ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್, ಶ್ರವಣ ಸಮಸ್ಯೆ ಪತ್ತೆ ಹಚ್ಚುವುದು ನಿಜಕ್ಕೂ ದೊಡ್ಡ ಸಾಧನೆ: ಸಿಎಂ ಸಿದ್ದರಾಮಯ್ಯ

Date:

ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ ‘ವಜ್ರ ಮಹೋತ್ಸವ ಕಾರ್ಯಕ್ರಮ’ದಲ್ಲಿ ಮಾತನಾಡಿದ ಸಿಎಂ, “ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ಸರ್ಕಾರ ಈಗಾಗಲೇ 10 ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ದರಿದ್ದೇವೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

“ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯು (AIISH), ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಏಷ್ಯಾದ ಅತ್ಯುತ್ತಮ ಸಂಸ್ಥೆಗಳಲ್ಲೊಂದಾಗಿರುವುದು ನಮ್ಮ ಜಿಲ್ಲೆಯ ಮತ್ತು ರಾಜ್ಯದ ಹೆಮ್ಮೆ. ಧ್ವನಿಯಿಲ್ಲದವರಿಗೆ ಧ್ವನಿಯಾಗಿರುವ, ಕಿವಿ ಕೇಳದೆ ಮೌನವಾಗಿರುವವರಿಗೆ ಮಾತಿನ ಚೈತನ್ಯ ತುಂಬಿರುವ ಇಂಥ ಸಂಸ್ಥೆಯು ಮೈಸೂರಿನಲ್ಲಿರುವುದು ಹಾಗೂ ವಜ್ರ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ” ಎಂದರು.

“ಮನುಷ್ಯರಿಗೆ ದೇಹದ ಎಲ್ಲಾ ಅಂಗಗಳು ಮುಖ್ಯವಾದರೂ ಕಣ್ಣು, ಕಿವಿಗಳು ಅತಿ ಮುಖ್ಯವಾದ ಅಂಗಗಳಾಗಿವೆ. ದೃಷ್ಟಿ ಮತ್ತು ಶಬ್ಧಗಳ ಗ್ರಹಿಕೆಯು ಮನುಷ್ಯರ ಮಾತುಗಳನ್ನು ರೂಪಿಸುತ್ತವೆ ಹಾಗೂ ನಿಯಂತ್ರಿಸುತ್ತವೆ. 2011ರ ರಾಷ್ಟ್ರೀಯ ಜನಗಣತಿಯ ಪ್ರಕಾರ ರಾಜ್ಯದಲ್ಲಿ 3.3 ಲಕ್ಷ ಜನರು ಮಾತು ಬಾರದವರು ಹಾಗೂ ಕಿವಿ ಕೇಳಿಸದವರಿದ್ದಾರೆ. ಶೇ.0.5ರಷ್ಟಿರುವ ಈ ಅಸಹಾಯಕರು ನಮಗೆ ಅಂಕಿ ಸಂಖ್ಯೆಗಳಲ್ಲ, ಜೀವಂತ ಮನುಷ್ಯರ ನಿರಂತರ ಕಷ್ಟದ ಉದಾಹರಣೆಗಳು. ಹಾಗಾಗಿ ಈ ಸಮಸ್ಯೆಯಿರುವವರನ್ನು ಅತ್ಯಂತ ಎಚ್ಚರಿಕೆಯಿಂದ ಕಾಪಾಡಿಕೊಳ್ಳುವುದು ನಾಗರಿಕ ಸಮಾಜದ ಹಾಗೂ ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ಹೇಳಿದರು.

“1966ರಲ್ಲಿ ಮೈಸೂರಿನಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಅಭಿವೃದ್ಧಿ, ಸಂಶೋಧನೆ, ಚಿಕಿತ್ಸೆ, ಪುನರ್ವಸತಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲೂ ಸೇವೆ ಒದಗಿಸುತ್ತಿರುವ ಮಹತ್ವದ ರಾಷ್ಟ್ರೀಯ ಸಂಸ್ಥೆಯಾಗಿದೆ” ಎಂದು ಹೇಳಿದ ಸಿಎಂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆಯನ್ನು ಗಳಿಸಿರುವ ಈ ಸಂಸ್ಥೆಯನ್ನು ವಿಶ್ವ ಆರೋಗ್ಯ ಸಂಸ್ಥೆಯು Centre of Excellence ಎಂದು ಗುರುತಿಸಿದ್ದರೆ, ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು Science and Technology Institute ಎಂದು ಗುರುತಿಸಿರುವುದನ್ನು ಸ್ಮರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಪೊಲೀಸರಿಗೆ ಸಾಮಾಜಿಕ ಬದ್ಧತೆ ಮುಖ್ಯ, ಅಂದಾಗ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿದ್ದರಾಮಯ್ಯ

ಈ ಸಂಸ್ಥೆಯ ಹೊರವಲಯ ಸೇವಾ ಕೇಂದ್ರಗಳು ಮತ್ತು ನವಜಾತ ಶಿಶು ತಪಾಸಣೆ ಘಟಕಗಳಿಗೆ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸ್ಥಳಾವಕಾಶ ಒದಗಿಸುತ್ತಿದೆ ಎಂದರು.

