರಿ ಸಾಲ ವ್ಯವಸ್ಥೆಯಡಿ 9,162 ಕೋಟಿ ರೂ. ಕೃಷಿ ಸಾಲ ಮಿತಿಗೆ ಅನುಮೋದನೆ ನೀಡುವಂತೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ ನಬಾರ್ಡ್‌ಗೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು.

2023-24ನೇ ಸಾಲಿನಲ್ಲಿ ನಬಾರ್ಡ್‌ ಕೃಷಿ ಚಟುವಟಿಕೆಗಳಿಗೆ 5,600 ಕೋಟಿ ರೂ. ಮೊತ್ತದ ರಿಯಾಯಿತಿ ದರದ ಸಾಲದ ಮಿತಿಗೆ ಅನುಮೋದನೆ ನೀಡಿತ್ತು. 2024-25ನೇ ಸಾಲಿನಲ್ಲಿ 9,162 ಕೋಟಿ ರೂ.ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರೂ, ನಬಾರ್ಡ್‌ ಕೃಷಿ ಚಟುವಟಿಕೆಗಳಿಗೆ ಕೇವಲ 2,340 ಕೋಟಿ ರೂ. ರಿಯಾಯಿತಿ ದರದ ಸಾಲವನ್ನು ಅನುಮೋದಿಸಿದೆ. ಇದು ಕಳೆದ ವರ್ಷಕ್ಕಿಂತ ಶೇ.58ರಷ್ಟು ಕಡಿಮೆಯಾಗಿದೆ. ಆರ್‌ಬಿಐ ಸಾಮಾನ್ಯ ಸಾಲದ ಮಿತಿ (ಎಲ್ಒಸಿ)ಯನ್ನು ಕಡಿಮೆಗೊಳಿಸಿರುವುದೇ ಪ್ರಸ್ತುತ ವರ್ಷ ರಿಯಾಯಿತಿ ದರದ ಸಾಲದ ಮಿತಿಯನ್ನು ಕಡಿಮೆಗೊಳಿಸಲು ಕಾರಣ ಎಂದು ನಬಾರ್ಡ್‌ ಮಾಹಿತಿ ನೀಡಿದೆ.

ನಬಾರ್ಡ್‌ ಕರ್ನಾಟಕ ರಾಜ್ಯಕ್ಕೆ ಅನುಮೋದಿಸಿರುವ ಕೃಷಿ ಸಾಲದ ಮಿತಿ ವಿವರ

ನಬಾರ್ಡ್‌ ಸಾಲ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಯಾಕಿಲ್ಲ?

ಕರ್ನಾಟಕದಲ್ಲಿ ಈ ಬಾರಿ ಉತ್ತಮ ಮಾನ್ಸೂನ್‌ ಮಳೆಯಾಗಿದ್ದು, ರೈತರು ಕೃಷಿ ಸಹಕಾರಿ ಚಟುವಟಿಕೆಗಳಿಗೆ ರಿಯಾಯಿತಿ ದರದ ಸಾಲದ ಮಿತಿಯನ್ನು ಹೆಚ್ಚಿಸುವಂತೆ ಬೇಡಿಕೆ ಇರಿಸಿದ್ದಾರೆ. ಆದರೆ ಕರ್ನಾಟಕಕ್ಕೆ 2024-25ನೇ ಸಾಲಿಗೆ ರಿಯಾಯಿತಿ ದರದ ಸಾಲದ ಮಿತಿಯನ್ನು ಕಡಿತಗೊಳಿಸಿರುವುದು ಅಲ್ಪಾವಧಿ ಕೃಷಿ ಸಹಕಾರಿ ಸಾಲದ ವಿತರಣೆ ಮೇಲೆ ಗಂಭೀರ ಪರಿಣಾಮ ಬೀರಲಿದೆ.

ಈ ಎಲ್ಲ ಹಿನ್ನೆಲೆಯಲ್ಲಿ, ಕರ್ನಾಟಕದ ರೈತರ ಹಿತದೃಷ್ಟಿಯಿಂದ ಅವರು ಉತ್ತಮ ಬೆಳೆಯನ್ನು ಬೆಳೆಯಲು ಅನುಕೂಲವಾಗುವಂತೆ 2024-25 ನೇ ಸಾಲಿನಲ್ಲಿ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವಂತೆ ನಬಾರ್ಡ್‌ ಹಾಗೂ ಆರ್‌ಬಿಐಗೆ ದಯವಿಟ್ಟು ನಿರ್ದೇಶನ ನೀಡಬೇಕು ಎಂದು ಸಿದ್ದರಾಮಯ್ಯ ಕೋರಿದ್ದಾರೆ.

ಮನವಿ ಸಲ್ಲಿಸುವ ವೇಳೆ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X