ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿದ್ದಾರೆ : ಉಮ್ಮನ್ ಚಾಂಡಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

Date:

Advertisements

ಹಿರಿಯ ರಾಜಕೀಯ ಮುತ್ಸದ್ದಿ, ಕೇರಳದ ಮಾಜಿ ಮುಖ್ಯಮಂತ್ರಿ‌ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ‌ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.

Advertisements

1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು ಎಂದು ಸಿಎಂ ತಿಳಿಸಿದ್ದಾರೆ.

ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ‌ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು.‌ ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ‌ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ಚುಗೆ ಸೂಚಿಸಿದ್ದರು.

ಅವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ. ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಉಮ್ಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X