ಕೇಂದ್ರ ಸಚಿವ ನಿತಿನ್‌ ಗಡ್ಕರಿ – ಸಿಎಂ ಸಿದ್ದರಾಮಯ್ಯ ಭೇಟಿ; ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿದ್ದು, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಒತ್ತಾಯಿಸಿದ್ದಾರೆ.

- Advertisement -

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೇಂದ್ರ ಸಚಿವರನ್ನು ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಪ್ರಮುಖ ವಿಷಯಗಳು;

• ದಿನಕ್ಕೆ 10,000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳ ಉನ್ನತೀಕರಣ.

• ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣ.

• ಮೈಸೂರಿನ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣ

• ಮೈಸೂರು ರಿಂಗ್‌ ರಸ್ತೆಯಲ್ಲಿರುವ NH-275Kನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣ

• ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣ

• ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ

• ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆ ಸುಧಾರಣೆ

• ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ

• NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ

• ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ

• ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ

ಅಲ್ಲದೆ, ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಬೇಕೆಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ ಅವರು ಸೇರಿ ಮೊದಲಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಾರ್ಮ್‌-6 ಮೂಲಕ ಮರುನೋಂದಣಿ ಸಾಧ್ಯವಿದ್ದರೆ SIR ಏಕೆ? ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೈಬಿಡಲಾದ ಮತದಾರರು...

ದೆಹಲಿ ಸಿಜೆಪಿ ಪ್ರತಿಭಟನೆ ಬೆನ್ನಲ್ಲೇ ಹೋರಾಟಗಾರರ ವಿರುದ್ಧ ಮೂರು ಎಫ್‌ಐಆರ್ ದಾಖಲು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ (SIR) ಅಕ್ರಮ ನಡೆದಿದೆ ಎಂದು ಆರೋಪಿಸಿ,...

ದೆಹಲಿಯಲ್ಲಿ ಹೊಸ ಖಾಸಗಿ ಶಾಲೆಗಳ ಸ್ಥಾಪನೆ ನಿಯಮ ಸಡಿಲಿಕೆ: ಎರಡು ಕಡ್ಡಾಯ ಷರತ್ತುಗಳ ರದ್ದು

ಹೊಸ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಇರುವ ನಿಯಮಗಳನ್ನು ದೆಹಲಿ ಸರ್ಕಾರವು ಸಡಿಲಿಸಿದ್ದು,...