“ನಮ್ಮ ರಾಜ್ಯ ಸರ್ಕಾರದ ಪ್ರಾಯೋಜಿತ ಕಾಕ್ಲಿಯರ್ ಇಂಪ್ಲಾಂಟ್ ಕಾರ್ಯಕ್ರಮವಾದ ‘ಶ್ರವಣ ಸಂಜೀವಿನಿ’ ಯೋಜನೆಗೆ ರಾಜ್ಯ ಸರ್ಕಾರವು 2024-25ರ ಬಜೆಟ್ಟಿನಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗೆ ದುಬಾರಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಒದಗಿಸಲು 32 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಈ ಸಂಸ್ಥೆಯ ಕ್ಲಿನಿಕಲ್ ಮತ್ತು ಪುನರ್ವಸತಿ ಕಾರ್ಯವನ್ನು ಇನ್ನಷ್ಟು ವಿಸ್ತರಿಸಲು ಪೂರಕವಾಗಿ ವರುಣಾದಲ್ಲಿ ನಮ್ಮ ಸರ್ಕಾರ ಉಚಿತವಾಗಿ 10 ಎಕರೆ ಜಮೀನನ್ನು ಸಂಸ್ಥೆಗೆ ನೀಡಿದೆ. ಈ ಸಂಸ್ಥೆಯ ಅಂಗಳದಲ್ಲಿ ರೂ.2.55 ಕೋಟಿ ವೆಚ್ಚದಲ್ಲಿ ಮೈಸೂರು ಮಹಾನಗರ ಪಾಲಿಕೆಯು ಅಂಗವಿಕಲ ಮಕ್ಕಳಿಗೆ ಆಂಫಿಥಿಯೇಟರ್ ನಿರ್ಮಾಣ, ಅಂಗವಿಕಲ ಸ್ನೇಹಿ ಸಲಕರಣೆಗಳು, ಉದ್ಯಾನವನ ಅಭಿವೃದ್ಧಿ, ಮಾತು ಬಾರದ, ಕಿವಿ ಕೇಳದ ಮಕ್ಕಳಿಗೆ ನಿರೀಕ್ಷಣಾ ಕೊಠಡಿ ಮತ್ತು ಮ್ಯೂಸಿಯಂ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ” ಎಂದು ಹೇಳಿದರು.

“ಮಗು ಭ್ರೂಣಾವಸ್ಥೆಯಲ್ಲಿರುವಾಗಲೇ ಅದರ ಸಂವಹನದ ಸಮಸ್ಯೆಗಳನ್ನು ಪತ್ತೆ ಹಚ್ಚುವ ತಂತ್ರಜ್ಞಾನ ಗಳಿಸಲು ನಮಗೆ ಸಾಧ್ಯವಾಗಿರುವುದು ಇಂತಹ ಪ್ರೀಮಿಯರ್ ಸಂಸ್ಥೆಗಳಿಂದಾಗಿ ಮಾತ್ರ. ಸಮಸ್ಯೆಯನ್ನು ಗುರುತಿಸಿ ಚಿಕಿತ್ಸೆ ನೀಡುವ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಮಹತ್ತರ ಕೆಲಸವನ್ನು ಈ ಸಂಸ್ಥೆಯು ಮಾಡುತ್ತಿದೆ. ವಜ್ರ ಮಹೋತ್ಸವದ ಈ ಸಂದರ್ಭದಲ್ಲಿ – ಈ ಸಂಸ್ಥೆಯಲ್ಲಿದ್ದುಕೊಂಡು ಸ್ವಸ್ಥ ಸಮಾಜದ ಏಳಿಗೆಗಾಗಿ ದುಡಿದ-ದುಡಿಯುತ್ತಿರುವ ತಜ್ಞರು, ಪ್ರಾಧ್ಯಾಪಕರು, ಸಹಾಯಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರನ್ನೂ ಕೃತಜ್ಞತೆಯಿಂದ ಸ್ಮರಿಸುತ್ತೇನೆ” ಎಂದರು.

ಹಾಗೆಯೇ, “60 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಈ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ವಾಕ್ ಮತ್ತು ಶ್ರವಣದೋಷದ ಸಮಸ್ಯೆಗಳು ಶಾಶ್ವತವಾಗಿ ಬಾರದಂತೆ ತಡೆಯಲು ಅಗತ್ಯವಿರುವ ಎಲ್ಲ ಸಂಶೋಧನೆಗಳನ್ನು ಕೈಗೊಂಡು ಜಗತ್ತಿಗೆ ಬೆಳಕು ನೀಡಲಿ” ಎಂದು ಆಶಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥೇವರ್ ಚಂದ್ ಗೆಹ್ಲೋಟ್, ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಖಾತೆ ಸಚಿವೆ ಅನುಪ್ರಿಯಾ ಪಟೇಲ್, ರಾಜ್ಯ ಸರ್ಕಾರದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...