ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Date:

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ(ಆಗಸ್ಟ್ 31) ಸಂಜೆ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

- Advertisement -

ಕುಮಾರಸ್ವಾಮಿ ಅವರು ಜ್ವರ, ನಿಶ್ಯಕ್ತಿ, ಆಯಾಸದಿಂದಾಗಿ ಜಯನಗರದ ಅಪೊಲೊ ಆಸ್ಪತ್ರೆಗೆ ಬುಧವಾರ (ಆ.30) ದಾಖಲಾಗಿದ್ದರು. ಸಿದ್ದರಾಮಯ್ಯ ಅವರೊಂದಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರೂ ಆಸ್ಪತ್ರೆಗೆ ತೆರಳಿ, ಕುಮಾರಸ್ವಾಮಿ ಅವರ ಯೋಗಕ್ಷೇಮ ವಿಚಾರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಸದ್ಯ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಾಳೆ (ಸೆ.1) ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ ಎಂ ದು ವೈದ್ಯರು ತಿಳಿಸಿದ್ದಾರೆ.

‘ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್‌ ಮೂಲಕ ಹಾರೈಸಿದ್ದರು.

ತಂದೆ ಆರೋಗ್ಯ ಸ್ಥಿರವಾಗಿದ್ದು, ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಕೆಲ ದಿನಗಳು ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದು, ಯಾರು ಆತಂಕಕ್ಕೆ ಒಳಗಾಗೋದು ಬೇಡ ಅಂತ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...