ಅಂಬೇಡ್ಕರ್ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Date:

ಅಂಬೇಡ್ಕರ್ ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು (ಆ.8) ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

“ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಗಳಿಸಲು ಸಾಧ್ಯ ಎಂಬುದರಲ್ಲಿ ಅಂಬೇಡ್ಕರ್ ನಂಬಿಕೆಯಿರಿಸಿದ್ದರು” ಎಂದರು.

“ಅಂಬೇಡ್ಕರ್ ಅವರ ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ರವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ.‌ ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ” ಎಂದು ಹೇಳಿದರು.

ಆಗಸ್ಟ್ 8 ರಿಂದ 19 ವರೆಗೆ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ

“ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ವರೆಗೆ ಏರ್ಪಡಿಸಲಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಮಹತ್ವದ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ” ಎಂದರು.

12 ಲಕ್ಷ ಜನ ಆಗಮಿಸುವ ನಿರೀಕ್ಷೆ

“ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...