- ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದ ಬಳಿಕ ಉಭಯ ನಾಯಕರ ಮೊದಲ ಭೇಟಿ
- ಪ್ರಧಾನಿ ಮೋದಿ ಭೇಟಿ ವೇಳೆ ಸಿದ್ದರಾಮಯ್ಯ ಅಕ್ಕಿ ವಿಚಾರ ಪ್ರಸ್ತಾಪಿಸುವ ಸಾಧ್ಯತೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಉಭಯ ನಾಯಕರ ಮೊದಲ ಭೇಟಿ ಇದಾಗಿದ್ದು, ರಾಜಕೀಯ ಮತ್ತು ರಾಜ್ಯ ಯೋಜನೆ ಎರಡು ವಿಚಾರದಲ್ಲೂ ಸಹ ಈ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ವಿತರಿಸುವುದನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಜೀವಕ್ಕೆ ಕಂಟಕ ತರುತ್ತಿರುವ ಜೀವಜಲ; ಆಡಳಿತಶಾಹಿಯೇ ಹೊಣೆ
ಈ ಹಿಂದೆ ಅನ್ನಭಾಗ್ಯ ಯೋಜನೆ ಅಕ್ಕಿ ವಿಚಾರವಾಗಿ ಗೃಹ ಸಚಿವ ಅಮಿತ್ ಶಾ ಅವರನ್ನು ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇಂದು ಪ್ರಧಾನಿ ಮೋದಿ ಭೇಟಿ ವೇಳೆ ಅಕ್ಕಿ ವಿಚಾರವನ್ನು ಸಿದ್ದರಾಮಯ್ಯ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ. ಅಕ್ಕಿ ಯೋಜನೆಯಾದ ಅನ್ನ ಭಾಗ್ಯಕ್ಕಾಗಿ ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿಯನ್ನು ಪೂರೈಸಲು ಪ್ರಧಾನಿಗೆ ಮನವಿ ಮಾಡುವ ಸಾಧ್ಯತೆಯಿದೆ.
ಹಾಗೆಯೇ ನೀರಾವರಿ ಯೋಜನೆಗಳು, ಜಲ ಜೀವನ್ ಮಿಷನ್, ಎಂಎನ್‌ಆರ್‌ಇಜಿಎಸ್‌ಗೆ ಕೇಂದ್ರ ಸರ್ಕಾರ ಮತ್ತು ಹೆಚ್ಚುವರಿ ಹಣವನ್ನು ಹೆಚ್ಚಿಸುವಂತೆ ಮನವಿ ಮಾಡುವ ಸಾದ್ಯತೆ ಇದೆ. ಇನ್ನೂ ಪ್ರಧಾನಿ ಭೇಟಿ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಸಹ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.