ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ

Date:

Advertisements
  • ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ
  • ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್‌ಗಳ ಪತ್ತೆ ಹಚ್ಚಲು ಕ್ರಮ

ಪ್ರಜಾಪ್ರಭುತ್ವಕ್ಕೆ ಬೆದರಿಕೆ ಮತ್ತು ಸಮಾಜದ ಧ್ರುವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲ ನಿಯಮ ಹಾಗೂ ಕಾನೂನು ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಮಾಡಿದರು.

ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್‌ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

Advertisements

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆ

ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, SOPC ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣಾ ತಂಡವನ್ನು ಒಳಗೊಳ್ಳಲಿದೆ. ಹಾಗೂ ಸಾಮರ್ಥ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.

“ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲವಾಗುತ್ತದೆ” ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ಮುಂದುವರಿದು, “ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ. ಆರಂಭಿಕ ಹಂತದಲ್ಲಿ ಐ.ಟಿ ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೇ ಇರುವುದು ಸೂಕ್ತ” ಎಂದು ಖರ್ಗೆ ಅಭಿಪ್ರಾಯಪಟ್ಟರು.

“ಫೇಕ್ ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೇ ರಚಿಸಿ ಸಾಮರ್ಥ್ಯ ಹೆಚ್ಚಿಸುವ ಕೆಲಸ ಆಗಬೇಕು” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಸಚಿವ ಕೃಷ್ಣಭೈರೇಗೌಡ ಮಾತನಾಡಿ, “ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು” ಎಂದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ , ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X