ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

Advertisements

ರಾಜ್ಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಬುಧವಾರ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು.

ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

Advertisements

ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.

ಸದ್ಯ ತೆಗೆದುಕೊಂಡಿರುವ ಕ್ರಮಗಳು

1 ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.

2 ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ.

3 ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.

4 ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.97,351.95 ಲಕ್ಷಗಳು ಅನುದಾನವಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X