ಬೆಂಗಳೂರು ಸಂಚಾರಕ್ಕೆ 100 ನೂತನ ಬಿಎಂಟಿಸಿ ಬಸ್ ಲೋಕಾರ್ಪಣೆ

Date:

Advertisements

ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ಬಸ್‌ಗಳು ಬಿಎಂಟಿಸಿ ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್‌ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

“ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ಬಸ್‌ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀ‌ನ್‌ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ” ಎಂದರು.

Advertisements

“ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ” ಎಂದು ಹೇಳಿದರು.

“ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ” ಎಂದರು.

“ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ. ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ” ಎಂದು ತಿಳಿಸಿದರು.‌

“ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ” ಎಂದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X